ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾ ಶಿವಮೊಗ್ಗದ ಪ್ರಮುಖ ಬೀದಿಗಳಲ್ಲಿ ಗಮನ ಸೆಳೆಯಿತು.
೩೦೦ಕ್ಕೂ ಹೆಚ್ಚಿನ ಮಹಿಳೆಯರು ಸೇರಿದ್ದ ಈ ಕಾರ್ಯಕ್ರಮ ನಿಜಕ್ಕೂ ನಾರಿಶಕ್ತಿಯನ್ನು ಪ್ರತಿಬಿಂಬಿಸುವಂತಿತ್ತು.ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಷ್ ಬಾನು ರವರು ಜಾಥಾ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಪಾಲಿಕೆ ವ್ಯಾಪ್ತಿಯ ಮಹಿಳೆಯರು ವಿವಿಧ ವೇಷ ತೊಟ್ಟು ಪಾಲ್ಗೊಂಡಿದ್ದು ವಿಶೇಷವಾಗಿತ್ತು.ಮಹಿಳಾ ದಸರಾ ಸಮಿತಿಯ ಕಾರ್ಯದರ್ಶಿ ಅನುಪಮಾ ಮತ್ತು ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.