ಬೆಂಗಳೂರು, ಅಕ್ಟೋಬರ್ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಎರಡು ಮತ್ತು ಮೂರನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಜೊತೆಗೆ ಆಕ್ಷೇಪಣೆಗೂ ಆಹ್ವಾನಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ ಆರ್ಚ್ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಇಂದು ಶುಕ್ರವಾರ (ಅಕ್ಟೋಬರ್ 24) ಕೆಇಎ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳಲ್ಲಿ ಯಾರಾದರೂ ಅಕ್ಟೋಬರ್ 25ರಂದು ಮಧ್ಯಾಹ್ನ 1 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದೆಂದು ಹೇಳಿದರು.
ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಗೆ 23-10-2025 ರ ಬೆಳಗ್ಗೆ 10.30 ರವರೆಗೆ ನಮೂದಿಸಿದ Options ಗಳನ್ನು ಪರಿಗಣಿಸಲಾಗಿದೆ. ಇದು PGCET-2025 ರ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವಾಗಿದೆ. ಅಭ್ಯರ್ಥಿಗಳು ತಾತ್ಕಾಲಿಕವಾಗಿ ಹಂಚಿಕೆಯಾಗಿರುವ ಸೀಟಿಗೆ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ ಎಂದು ಕೆಇಎ ತಿಳಿಸಿದೆ.
ಯಾವುದಾದರೂ ನಿರ್ದಿಷ್ಟ ಆಕ್ಷೇಪಣೆಗಳಿದ್ದಲ್ಲಿ (Options ಗಳನ್ನು ದಾಖಲಿಸಲಾಗಿದೆ, ಎರಡನೇ ಸುತ್ತಿನ ಕಟ್‌ಆಫ್ ಬ್ಯಾಂಕ್ ಪರಿಶೀಲಿಸಲಾಗಿದೆ, ಆದರೆ ಯಾವುದೂ ಸೀಟು ಹಂಚಿಕೆಯಾಗಿಲ್ಲ) ದಿನಾಂಕ 25-10-2025 ರ ಮಧ್ಯಾಹ್ನ 1.00 ರೊಳಗೆ keauthority-ka@nic.in ಗೆ ಎಲ್ಲಾ ವಿವರಗಳೊಂದಿಗೆ ಮೇಲ್ ಮಾಡಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
