- ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ: ಯುವತಿ ದುರ್ಮರ•
ಶಿವಮೊಗ್ಗ, ಮಾ.12: ನಗರದ McGann Hospital ಆವರಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ವಾಟರ್ ಟ್ಯಾಂಕರ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ.
ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ ಮೂಲದ ಲಾವಣ್ಯ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದ ಓವೇರಿಯಾ ಎಂಬ ಮತ್ತೊಬ್ಬ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ನೀರು ಪೂರೈಕೆ ಮಾಡಲು ಟ್ಯಾಂಕರ್ ಲಾರಿ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Subscribe to Updates
Get the latest creative news from FooBar about art, design and business.
ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ: ಯುವತಿ ದುರ್ಮರಣ
Medical student dies after being run over by tanker truck
