ಶಿವಮೊಗ್ಗ: ದೊಡ್ಮನೆ ಸೊಸೆ ಗೀತಾ ಶಿವರಾಜಕುಮಾರ್ ಇದೀಗ ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಗೀತಾ ಶಿವರಾಜ್‌ಕುಮಾರ್, ನಾನು ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ.
ಆದರೆ ನಿಮ್ಮೆಲ್ಲರ ಜೊತೆ ನಿಲ್ಲುತ್ತೇನೆ. ಮುಂದಿನ ಚುನಾವಣೆಗೆ ಬಂದು ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.
ಮಹಿಳೆಯರು ಯಾರೂ ಅಬಲೆಯೆರಲ್ಲ, ಎಲ್ಲರೂ ಸಬಲೆಯರು. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ಮಾಡುತ್ತಾರೆ.
ಇನ್ನು ನಿಮಗೆ ಯಾವುದೇ ಸಮಸ್ಯೆ, ಕಷ್ಟಗಳಿದ್ದರೂ ಸಚಿವ ಮಧು ಬಂಗಾರಪ್ಪ ಅವರನ್ನು ಹಿಡಿದುಕೊಂಡು ಕೆಲಸ ಮಾಡಿಸಿಕೊಳ್ಳಿ ಎಂದು ಹೇಳಿದರು.ಶಿವಮೊಗ್ಗ : ನವರಾತ್ರಿಯ ಐದನೇ ದಿನ ಬೂದಿ ಬಣ್ಣದ ಬಟ್ಟೆಯಲ್ಲಿ ಕಂಗೊಳಿಸಿದ ಗುರುಪುರದ ನವಭಿರುಚಿ ಭಜನಾ ಸಂಘದ ಮಹಿಳಾಮಣಿಯರು.


