ಶಿವಮೊಗ್ಗ, : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿ.15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಶಿಬಿರಾರ್ಥಿಗಳು ಡಿ.04 ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ. 04 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆAದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
