Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮನುಷ್ಯರು ಮಾಡುವ ತಪ್ಪಿಗೆ ಮೂಕಪ್ರಾಣಿಯನ್ನು ಹೊಣೆ ಮಾಡುವುದು ಎಷ್ಟು ಸರಿ?

October 26, 2026

ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ

October 24, 2026

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ಸಿಗಂದೂರು, ಚಂದ್ರಗುತ್ತಿ ದೇವಸ್ಥಾನಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ; ಸಚಿವರಿಂದ ವಿಶೇಷ ಪೂಜೆ
ಪ್ರಮುಖ ಸುದ್ದಿ

ಸಿಗಂದೂರು, ಚಂದ್ರಗುತ್ತಿ ದೇವಸ್ಥಾನಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ; ಸಚಿವರಿಂದ ವಿಶೇಷ ಪೂಜೆ

Raghu ShettyBy Raghu ShettyOctober 17, 2026Updated:October 17, 2026No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
– ಕೆಪಿಎಸ್ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ರಂಗ ಶಿಕ್ಷಕರ ನೇಮಕಾತಿಗೆ ಚಿಂತನೆ: ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ದಸರಾ ಹಾಗೂ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ, ರಂಗಭೂಮಿ ಕಲಾವಿದರ ಕುಟುಂಬಗಳಿಗೆ ಸಾಂತ್ವನ ಹೇಳಿ, ಹಿರಿಯ ಕಾಂಗ್ರೆಸ್ ಮುಖಂಡರ ಆರೋಗ್ಯ ವಿಚಾರಿಸಿದರು. ಸಾಗರ ತಾಲ್ಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗಾಗಿ ಆಯೋಜಿಸಲಾಗಿದ್ದ ಹತ್ತು ದಿನಗಳ ರಂಗನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹತ್ತು ಪ್ರಾಥಮಿಕ ಶಾಲೆಗಳ 300 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಆರಂಭವಾಗಲಿರುವ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲಾಭಿರುಚಿ ಮತ್ತು ರಂಗಭೂಮಿಯ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬ ಆಶಯ ವ್ಯಕ್ತಪಡಿಸಿದರು. ಸಿಗಂದೂರು ಭೇಟಿಗೂ ಮುನ್ನ ಸಚಿವ ಮಧು ಬಂಗಾರಪ್ಪ ಅವರು ಸೊರಬ ತಾಲ್ಲೂಕಿನ ಜಡೆ ಗ್ರಾಮಕ್ಕೆ ಭೇಟಿ ನೀಡಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಸೊರಬ ಪಟ್ಟಣದ ಐತಿಹಾಸಿಕ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಅತ್ಯಂತ ಕಲಾತ್ಮಕವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ಸುಂದರ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿಯನ್ನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಿದರು. ನಂತರ ಸೊರಬ ತಾಲ್ಲೂಕಿನ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತುರ್ತು ಕಾರಣಗಳಿಂದಾಗಿ ಶ್ರೀ ರೇಣುಕಾಂಬಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದಸರಾ ಸಮಿತಿಯ ಸದಸ್ಯರನ್ನು ಭೇಟಿಯಾಗಿ, ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಚರಿಸುವಂತೆ ಶುಭ ಹಾರೈಸಿದರು. ಈ ವೇಳೆ ದಸರಾ ಸಮಿತಿಯ ವತಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಿರಿಯ ರಂಗಕಲಾವಿದ ದೇವೇಂದ್ರಪ್ಪ ತಲಗುಂದ ಅವರ ಕುಟುಂಬಕ್ಕೆ ಸಾಂತ್ವನ ರಂಗಭೂಮಿಯ ಹಿರಿಯ ಕಲಾವಿದರೂ ಸಚಿವರ ಆಪ್ತರೂ ಆಗಿದ್ದ ದೇವೇಂದ್ರಪ್ಪ ತಲಗುಂದ ಅವರು ಶುಕ್ರವಾರ ನಿಧನರಾದ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ದೇವೇಂದ್ರಪ್ಪ ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ನನಗೆ ಹಾಗೂ ನಾಡಿನ ರಂಗಭೂಮಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದು ಸಂತಾಪ ಸೂಚಿಸಿದರು. ಹಾಗೆಯೇ ಇತ್ತೀಚೆಗೆ ನಿಧನರಾದ ಅಶೋಕ್ ಮರ್ಗಿ ಅವರ ತಂದೆ ರಾಮಪ್ಪ ಮರ್ಗಿ ಅವರ ಕುಟುಂಬದವರನ್ನು ಸೊರಬ ತಾಲ್ಲೂಕಿನ ಬರದವಳ್ಳಿಯಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದರು. ಹಿರಿಯ ಕಾಂಗ್ರೆಸ್ ನಾಯಕರ ಆರೋಗ್ಯ ವಿಚಾರಣೆ ಸೊರಬ ತಾಲ್ಲೂಕಿನ ಜಡೆಕೋಟೆಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ತಮ್ಮ ಆಪ್ತರಾದ ಬಸವಂತಪ್ಪ ಅವರ ನಿವಾಸಕ್ಕೆ ಸಚಿವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅವರೊಂದಿಗೆ ಕೆಲಕಾಲ ಕಳೆದು ಧೈರ್ಯ ತುಂಬಿದರು. ಅವರು ಶೀಘ್ರ ಗುಣಮುಖರಾಗಿ ಮತ್ತೆ ಎಂದಿನಂತೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಒಡನಾಡಿಯಾಗಿದ್ದ ಜಡೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಆರ್.ಎಸ್. ಈರಪ್ಪ ಅವರನ್ನು ಸಹ ಸಚಿವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಈರಪ್ಪ ಅವರ ಕುಟುಂಬದವರು ತೋರಿದ ಪ್ರೀತಿ ಮತ್ತು ವಿಶ್ವಾಸವನ್ನು ನಾನು ಎಂದಿಗೂ ಮರೆಯಲಾರೆ. ಬಂಗಾರಪ್ಪಾಜಿಯವರೊಂದಿಗೆ ಕಳೆದ ಕ್ಷಣಗಳನ್ನೆಲ್ಲ ನೆನಪಿನಲ್ಲಿಟ್ಟುಕೊಂಡಿರುವ ಇಂತಹ ಹಿರಿಯರ ಆಶೀರ್ವಾದ ಸದಾ ನನ್ನ ಮೇಲಿರಲಿ ಎಂದು ಆಶಿಸುತ್ತೇನೆ” ಎಂದು ಭಾವುಕರಾಗಿ ನುಡಿದರು.
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026

ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರರ ಆಗ್ರಹ

October 13, 2026

ದೇಶದಲ್ಲೇ ಮೊದಲ ಪ್ರಯೋಗ: ದ್ರೋಣ ಆನೆಗೆ ಫೈಬರ್ ಗ್ಲಾಸ್ ಕ್ಯಾಸ್ಟಿಂಗ್ ಚಿಕಿತ್ಸೆ ಯಶಸ್ವಿ

October 7, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,340 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,286 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026424 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026395 Views
Don't Miss
Home

ಮನುಷ್ಯರು ಮಾಡುವ ತಪ್ಪಿಗೆ ಮೂಕಪ್ರಾಣಿಯನ್ನು ಹೊಣೆ ಮಾಡುವುದು ಎಷ್ಟು ಸರಿ?

By Raghu ShettyOctober 26, 20260

ದಸರಾ ಜಂಬೂಸವಾರಿಯಲ್ಲಿ ಸೋಮಣ್ಣ ಆನೆ ಗಾಬರಿಗೊಂಡ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ; ತಪ್ಪು ಯಾರದ್ದು ಎಂಬುದರ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ…

ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ

October 24, 2026

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026

ಸ್ಟಿಂಗ್ ಆಪರೇಷನ್‌ನ ಮೊದಲ ಬಲಿ ನಾನೇ

October 19, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನ್ನಭಾಗ್ಯ ಅಕ್ಕಿ ಕಳಪೆ: ಫಲಾನುಭವಿಗಳ ಆಕ್ರೋಶ

September 21, 20260 Views

ಸಮೀಕ್ಷೆಗಾಗಿ ರಾಜ್ಯದಲ್ಲಿ ೧.೬೦ ಲಕ್ಷ ಶಿಕ್ಷಕರನ್ನು ನೇಮಕ

September 22, 20251 Views

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾವಾಸ

March 11, 20261 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.