Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ಶಿವಮೊಗ್ಗ – SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್ ಮನೆ ಮೇಲೆ ಲೋಕಾಯುಕ್ತ ದಾಳಿ
ಪ್ರಮುಖ ಸುದ್ದಿ

ಶಿವಮೊಗ್ಗ – SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್ ಮನೆ ಮೇಲೆ ಲೋಕಾಯುಕ್ತ ದಾಳಿ

Lakṣmīpati si.En mane mēle lōkāyukta dāḷi 42 / 5,000 Lokayukta raids Lakshmipathi C.N.'s house
Raghu ShettyBy Raghu ShettyNovember 25, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಬೆಳ್ಳಂಬೆಳಗ್ಗೆ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಬೆಳ್ಳಂಬೆಳ್ಳಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು (ಎಲೆಕ್ಟ್ರಾನಿಕ್ ಸಿಟಿ) – RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ

ಮಂಡ್ಯ – ನಗರ ಪಾಲಿಕೆ CAO ಪುಟ್ಟಸ್ವಾಮಿ

ಬೀದರ್ – ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್

ಮೈಸೂರು – ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್​ಪೆಕ್ಟರ್ ರಾಮಸ್ವಾಮಿ ಸಿ

ಧಾರವಾಡ – ಕರ್ನಾಟಕ ವಿವಿಯ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ

ಧಾರವಾಡ – ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್

ಶಿವಮೊಗ್ಗ – SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್

ದಾವಣಗೆರೆ – APMC ಸಹ ನಿರ್ದೇಶಕ ಪ್ರಭು ಜೆ.

ಮೈಸೂರು – ಮಡಿಕೇರಿ PWD, ಸ.ಅ. ಇಂಜಿನಿಯರ್ ಗಿರೀಶ್ ಡಿ.ಎಂ

ಹಾವೇರಿ – ಶೇಕಪ್ಪ, ಇಇ, ಯೋಜನಾ ನಿರ್ದೇಶಕ ಕಚೇರಿ ಹಾವೇರಿ

ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ 6 ಆರ್‌ಟಿಒ ಮೇಲೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ದುಷ್ಕೃತ್ಯ ಬಟಾ ಬಯಲು!
ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮಾರಾಟ ವಿಭಾಗದ ಸಹಾಯಕ‌ ನಿರ್ದೇಶಕ ಜೆ. ಪ್ರಭು ಅವರ ಮನೆ ಸೇರಿದಂತೆ ಮೂರು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ನಗರದ ಆಂಜನೇಯ ಬಡಾವಣೆಯ 12 ಕ್ರಾಸ್‌ನಲ್ಲಿರುವ ಪ್ರಭು ಅವರ ಮನೆ‌, ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಈ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಡಿವೈಎಸ್‌ಪಿ ಕಲಾವತಿ, ಇನ್‌ಸ್ಪೆಕ್ಟರ್‌ ಗುರುಬಸವರಾಜ್ ತಂಡ ಪರಿಶೀಲನೆ ನಡೆಸುತ್ತಿದೆ ಎಂದು ಲೋಕಾಯುಕ್ತ ಕಚೇರಿ ಮೂಲಗಳು ಮಾಹಿತಿ ನೀಡಿವೆ.

ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಷ ನಾಟಿಕರ್ ಅವರ ನಿವಾಸದಲ್ಲಿ ಲೋಕಾಯಕ್ತ ಪೋಲೀಸರು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಯಾಲಕ್ಕಿ ಶೆಟ್ಟರ್ ಕಾಲೊನಿಯ ನಿವಾಸಕ್ಕೆ ಬೆಳ್ಳಂಬೆಳಿಗ್ಗೆಯೇ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ದಾಖಲೆ, ಇತ್ಯಾದಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಡಿಕೇರಿ ಲೋಕೋಪಯೋಗಿ ಇಲಾಖೆಯ ಎಇಇ ಗಿರೀಶ ಅವರ ಇಲ್ಲಿನ ವಸತಿ ಗೃಹ ಹಾಗೂ ಮೈಸೂರಿನ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ‌ನಡೆಸಿದ್ದಾರೆ‌. ಇದರೊಂದಿಗೆ ಮೈಸೂರಿನ ಹೂಟಗಳ್ಳಿ ನಗರಸಭೆಯ ಕಂದಾಯ ನಿರೀಕ್ಷಕ ರಾಮಸ್ವಾಮಿ ಅವರ ತಿ.‌ನರಸೀಪುರದ ನಿವಾಸದ ಮೇಲೂ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

shivavmogga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ನಂದಿನಿ ಬೆಣ್ಣೆ, ತುಪ್ಪದ ದರ ಏರಿಕೆ; ಜುಲೈ 24ರಿಂದ ಪರಿಷ್ಕೃತ ಬೆಲೆ ಜಾರಿ

July 23, 2026

ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್: ‘ಯುಗ್ಮಾ ಟೆಕ್‌ಫೆಸ್ಟ್-2.0’ಗೆ ಸಜ್ಜು

July 22, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,275 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
ನಮ್ಮ ಶಿವಮೊಗ್ಗ

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

By Raghu ShettyJuly 29, 20260

ಶಿವಮೊಗ್ಗ: ದೇಶದ ವಿದ್ಯಾರ್ಥಿ ಗಳ ಭವಿಷ್ಯ ದೊಂದಿಗೆ ರಾಜಕೀಯ ಮಾಡುವುದನ್ನು ನಿಲ್ಲಿಸಿ, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್…

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.