Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ
ಅಪರಾಧ ಲೋಕ

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

School boy murdered, 7 minors arrested, Rs 15 lakh compensation announced
Raghu ShettyBy Raghu ShettyFebruary 24, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ: ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (16) ಪರೀಕ್ಷೆಗೆ ಮುನ್ನ ವಿಶೇಷ ತರಗತಿಗೆ ಹಾಜರಾದ ನಂತರ ಈ ಘಟನೆ ಸಂಭವಿಸಿದೆ.
ಸಂಕೇತ್ ತನ್ನ ಶಾಲೆಯ ಹೊರಗೆ ಹುಡುಗರ ಗುಂಪಿನ ನಡುವೆ ನಡೆದ ವಾಗ್ವಾದದಲ್ಲಿ ಮಧ್ಯಪ್ರವೇಶಿಸಿದ್ದರು. ಈ ವೇಳೆ ವಾಗ್ವಾದ ನಡೆದು ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಸುದ್ದಿಗಾರರಿಗೆ ತಿಳಿಸಿದರು.ಸಂಕೇತ್ ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯಿಂದ ನಿನ್ನೆ ರಾತ್ರಿಯೇ ಎಸ್ಪಿ ನಿಖಿಲ್ ಘಟನೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಏಳು ಅಪ್ರಾಪ್ತ ವಯಸ್ಕರನ್ನು ಈ ಸಂಬಂಧ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.
ಕ್ರಿಕೆಟ್ ಮ್ಯಾಚ್ ವಾಗ್ವಾದದಿಂದ ಕೊಲೆ
ಸಂಕೇತ್ ಹತ್ಯೆಯ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಪ್ರತಿಕ್ರಿಯಿಸಿದ್ದು, ಕ್ರಿಕೆಟ್ ಮ್ಯಾಚ್ ವಾಗ್ವಾದದಿಂದ ಕೊಲೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದೇವೆ. ಇದಕ್ಕೆ ಒಂದು ವಿಶೇಷ ತನಿಖಾ ತಂಡ ರಚಿಸಿದ್ದೇವೆ. ಎರಡು ದಿನದ ಹಿಂದೆ ಕ್ರಿಕೆಟ್ ಮ್ಯಾಚ್ ನಡೆದಿತ್ತು. ಗಾಂಜಾ ಹಾವಳಿ ಬಗ್ಗೆಯೂ ತನಿಖೆ ಮಾಡುತ್ತೇವೆ . ಇಲ್ಲಿ ಒಂದು ಪೊಲಿಸ್ ಉಪ ಠಾಣೆಯನ್ನು ತೆರೆಯಲು ಕ್ರಮ ಕೈಗೊಳ್ಳುತ್ತೇವೆ. ಆರೋಪಿಗಳನ್ನು ಗಾಂಜಾ ಟೆಸ್ಟ್ ಗೆ ಒಳಪಡಿಸುತ್ತೇವೆ ಎಂದು ಎಸ್ಪಿ ನಿಖಿಲ್ ಹೇಳಿದ್ದಾರೆ.


ಬಿಗಿ ಪೊಲೀಸ್ ಬಂದೋಬಸ್ತ್
ಸಂಕೇತ್ ಹತ್ಯೆಯ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿ ದೆ. ಶಿವಮೊಗ್ಗ ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಊರುಗಡೂರಿ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಗಾಂಜಾ ಹಾವಳಿಯೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಊರುಗಡೂರಿನಲ್ಲಿ ಪೊಲೀಸ್ ಠಾಣೆ ತೆರೆಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸಂಕೇತ್ ನನ್ನು ಅಪ್ರಾಪ್ತ ಬಾಲಕರೇ ಹತ್ಯೆ ಮಾಡಿದ್ದಾರೆ ಎಂಬುದು ಅಘಾತಕಾರಿ ಅಂಶ. ಸಂಕೇತ್ ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳೇ ಸೇರಿಕೊಂಡು ಸಂಕೇತ್ ನನ್ನು ಹತ್ಯೆ ಮಾಡಿ ದ್ದಾಗಿ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.
15 ಲಕ್ಷ ಪರಿಹಾರ ಘೋಷಣೆ
ಇನ್ನು ಮೃತ ಬಾಲಕನ ಕುಟುಂಬಕ್ಕೆ ರಾಜ್ಯ ಸರ್ಕಾರ ಒಟ್ಟಾರೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಹತ್ಯೆಯಾದ ಸಂಕೇತ್ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಲಕ್ಷ, ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಸರ್ಕಾರದ ಪರವಾಗಿ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಪರಿಹಾರದ ಹಣದ ಬಗ್ಗೆ ಘೋಷಣೆ ಮಾಡಿದ್ದಾರೆ.
ಸಿಎಂ, ಉಸ್ತುವಾರಿ ಸಚಿವ ರೊಂದಿಗೆ ಮಾತಾಡಿ ಪರಿಹಾರ ಘೋಷಣೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಮೃತ ಸಂಕೇತ ಜೊತೆಗೆ ಗಾಯಾಳು ಆಗಿರುವ ಗಿರೀಶ್ ಗೆ ಪರಿಹಾರ ನೀಡಲಾಗುವುದು. ಮಾದಕ ವಸ್ತುಗಳ ಬಗ್ಗೆ ಜಿಲ್ಲಾಡಳಿತದಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ.
ಈ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು. ಬಡಾವಣೆಯಲ್ಲಿ ಉಪ ಪೊಲೀಸ್ ಠಾಣೆ ತೆರೆಯುವ ಬಗ್ಗೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ ಹೇಳಿದ್ದಾರೆ.

shivamoga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,308 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026332 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025285 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026278 Views
Don't Miss
ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.