ಶಿವಮೊಗ್ಗ, : ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬAಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.
1990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಅವಧಿಯಲ್ಲಿ 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು ಸಂಬAಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದಾಗಿದೆ ಎಂದು ಆರ್.ಟಿ.ಓ ಮುರಗೇಂದ್ರ.ಬಿ.ಶಿರೋಲ್ಕರ್ ಇವರು ತಿಳಿಸಿದ್ದಾರೆ.