Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 2026

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?
Home

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

Narasimha murder echoes: A call for revenge on social media?
Raghu ShettyBy Raghu ShettyJune 13, 2026Updated:June 13, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
http://a1suddi.com/wp-content/uploads/2026/06/kd.mp4

ಶಿವಮೊಗ್ಗ: ನಗರದ ಗಾಂಧಿಬಜಾರ್‌ನಲ್ಲಿ ಶುಕ್ರವಾರ ಸಂಜೆ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿರುವ ಕೆಲವು ಸ್ಟೇಟಸ್‌ಗಳು ಹೊಸ ಚರ್ಚೆಗೆ ಕಾರಣವಾಗಿವೆ. ನರಸಿಂಹನ ಆಪ್ತರು ಹಾಗೂ ಸಹಚರರೆಂದು ಹೇಳಲಾಗುತ್ತಿರುವ ಕೆಲವರು ಹಂಚಿಕೊಂಡಿರುವ ಪೋಸ್ಟ್‌ಗಳು ಪೊಲೀಸರ ಗಮನ ಸೆಳೆದಿವೆ.
ಮಾಹಿತಿಯ ಪ್ರಕಾರ, ನರಸಿಂಹನ ಆತ್ಮೀಯ ಸ್ನೇಹಿತ ಹಾಗೂ ರೌಡಿಶೀಟರ್ ಆಗಿರುವ ಕಾಡಾ ಕಾರ್ತಿಕ್ ಮತ್ತು ಮತ್ತೊಂದು ಕೊಲೆ ಪ್ರಕರಣದಲ್ಲಿ ಎ–2 ಆರೋಪಿಯಾಗಿರುವ ಬಜರಂಗಿ ನಿತಿನ್ ತಮ್ಮ ಇನ್‌ಸ್ಟಾಗ್ರಾಂ ಖಾತೆಗಳಲ್ಲಿ ಪ್ರತೀಕಾರದ ಸುಳಿವು ನೀಡುವ ರೀತಿಯ ಸ್ಟೇಟಸ್‌ಗಳನ್ನು ಪ್ರಕಟಿಸಿದ್ದಾರೆ ಎನ್ನಲಾಗಿದೆ.
ಸ್ಟೇಟಸ್‌ಗಳಲ್ಲಿ ನರಸಿಂಹ ಹತ್ಯೆಗೆ ಪ್ರತಿಕ್ರಿಯೆ ಹಾಗೂ ಪ್ರತೀಕಾರ ತೀರಿಸಿಕೊಳ್ಳುವ ಉಲ್ಲೇಖಗಳಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲೂ ಆತಂಕಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು ಮತ್ತು ಸಂದೇಶಗಳ ಮೇಲೂ ನಿಗಾ ವಹಿಸಿದ್ದು, ಯಾವುದೇ ಪ್ರಚೋದನಾತ್ಮಕ ಅಥವಾ ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ನರಸಿಂಹ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳು ಕಾರ್ಯಾಚರಣೆ ಮುಂದುವರಿಸಿದ್ದು, ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,311 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026395 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026356 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025298 Views
Don't Miss
Home

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

By Raghu ShettyJune 13, 20260

ಶಿವಮೊಗ್ಗ: ನಗರದ ಗಾಂಧಿಬಜಾರ್‌ನಲ್ಲಿ ಶುಕ್ರವಾರ ಸಂಜೆ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿರುವ ಕೆಲವು…

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.