Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

July 29, 2026

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಇಲ್ಲಿಯವರಿಗೆ ಪೊಲೀಸ್ ಸಿಬ್ಬಂದಿ 36೦೦೦, ಸೈನಿಕರು 23೦೦೦ ಮೃತ ಒತ್ತಡದಲ್ಲಿ ಪೊಲೀಸ್ ಕಾರ್ಯನಿರ್ವಾಹಣೆ
ನಮ್ಮ ಶಿವಮೊಗ್ಗ

ಇಲ್ಲಿಯವರಿಗೆ ಪೊಲೀಸ್ ಸಿಬ್ಬಂದಿ 36೦೦೦, ಸೈನಿಕರು 23೦೦೦ ಮೃತ ಒತ್ತಡದಲ್ಲಿ ಪೊಲೀಸ್ ಕಾರ್ಯನಿರ್ವಾಹಣೆ

36,000 police personnel dead
Raghu ShettyBy Raghu ShettyOctober 21, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಸ್ವಾತಂತ್ರ್ಯಾನಂತರ ಈವರೆಗೆ ಮೃತರಾದ ಪೊಲೀಸ್ ಸಿಬ್ಬಂದಿ ಒಟ್ಟು ೩೬೦೦೦, ಸೇನೆಯ ಹೋರಾಟದಲ್ಲಿ ಮೃತರಾದ ಸೈನಿಕರ ಸಂಖ್ಯೆ ೨೩೦೦೦. ದೇಶದ ಗಡಿಕಾಯುವ ಸೈನಿಕರ ಸ್ಮರಣೀಯ ಸೇವೆಯನ್ನು ಮೀರಿ, ಅತೀ ಒತ್ತಡದಲ್ಲಿ, ಯಾವುದೇ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಸೇವೆ ಅತ್ಯಂತ ಮೌಲಿಕವಾದುದು ಮತ್ತು ಸ್ಮರಣೀಯವಾದುದು ಎಂದು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶ ಮಂಜುನಾಥನಾಯಕ್‌ಅವರು ಹೇಳಿದರು.

ಅವರು ಪೊಲೀಸ್ ಇಲಾಖೆಯು ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹುತಾತ್ಮರ ಆರಕ್ಷಕರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತಿದ್ದರು. ಯಾವುದೇ ಸಂದರ್ಭದಲ್ಲಿ ಸದಾ ಸನ್ನದ್ಧರಾಗಿದ್ದು ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಅಭಿನಂದನೀಯವಾದುದ್ದು ಹಾಗೂ ಸೈನಿಕರ ಸೇವೆಗಿಂತ ಮಹತ್ವದ್ದಾಗಿದೆ ಎಂದರು.
ಪೊಲೀಸ್ ಸಿಬ್ಬಂಧಿಗಳಿಗೆ ದೊರೆಯುವ ಗೌರವ ಅವರ ಕುಟುಂಬದ ಎಲ್ಲಾ ಸದಸ್ಯರಿಗೂ ದೊರೆಯುವಂತಾಗಬೇಕು. ಕೇವಲ ವೇತನ-ಭತ್ಯೆಗಳಿಂದ ಅವರನ್ನು ಸಮಾಧಾನಿಸುವುದು ಸಾಧ್ಯವಾಗದು ಎಂದ ಅವರು, ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಅತಿಸೂಕ್ಷ್ಮ ಪ್ರದೇಶ. ಆದಾಗ್ಯೂ ಶಿವಮೊಗ್ಗ ಜಿಲ್ಲೆಯ ಶಾಂತಿಯುತ ವಾತಾವರಣಕ್ಕೆ ಪೊಲೀಸ್ ಇಲಾಖೆಯ ಸೇವೆ ಅನುಪಮವಾದುದು ಎಂದವರು ನುಡಿದರು.

ಕಾಯಕನಿಷ್ಟೆ ಮೆರೆಯುವ, ಕೇವಲ ಆರೋಪಗಳಿಂದಷ್ಟೇ ಗುರುತಿಸಲಾಗುವ ಪೊಲೀಸರು ಪ್ರಶಂಸೆ -ಪುರಸ್ಕಾರಗಳನ್ನು ನಿರೀಕ್ಷಿಸದೇ ಎದುರಾಗಬಹುದಾದ ಎಲ್ಲಾ ಸಂದರ್ಭ-ಸವಾಲುಗಳಿಗೆ ಒಗ್ಗಿಕೊಳ್ಳುವ ಅನಿವಾರ್ಯವಿದೆ. ಅದಕ್ಕಾಗಿ ಚಿಂತಿಸುವ, ಚರ್ಚಿಸುವ ದೃತಿಗೆಡುವ ಅಗತ್ಯವಿಲ್ಲ ಎಂದ ಅವರು, ನೀಡುವ ಸೇವೆಯನ್ನು ಪ್ರಾಮಾಣಿಕವಾಗಿ, ಆತ್ಮಸಂತೃಪ್ತಿಗಾಗಿ ಮಾಡಬೇಕು. ಅದು ಮನಸಿಗೆ ಹೆಚ್ಚಿನ ಸಮಾಧಾನ ನೀಡಲಿದೆ ಎಂದರು.
ಜಿಲ್ಲೆಯಲ್ಲಿ ಅತ್ಯುತ್ತಮ ಪೊಲೀಸ್ಸೇವೆ ಒದಗಿಸುತ್ತಿರುವುದನ್ನು ಗಮನಿಸಲಾಗಿದೆ. ಪೊಲೀಸ್ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಹಳೆಯ ವ್ಯವಸ್ಥೆಯ ಜೊತೆಗೆ ಹೊಸವಿಧಾನ ಕಾರ್ಯತಂತ್ರಗಳ ಅಳವಡಿಕೆ ಅಗತ್ಯವಾಗಿದೆ. ಹೆಚ್ಚಳವಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಸಿಕೊಳ್ಳುವ ತುರ್ತು ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಮಾತನಾಡಿ, ಪೊಲೀಸರು ತಮ್ಮ ದಿನನಿತ್ಯದ ಕರ್ತವ್ಯದ ಜೊತೆಗೆ ವೈಯಕ್ತಿಕ ಬದುಕಿನ ಉನ್ನತಿಗೂ ಚಿಂತಿಸಬೇಕಾದ ಅಗತ್ಯವಿದೆ. ಅಂಚೆ ಸೇರಿದಂತೆ ವಿವಿಧ ವಿಮಾ ಕಂಪನಿಗಳಲ್ಲಿ ಅಲ್ಪಪ್ರಮಾಣದಲ್ಲಿ ವಾರ್ಷಿಕ ಶುಲ್ಕ ಪಾವತಿಸಿ, ಹೆಚ್ಚಿನ ಲಾಭ ಪಡೆಯುವ ವಿಮಾ ಸೌಲಭ್ಯವನ್ನು ಹೊಂದುವಂತೆ ಸಲಹೆ ನೀಡಿದರು.
ಮುಂದುವರೆದ ತಂತ್ರಜ್ಞಾನ ವ್ಯವಸ್ಥೆ ಇರುವ ಇಂದಿನ ದಿನಗಳಲ್ಲೂ ಪೊಲೀಸ್ರಕ್ಷಣಾ ವ್ಯವಸ್ಥೆಯಲ್ಲಿ ಅನೇಕ ಸಮಸ್ಯೆ-ಸವಾಲುಗಳು ಎದುರಾಗುತ್ತಿವೆ. ದಿನದ ೨೪ಗಂಟೆಗಳೂ ಸೇವೆ ಸಲ್ಲಿಸಬೇಕಾದ ಸಂದರ್ಭ ಎದುರಾಗುತ್ತಿವೆ. ಆಗಾಗ್ಗೆ ಆರೋಗ್ಯ ಸಮಸ್ಯೆಯೂ ತಲೇದೋರುತ್ತಿದೆ. ಆದ್ದರಿಂದ ವೈಯಕ್ತಿಕ ಜೀವನದಲ್ಲಿ ಸದೃಢರಾಗಿರಬೇಕು. ಅಲ್ಲದೇ ಕೌಟುಂಬಿಕ ಜೀವನ ಸುಂದರವಾಗಿಸುವಂತೆ ನೋಡಿಕೊಳ್ಳಲು ಶ್ರಮಿಸಬೇಕಾದ ಅಗತ್ಯವಿದೆ ಎಂದವರು ನುಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಅವರು ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದಲ್ಲಿ ಕರ್ತವ್ಯನಿರತರಾದಾಗಲೇ ಮರಣಹೊಂದಿದ ೧೯೧ಮಂದಿ ಹುತಾತ್ಮ ಆರಕ್ಷಕರ ನಾಮವಾಚನ ಮಾಡಿದರು. ಡಿ.ವೈ.ಎಸ್.ಪಿ. ಎ.ಜಿ.ಕಾರಿಯಪ್ಪ, ರಮೇಶ್, ಕೆ.ಎಸ್.ಆರ್.ಪಿ. ಕಮಾಂಡೆಂಟ್ಯುವಕುಮಾರ್ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಶ್ರೇಣಿಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

shivamoga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಭುಗಿಲೆದ್ದ ಕಮಲ-ಹಸ್ತ ಸಂಘರ್ಷ: ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಯತ್ನ, ಪೊಲೀಸರ ಜೊತೆ ವಾಗ್ವಾದ

July 23, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,326 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,276 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026386 Views
Don't Miss
Home

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

By Raghu ShettyJuly 29, 20260

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿ.ಎ.) ಎಂದು ಸುಳ್ಳು ಪರಿಚಯ ಮಾಡಿಕೊಂಡು ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್…

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.