ಶಿವಮೊಗ್ಗ, : ಜಿಲ್ಲೆಯ ತೀರ್ಥಹಳ್ಳಿ ಹಾಗೂ ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ–52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶಿಸಿದೆ.
ಕಳೆದ ಮಳೆಗಾಲದಲ್ಲಿ ಈ ರಸ್ತೆಯ ಹೇರ್‌ಪಿನ್ ತಿರುವಿನಲ್ಲಿ ಭೂಕುಸಿತ ಉಂಟಾಗಿದ್ದರಿಂದ, ತಡೆಗೋಡೆ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿತ್ತು. ಏಪ್ರಿಲ್ 9ರಂದು ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಸುಮಾರು 12 ಮೀಟರ್ ಎತ್ತರದಿಂದ ಮತ್ತೊಮ್ಮೆ ಭೂಕುಸಿತ ಉಂಟಾಗಿ, ಕಾಂಕ್ರೀಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಇದರಿಂದ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಿರುವುದರಿಂದ, ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ಮಾರ್ಗವನ್ನು ಬಂದ್ ಮಾಡಲಾಗಿದೆ.ಪರ್ಯಾಯ ಮಾರ್ಗಗಳು:
ತೀರ್ಥಹಳ್ಳಿ → ಕುಂದಾಪುರ (ಭಾರಿ ವಾಹನಗಳು): ತೀರ್ಥಹಳ್ಳಿ → ರಾವೆ → ಕಾನುಗೋಡು → ನಗರ → ಕೊಲ್ಲೂರು → ಕುಂದಾಪುರ
ಯಡೂರು / ಮಾಸ್ತಿಕಟ್ಟೆ ಮಾರ್ಗ: ತೀರ್ಥಹಳ್ಳಿ → ಕಾನುಗೋಡು → ನಗರ → ಕೊಲ್ಲೂರು → ಕುಂದಾಪುರ
ಶಿವಮೊಗ್ಗ / ಸಾಗರದಿಂದ ಹೊಸನಗರ ಮಾರ್ಗ: ಶಿವಮೊಗ್ಗ–ಹೊನ್ನಾವರ ರಾಷ್ಟ್ರೀಯ ಹೆದ್ದಾರಿ → ಹೊನ್ನಾವರ → ಭಟ್ಕಳ → ಬೈಂದೂರು → ಕುಂದಾಪುರ
ಈ ಬದಲಾವಣೆ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮುಂದುವರಿಯಲಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಮನವಿ ಮಾಡಿದ್ದಾರೆ.
Subscribe to Updates
Get the latest creative news from FooBar about art, design and business.
ಹುಲಿಕಲ್ ಘಾಟ್ ರಸ್ತೆ ತಾತ್ಕಾಲಿಕ ಬಂದ್ – ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ
Hulikal Ghat Road is temporarily closed
