ಶಿವಮೊಗ್ಗ : ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರವು ದಿಟ್ಟ ಹೆಜ್ಜೆ ಇರಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಸಂಬಂಧ ಖಾಲಿ ಇರುವ ೧೩೦೦೦ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಅರ್ಹ ಪದವೀಧರರಿಗೆ ಡಿಸೆಂಬರ್೦೭ ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಇಲಾಖೆಯು ಅಕ್ಟೋಬರ್೨೩ರಂದು ಅಧಿಸೂಚನೆ ಪ್ರಕಟಿಸಲಿದ್ದು, ಪರೀಕ್ಷೆಯಲ್ಲಿ ಹಾಜರಾಗಲಿಚ್ಚಿಸುವ ಅರ್ಹ ಪದವೀಧರರು ನವೆಂಬರ್ ೦೯ ರೊಳಗಾಗಿ ಅನೈಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ೩೦೦೦ಕೋಟಿ ರೂ.ಗಳ ಅಂದಾಜು ವೆಚ್ಚದ ಕರ್ನಾಟಕ ಪಬ್ಲಿಕ್ ಶಾಲೆಯ ಮಹತ್ವದ ಯೋಜನೆಗೆ ಶಿವಮೊಗ್ಗದಲ್ಲಿಯೇ ಚಾಲನೆ ದೊರೆಯಲಿರುವುದು ವಿಶೇಷವಾಗಿದೆ. ಈ ಹಿಂದೆ ಯುವನಿಧಿ ಯೋಜನೆಯನ್ನೂ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉದ್ಘಾಟಿಸಿದ್ದರು ಎಂದವರು ನುಡಿದರು.
ಪ್ರಸ್ತುತ ಆರಂಭಿಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಿಂದಾಗಿ ಸರ್ಕಾರದಿಂದ ಜನರ ಹಿತಕ್ಕಾಗಿ ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವಂತೆ ರೂಪಿಸಲು ಅನುಕೂಲವಾಗಲಿದೆ. ಅಲ್ಲದೇ ಜನರ ಜೀವನ ಗುಣಮಟ್ಟವನ್ನು, ಆರ್ಥಿಕ ಅಭಿವೃದ್ಧಿಯ ಶ್ರೇಯಾಂಕವನ್ನು ಗುರುತಿಸಲು ಉಪಕಾರಿಯಾಗಲಿದೆ. ಸದರಿ ಸಮೀಕ್ಷೆಗೆ ಈವರೆಗೂ ಮಾಹಿತಿ ನೀಡದವರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ ಅವರು, ಸಮೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆ ಶೇ.೯೧.೨೯ರಷ್ಟು ಪ್ರಗತಿ ಸಾಧಿಸಲಾಗಿದೆ. ಸದರಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕರನ್ನು ಮುಕ್ತಗೊಳಿಸಿ, ಉಳಿಕೆ ಕಾರ್ಯಕ್ಕೆ ಶಿಕ್ಷಣೇತರ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳ ಸೇವೆಯನ್ನು ಪಡೆದುಕೊಳ್ಳಲಾಗುವುದು
: ಮಧುಬಂಗಾರಪ್ಪ
ಶಿಕ್ಷಣ ಸಚಿವರು.
ಅಲ್ಲದೇ ಪ್ರಸ್ತುತ ಶಿಕ್ಷಕರ ಕೊರತೆಯನ್ನು ನೀಗಿಸಲು ಅತಿಥಿ ಶಿಕ್ಷಕರನ್ನು ಸಕಾಲದಲ್ಲಿ ನೇಮಿಸಿಕೊಂಡು ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ಅಡಚಣೆಯಾಗದಂತೆ ಕ್ರಮ ವಹಿಸಲಾಗಿದೆ. ಹೊಸ ಶಿಕ್ಷಕರ ನೇಮಕಾತಿಯಿಂದಾಗಿ ಆಡಳಿತಾ ರೂಢ ಸರ್ಕಾರದ ಅವಧಿಯಲ್ಲಿ ಸುಮಾರು ೨೬೦೦೦ಶಿಕ್ಷಕರನ್ನು ನೇಮಕಾತಿಗೊಳಿಸಿದಂತಾಗಲಿದೆ ಎಂದ ಅವರು, ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರ್ಥಿಗಳಿಗೆ ಉತ್ತೀರ್ಣಗೊ ಳಿಸಲು ನಿಗಧಿಪಡಿಸಿದ ಅಂಕವನ್ನು ಸಾರ್ವಜ ನಿಕರ ಅಭಿಪ್ರಾಯ ಸಂಗ್ರಹಿಸಿ, ಶೇ.೩೩ಕ್ಕೆ ಮರುನಿಗಧಿ ಪಡಿಸಲಾಗಿದೆ. ಅದಕ್ಕಾಗಿ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಅಮೂಲಾಗ್ರ ಬದಲಾವಣೆ ಮತ್ತು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ಶಾಲೆಗಳ ಸಂಖ್ಯೆಯನ್ನು ೫೦೦ರಿಂದ ೮೦೦ಕ್ಕೆ ಹೆಚ್ಚಿಸಲಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ೨೦೦ಶಾಲೆಗಳನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ. ಇದರಿಂದಾಗಿ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಕ್ಷೇತ್ರದ ಪ್ರಗತಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಿದೆ ಎಂದವರು ನುಡಿದರು.
ಈ ಯೋಜನೆಯ ಸಮರ್ಪಕ ಅನುಷ್ಠಾನದಿಂದಾಗಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ, ಒಂದೇ ಶಾಲಾ ಆವರಣದಲ್ಲಿ ೧೪ವರ್ಷದವರೆಗೆ ಎಲ್ಲಾ ರೀತಿಯ ಶಿಕ್ಷಣ, ೦೧ರಿಂದ ೦೫ರವರೆಗೆ ಕನ್ನಡ ಕಡ್ಡಾಯ ಹಾಗೂ ದ್ವಿಭಾಷಾ ಕಲಿಕೆಗೆ ಅವಕಾಶ, ಮಕ್ಕಳ ಭಾಷಾ ಕಲಿಕೆಯನ್ನಾಧರಿಸಿ, ೬ನೇ ತರಗತಿಯ ನಂತರ ಮಾಧ್ಯಮ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲಾ ಶಾಲೆಗಳನ್ನು ಸ್ಮಾರ್ಟ್ಶಾಲೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇಂತಹ ಶಾಲೆಗಳಲ್ಲಿ ಏಕಕಾಲಕ್ಕೆ ಒಂದು ಕೇಂದ್ರದಿಂದ ವಿಶೇಷ ತರಗತಿ, ಉಪನ್ಯಾಸಗಳನ್ನು ನೀಡಬಹುದಾಗಿದೆ. ಅಂತಹ ಶಾಲೆಗಳ ಉಸ್ತುವಾರಿಗಾಗಿ ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ರಚಿಸಿ ನಿರ್ವಹಣೆಯ ಹೊಣೆಗಾರಿಕೆ ನೀಡಲಾಗುವುದು ಎಂದರು.
ಇಷ್ಟೇ ಅಲ್ಲದೇ ಮೊಬೈಲ್ ಬಿಡಿ, ಪುಸ್ತಕ ಹಿಡಿ ಸೇರಿದಂತೆ ಇನ್ನಷ್ಟು ವಿಶೇಷ ಯೋಜನೆಗಳನ್ನು ರೂಪಿಸಲಾಗಿದ್ದು, ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಅವುಗಳನ್ನು ಲೋಕಾರ್ಪಣೆಗೊ ಳಿಸಲಾಗುವುದು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ೧೯ಕೆ.ಪಿ.ಎಸ್.ಶಾಲೆಗಳ ಹಂಚಿಕೆಯಾಗಿದ್ದು, ಅದರ ಪ್ರಮಾಣ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಂಭವವಿದೆ ಎಂದವರು ನುಡಿದರು.
ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ, ಮನೋರಂಜನೆಗೆ ಪೂರಕವಾಗಿದ್ದ ಚಿನ್ನಿದಾಂಡು, ಲಗೋರಿ, ಬುಗುರಿ, ನಶಿಸುತ್ತಿರುವ ಮತ್ತಿತರ ಗ್ರಾಮೀಣ ಕ್ರೀಡೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ. ಅದಕ್ಕಾಗಿ ಮಕ್ಕಳ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಅವಕಾಶ ನೀಡಬೇಕಾದ ಅಗತ್ಯವಿದೆ ಎಂದರು.
ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆಯು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ ತಿಂಗಳನಲ್ಲಿ ಆಗಮಿಸಲಿದ್ದಾರೆ ಎಂದರು.
ಸಂದರ್ಭದಲ್ಲಿ ಆರ್.ಪ್ರಸನ್ನಕುಮಾರ್, ರಮೇಶ್ ಶೆಟ್ಟಿ ಶಂಕರಘಟ್ಟ, ಆಯನೂರು ಮಂಜುನಾಥ್, ಹಾಲಪ್ಪ, ವೈ.ಹೆಚ್.ನಾಗರಾಜ, ಜೆ.ಡಿ.ಮಂಜುನಾಥ್, ಕಲಗೋಡು ರತ್ನಾಕರ್, ಉಪಸ್ಥಿತರಿದ್ದರು.

