ಶಿವಮೊಗ್ಗ : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವು ಪ್ರತಿಯೊಂದು ಹಂತದಲ್ಲೂ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗಾಯಿತ್ರಿ ಮಲ್ಲಪ್ಪ ತಿಳಿಸಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಗ್ಯಾರಂಟಿ ಎಂಬ ಉಚಿತ ಸೇವೆ ಒದಗಿಸುವ ಹೆಸರಿನಲ್ಲಿ ಸರ್ಕಾರಕ್ಕೆ ಬರುವ ಅದಾಯವನ್ನು ಕಡಿಮೆ ಮಾಡಿಕೊಂಡು, ರಾಜ್ಯದಲ್ಲಿ ನಡೆಯಬೇ ಕಾದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದೆ ದಿವಾಳಿಯಾಗಿದೆ ಎಂದರು.
ರಾಜ್ಯ ಮತ್ತು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಅದರಲ್ಲು ಮಹಿಳೆಯರಿಗಂತು ಈ ಸರ್ಕಾರದಿಂದ ಯಾವುದೇ ಭದ್ರತೆ ಇಲ್ಲದಂತಾಗಿದೆ ಎಂದರು. ಈ ಸರ್ಕಾರದ ಕಮಿಷನ್ ದಂಧೆಗೆ ಸುಮಾ ರು ೨೦ ಅಧಿಕಾರಿಗಳ ಅಸಹಜ ಸಾವು ಕಂಡಿದ್ದಾರೆ. ೭ ಅಧಿಕಾರಿ ಆತ್ಮಹತ್ಯೆಗೆ ಬಲಿಯಾಗಿದ್ದಾರೆ, ೧೫ಕ್ಕೂ ಹೆಚ್ಚು ಗುತ್ತಿಗೆದಾರರು ಆತ್ಮಹತ್ಯೆ ಮಾಡಿ ಕೊಂಡಿದ್ದು, ಹಲವರು ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆಂದು ಹೇಳಲಾ ಗುತ್ತಿದೆ ಎಂದರು.
ರಾಜ್ಯದಲ್ಲಿ ೬೮ ಮಹಿಳೆಯರ ಕೊಲೆ ಪ್ರಕರಣ ನಡೆದಿದೆ. ೧೪೦೦ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ೭೫೦ ಕ್ಕೂ ಹೆಚ್ಚು ಬಾಣಂತಿಯರ ಸಾವಾಗಿದೆ. ೧೩೦೦ ಕ್ಕೂ ಹೆಚ್ಚು ನವಜಾತ ಶಿಶುಗಳ ಸಾವಾಗಿದೆ. ಎರಡುವರೆ ವರ್ಷದಿಂದ ೫೦೦೦ ಹೆಣ್ಣು ಭ್ರೂಣ ಹತ್ಯೆಯಾಗಿದೆ. ಕಾಂಗ್ರೆಸ್‌ನ ಸದಸ್ಯರೇ ಡ್ರಗ್ ಕಾರ್ಖಾ ನೆಯಲ್ಲಿ ಪಾಲ್ಗೊಂಡಿದ್ದಾರೆ. ಸಚಿವರ ಆಪ್ತರು ಡ್ರಗ್ ಪ್ರಕರಣದಲ್ಲಿ ಪತ್ತೆಯಾಗಿದ್ದಾರು ಸರ್ಕಾರದಿಂದ ಇಲ್ಲಯವರೆಗೆ ಯಾವುದೇ ರೀತಿಯ ಕಾನೂನು ಕ್ರಮಕೈಗೊಳ್ಳದೆ ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲದಂತೆ ಸರ್ಕಾರ ವರ್ತಿಸುತ್ತಿರುವುದು ಶೋಚನೀಯ ಸಂಗತಿ ಎಂದರು.
ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ತೊಂದ್ರೆಯಾ ದವರಿಗೆ ಇಲ್ಲಿಯ ತನಕ ಯಾವುದೇ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಇವರಿಗೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಹಾಗೇ ಆನೆಗಳಿಂದ ರೈತರಿಗಾದ ನಷ್ಟಕ್ಕೆ ಯಾವುದೇ ಪರಿಹಾರವಿಲ್ಲ, ಇಂತಹ ಸರ್ಕಾರವನ್ನು ಜನರ ಎಂದಿಗೂ ಕ್ಷೇಮಿಸುವುದಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ಗೃಹಸಚಿವರು ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡು ವಲ್ಲಿ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಹಲ ವಾರು ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ, ಚಡ್ಡಿಗ್ಯಾಂಗ್ ಕಾಣಿಸಿಕೊಂಡರು ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದರು.
ಸಾಮಾಜಿಕ ಶೈಕ್ಷಣಿಕ ಗಣತಿ ಗೊಂದಲ ಗೂಡಾಗಿತ್ತು. ಇದರಿಂದ ಹಲವಾರು ಶಿಕ್ಷಕರು ಮಾನಸಿಕ ಒತ್ತಡದಿಂದ ಬಳಲಿದ್ದಾರೆಂದರು. ಸರ್ಕಾರದಿಂದ ಯಾವುದೇ ಕುಂದು-ಕೊರತೆಗಳ ಬಗ್ಗೆ ಗಮನಹರಿಸುತ್ತಿಲ್ಲ, ಮಹಿಳಾ ಅಯೋಗವು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದರು.
ಸಂದರ್ಭದಲ್ಲಿ ಜ್ಯೋತಿ ರಘು, ಮಂಗಳಾ ನಾಗೇಂದ್ರ, ಶಿವರಾಜು, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ, ಚಂದ್ರಶೇಖರ್ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ರಾಜ್ಯ ಸರ್ಕಾರ ಪ್ರತಿಯೊಂದು ರಂಗದಲ್ಲೂ ವಿಫಲ : ಗಾಯತ್ರಿ ಮಲ್ಲಪ್ಪ
ಗ್ಯಾರಂಟಿ ಎಂಬ ಉಚಿತ ಸೇವೆ
