ಶಿವಮೊಗ್ಗ : ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಮಾಡದ ಕಾರಣ ವೃದ್ಧಾಪ್ಯ ಮತ್ತು ಅಂಗವೈಕಲ್ಯ ಪಿಂಚಣಿ ಇಲ್ಲದೆ 77 ವರ್ಷದ ವಿಕಲಚೇತನ ವ್ಯಕ್ತಿ ಮತ್ತು ಅವರ ಹಾಸಿಗೆ ಹಿಡಿದ ಪತ್ನಿ ಕಷ್ಟಪಡುತ್ತಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಆಧರಿಸಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆಎನ್ ಫಣೀಂದ್ರ ಸ್ವಯಂಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.
ಈ ದಂಪತಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವಾಸಿಸುತ್ತಿದ್ದಾರೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಲ್ಲ ಎಂಬ ಒಂದೇ ಒಂದು ಕಾರಣಕ್ಕಾಗಿ
ದಂಪತಿಯ ವೃದ್ಧಾಪ್ಯ ಮತ್ತು ಅಂಗವಿಕಲ ಪಿಂಚಣಿ ನಿರಾಕರಿಸುವುದು ಮತ್ತು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದು ಪ್ರಾಥಮಿಕವಾಗಿ ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಸಮನಾಗಿರುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 2(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ ನ್ಯಾಯಮೂರ್ತಿ ಫಣೀಂದ್ರ ಹೇಳಿದ್ದಾರೆ.
ದೂರಿನ ಪ್ರಕಾರ, ಗಜಾನನ ಅವರು ಅಂಗವಿಕಲರಾಗಿದ್ದು, 7-8 ವರ್ಷಗಳಿಂದ ಹಾಸಿಗೆ ಹಿಡಿದಿರುವ ತಮ್ಮ ಪತ್ನಿ ಭಾರತಿಯನ್ನು ನೋಡಿಕೊಳ್ಳುತ್ತಿದ್ದಾರೆ.
ಜೀವನೋಪಾಯಕ್ಕೆ ಬೇರೆ ದಾರಿಗಳಿಲ್ಲದೆ, ಸಾಗರದ ಭೀಮನಕೋಣೆ ಮುಖ್ಯ ರಸ್ತೆಯ ಪಕ್ಕದ ಮನೆಯಲ್ಲಿ ವಾಸಿಸುವ ಈ ದಂಪತಿ ಸಂಕಷ್ಟದಲ್ಲಿದ್ದಾರೆ. ಅವರ ವೃದ್ಧಾಪ್ಯ ಮತ್ತು ಅಂಗವೈಕಲ್ಯ ಪಿಂಚಣಿಗಳನ್ನು ನಿಲ್ಲಿಸಲಾಗಿದೆ ಎಂಬ ವಿಷಯವನ್ನು ತಾಲ್ಲೂಕು ಅಧಿಕಾರಿಗಳ ಗಮನಕ್ಕೆ ತರಲಾಯಿತು.
ಅವರು ಮನೆಗೆ ಭೇಟಿ ನೀಡಿ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದರು. ಆದರೆ, ಅರ್ಜಿಯನ್ನು ತಿರಸ್ಕರಿಸಲಾಯಿತು. ಬಳಿಕ ಯಾವುದೇ ಮುಂದಿನ ಕ್ರಮಗಳನ್ನು ತೆಗೆದುಕೊಂಡಿಲ್ಲ.
ಅಧಿಕಾರಿಗಳ ಕಾರ್ಯವೈಖರಿಯನ್ನು ’ಕೆಟ್ಟ ನಿರ್ವಹಣೆ’ ಎಂದು ಬಣ್ಣಿಸಿದ ನ್ಯಾಯಮೂರ್ತಿ ಫಣೀಂದ್ರ, ಸಾಗರ ತಾಲ್ಲೂಕಿನ ಸಹಾಯಕ ಆಯುಕ್ತ ವೀರೇಶ್ ಕುಮಾರ್ ಮತ್ತು ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದಂಪತಿಯ ನಿವಾಸಕ್ಕೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಲು ಮತ್ತು ಸಂಬಂಧಪಟ್ಟವರಿಗೆ ನಿರ್ದೇಶನಗಳನ್ನು ನೀಡಲು ಆದೇಶದ ಪ್ರತಿಯನ್ನು ಶಿವಮೊಗ್ಗದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಕಳುಹಿಸಿದ್ದಾರೆ. ಜನವರಿ 16 ರೊಳಗೆ ವರದಿ ನೀಡುವಂತೆಯೂ ಅವರು ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ
Elderly couple struggles for pension
