Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಕೋಟೆ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ದತೆ
Home

ಕೋಟೆ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ದತೆ

All ready for the Kote Marikamba fair
Raghu ShettyBy Raghu ShettyFebruary 23, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಕೋಟೆ ಮಾರಿಕಾಂಬ ದೇವಸ್ಥಾನ ಜಾತ್ರೆ ನಾಳೆಯಿಂದ ಪ್ರಾರಂಭವಾಗುತ್ತಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಮರಿಯಪ್ಪ ತಿಳಿಸಿದ್ದಾರೆ.
ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಭೆ ನಡೆಸಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಬಾರಿ ಜಾತ್ರೆಯ ವಿಶೇಷ ಆಕರ್ಷಣೆಯಾಗಿ ೪೮ ಅಡಿ ಎತ್ತರದ ಮಹಾಕಾಳಿ ಪ್ರತಿಮೆ ಸ್ಥಾಪಿಸಲಾಗಿದ್ದು, ಇದು ರಾಜ್ಯದಲ್ಲೇ ಪ್ರಥಮವಾಗಿದೆ. ಅದ್ದೂರಿ ಅಲಂಕಾರ ಮಾಡಲಾಗಿದ್ದು, ಜರ್ಮನ್ ಟೆಂಟ್ ಅಳವಡಿಸಿ ಭಕ್ತರಿಗೆ ಅನುಕೂಲಕರ ವ್ಯವಸ್ಥೆ ಮಾಡಲಾಗಿದೆ. ಅಲಂಕಾರವನ್ನು ಶ್ರೀಕಾಂತ್ ಅವರ ನೇತೃತ್ವದಲ್ಲಿ ಸುಮಾರು ೧೦ ಸಾವಿರ ಗುಲಾಬಿ ಹೂಗಳಿಂದ ಮಾಡಲಾಗುತ್ತಿದೆ. ಒಟ್ಟು ೧೫ ಸಮಿತಿಗಳನ್ನು ರಚಿಸಿ ಜಾತ್ರೆ ವ್ಯವಸ್ಥೆಯನ್ನು ಸುಸೂತ್ರವಾಗಿ ನಿರ್ವಹಿಸಲಾಗುತ್ತಿದೆ ಎಂದರು.
ವಿವಿಐಪಿ ಪಾಸ್‌ಗಳು ಸಿದ್ಧವಾಗಿವೆ. ವಿಕಲಾಂಗರಿಗೆ ಮತ್ತು ವಿವಿಐಪಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿಶೇಷ ದರ್ಶನಕ್ಕೆ ೨೦೦ ರೂ. ನಿಗದಿಪಡಿಸಲಾಗಿದೆ. ಕೆಳಗಡೆ ಮತ್ತು ಮೇಲ್ಗಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಗಾಂಧಿಬಜಾರ್ ಪ್ರದೇಶದಲ್ಲೂ ಅಗತ್ಯ ಸೌಕರ್ಯ ಒದಗಿಸಲಾಗಿದೆ.
ಜಾತ್ರೆಯ ಆರಂಭದಲ್ಲಿ ಕಾಯಿ ಒಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಪ್ರಸಾದ ವಿತರಣೆಗಾಗಿ ಎರಡು ಬದಿಗಳಲ್ಲಿ ಕೌಂಟರ್‌ಗಳನ್ನು ತೆರೆಯಲಾಗಿದ್ದು, ಪ್ರತಿ ಐದು ದಿನಗಳ ಕಾಲ ೫ ರಿಂದ ೧೦ ಸಾವಿರ ಜನರಿಗೆ ಪ್ರಸಾದ ವಿತರಣೆ ನಡೆಯಲಿದೆ. ಇದಕ್ಕಾಗಿ ಐದು ಜನ ಭಟ್ಟರ ತಂಡವನ್ನು ನಿಯೋಜಿಸಲಾಗಿದೆ ಎಂದರು.
ಪಾರ್ಕಿಂಗ್ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ೮ ವಾಚ್ ಟವರ್‌ಗಳು ಹಾಗೂ ಸಿಸಿ ಕ್ಯಾಮರಾ ಅಳವಡಿಸಿ ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದೆ. ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಾತ್ರೆಯನ್ನು ಮಾದರಿ ಹಬ್ಬವನ್ನಾಗಿ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು, ಗೋಧಿ ಚೀಲಗಳ ಬಳಕೆಗೆ ಉತ್ತೇಜನ ನೀಡಲಾಗಿದೆ. ಯಾವುದೇ ಅಂಗಡಿಯಲ್ಲಿ ಪ್ಲಾಸ್ಟಿಕ್ ಚೀಲ ಬಳಸಬಾರದು ಎಂದು ಸೂಚಿಸಲಾಗಿದೆ.
ಸಮಿತಿಯಿಂದ ಯಾವುದೇ ದೇಣಿಗೆ ಕೇಳುವ ಪರಿಪಾಠ ಇಲ್ಲದೆ, ಭಕ್ತರು ಸ್ವಯಂಪ್ರೇರಿತವಾಗಿ ದೇಣಿಗೆ ನೀಡುತ್ತಿದ್ದಾರೆ. ದೇವಸ್ಥಾನ ಸುತ್ತಮುತ್ತ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಸಮಗ್ರ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸಂದರ್ಭದಲ್ಲಿ ಮಂಜುನಾಥ್, ಮಂಜುನಾಥ್, ಲೋಕೋಶ್, ಟಿ ಎಸ್ ಚಂದ್ರಶೇಖರ್ ಉಪಸ್ಥಿತರಿದ್ದರು.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,308 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026332 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025285 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026278 Views
Don't Miss
ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.