ಶಿವಮೊಗ್ಗ : ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾ ಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆ ಯಿಂದ ಒಟ್ಟು ೧.೬೦ ಲಕ್ಷ ಶಿಕ್ಷಕರನ್ನು ನೇಮಿ ಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಮಧುಬಂಗಾರಪ್ಪ ತಿಳಿಸಿ ದರು.
ಸೋಮವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರ ಣದಲ್ಲಿ ಸಾಮಾಜಿ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್ ಅನ್ನು ವಿತರಿಸಿ ಅವರು ಮಾತನಾ ಡಿದರು.
ಕಾಂಗ್ರೆಸ್ ಸರ್ಕಾರ ನುಡಿ ದಂತೆ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಪ್ರಣಾಳಿಕೆ ನೀಡಿದ ಭರವಸೆಯಂತೆ ಒಳ ಮೀಸಲಾತಿ ಜಾರಿಗೆ ತಂದೆವು. ಈಗ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಮಾಡಲು ಮುಂದಾಗಿದ್ದೇವೆ. ಈ ಮೂಲಕ ಮತದಾರರಿಗೆ ಕೊಟ್ಟ ಮಾತನ್ನು ಉಳಿಸಿಕೊ ಳ್ಳುತ್ತಿದೆ ಎಂದರು.
ಈಗಾಗಲೇ ಸರ್ಕಾರದ ಆದೇಶದಂತೆ ಸಮೀಕ್ಷೆಗೆ ನನ್ನ ಇಲಾಖೆಯಿಂದ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ೧ ಕೋಟಿ ಮನೆಗ ಳಿದ್ದು, ಸಮೀಕ್ಷೆಗೆ ಇಲಾಖೆ ಯಿಂದ ೧.೬೦ ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ. ಇನ್ನೂ ಶಿವ ಮೊಗ್ಗ ಜಿಲ್ಲೆಯಲ್ಲಿ ಸುಮಾರು ೫.೫೦ ಲಕ್ಷ ಮನೆಗಳಿದ್ದು, ೩೫೦೦೦ ಶಿಕ್ಷಕರನ್ನು ನೇಮಿಸ ಲಾಗಿದೆ. ಜಿಲ್ಲಾಡಳಿತವೂ ಯಾವುದೇ ರೀತಿ ಸಮಸ್ಯೆಯಾಗ ದಂತೆ ಸಮೀಕ್ಷೆಯನ್ನು ನಡೆಸ ಬೇಕು. ಅಂತಹ ಸಂದರ್ಭ ಒದಗಿ ಬಂದರೆ ಇಲಾಖೆಯ ಕಾರ್ಯದರ್ಶಿ ಅಥವಾ ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು. ಸಾಮಾನ್ಯ ಜನರಿಗೆ ನ್ಯಾಯವನ್ನು ಒದಗಿಸುವ ದೃಷ್ಟಿಯಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಈ ಸಮೀಕ್ಷೆಯನ್ನು ಮಾಡಲು ಮುಂದಾಗಿದ್ದಾರೆ. ಸೆ.೨೨ ರಿಂದ ಅ.೭ ರವೆಗೆ ಈ ಸಮೀಕ್ಷೆ ನಡೆಯಲಿದ್ದು, ಜನರು ವಿರೋಧ ಪಕ್ಷಗಳ ಮಾತುಗಳಿಗೆ ಕಿವಿಕೊಡದೆ ಸಮೀಕ್ಷೆಗೆ ಸಹಕರಿಸಬೇಕು, ಸರಿಯಾದ ಮಾಹಿತಿ ನೀಡಬೇಕು. ಇದರಿಂದ ನಿಮ್ಮ ಹಕ್ಕಗಳನ್ನು ಪಡೆದುಕೊಳ್ಳಲು ಒಂದು ವ್ಯವಸ್ಥೆ ನಿರ್ಮಾಣವಾದಂತೆ ಆಗುತ್ತದೆ. ನಮ್ಮ ಇಲಾಖೆಯ ಶಿಕ್ಷಕರುಗಳು ನಿಗದಿತ ದಿನದೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಆಗದಿ ದ್ದರೆ ಮುಂದಿನ ನಿರ್ಧಾರವನ್ನು ಮುಖ್ಯಮಂತ್ರಿ ತೆಗೆದುಕೊಳ್ಳುತ್ತಾರೆ ಎಂದರು. ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ೮೩೦೦೦ ಎಕರೆ ಅಡಿಕೆ ಬೆಳೆ ನಾಶವಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ವರದಿ ಕೊಟ್ಟಿದ್ದಾರೆ. ೮೦ ಕೋಟಿ ರೂ. ನಮ್ಮ ಶಿವಮೊಗ್ಗ ಬರುವ ವ್ಯವಸ್ಥೆ ಮಾಡಲಾಗಿದೆ. ಕೇಂದ್ರಕ್ಕೂ ಈ ಬಗ್ಗೆ ಮನವಿ ಮಾಡಲಾಗಿದೆ ಎಂದರು.