ಶಿವಮೊಗ್ಗ : ನಗರಾಭಿವೃದ್ಧಿ ಮತ್ತು ಯೋಜಿತ ನಗರ ನಿರ್ಮಾಣದ ದೂರದೃಷ್ಟಿಯನ್ನು ಸುಮಾರು ಐದು ಶತಮಾನಗಳ ಹಿಂದೆಯೇ ತೋರಿಸಿದ ನಾಡಪ್ರಭು ಕೆಂಪೇಗೌಡರು ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.
ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಕ್ಕಲಿಗ ಸಮಾಜದ ವಿವಿಧ ಉಪಜಾತಿಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಕಾರ್ಯವನ್ನು ಆದಿಚುಂಚನಗಿರಿ ಮಠ ಕೈಗೊಂಡಿದ್ದು, ಸಮುದಾಯದ ಸಂಘಟನಾ ಬಲವರ್ಧನೆಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದರು. ಸಮುದಾಯ ಭವನ ನಿರ್ಮಾಣಕ್ಕೆ ಸಮಾಜದ ಜನರು ಉದಾರವಾಗಿ ಸಹಕಾರ ನೀಡಬೇಕೆಂದು ಕರೆ ನೀಡಿದರು.
—————————————————
ಕೆಂಪೇಗೌಡರು ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಆಡಳಿತ ನಡೆಸಿದ್ದರು ಎಂದರು. ಯುವಜನತೆ ಸಮಾಜ ನಿರ್ಮಾಣದ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಹಾಗೂ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಬೇಕು.
: ಪ್ರಸನ್ನನಾಥ ಸ್ವಾಮೀಜಿಸಾಹಿತ್ಯ ಹುಣ್ಣಿಮೆ ಸೇರಿದಂತೆ ಹಲವು ಕಾರ್ಯಕ್ರಮಗಳ ಹಿಂದೆ ಸತತ ಪರಿಶ್ರಮ ಹಾಗೂ ಸಾಮಾಜಿಕ ಬದ್ಧತೆ ಇದೆ ಎಂದರು. ಮಾತೃಭಾಷೆಯ ಸಂರಕ್ಷಣೆ ಮತ್ತು ಕನ್ನಡದ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು.
: ಡಿ. ಮಂಜುನಾಥ,
ಅಧ್ಯಕ್ಷರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್
———————————————
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ಅವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸೇವೆಯನ್ನು ಶ್ಲಾಘಿಸಿದ ಅವರು, ಸಾಹಿತ್ಯ ಹುಣ್ಣಿಮೆಯಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸಾಂಸ್ಕೃತಿಕ ಚೈತನ್ಯ ಮೂಡಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ಹೆಗಡೆ ಮಾತನಾಡಿ, ಕೆಂಪೇಗೌಡರು ನಗರ ಯೋಜನೆ ಹಾಗೂ ಜಲಸಂರಕ್ಷಣೆಯ ಮೂಲಕ ದೂರದೃಷ್ಟಿಯ ಆಡಳಿತದ ಮಾದರಿಯನ್ನು ನಿರ್ಮಿಸಿದ್ದರು. ಇಂದಿನ ನೀರಿನ ಸಮಸ್ಯೆಗಳನ್ನು ಗಮನಿಸಿದಾಗ ಅವರ ಕೆರೆ ಕಟ್ಟೆ ಪರಿಕಲ್ಪನೆಯ ಮಹತ್ವ ಇನ್ನಷ್ಟು ಸ್ಪಷ್ಟವಾಗುತ್ತದೆ ಎಂದು ಹೇಳಿದರು. ಒಕ್ಕಲಿಗ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಂಶುಮಂತ್, ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
500 ವರ್ಷಗಳ ಹಿಂದೆಯೇ ಯೋಜಿತ ನಗರ ಪರಿಕಲ್ಪನೆ ನೀಡಿದ ಕೆಂಪೇಗೌಡರು ವಿಶ್ವಕ್ಕೆ ಮಾದರಿ
500 Varṣagaḷa hindeyē yōjita nagara parikalpane nīḍida kempēgauḍaru viśvakke mādari 71 Kempegowda, who gave the concept of a planned city 500 years ago, is a model for the world.
