ಶಿವಮೊಗ್ಗ: ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಉದ್ದೇಶದಿಂದ ‘ಅಕ್ಕ ಪಡೆಯು’ ಕಾರ್ಯ ನಿರ್ವಹಿಸುತ್ತಿದೆ.
ಸೋಮವಾರ ಸಂಜೆ 5 ಗಂಟೆಗೆ ಅಕ್ಕ ಪಡೆಯು ಶಿವಮೊಗ್ಗ ನಗರದ ಬಸ್ ನಿಲ್ದಾಣ, ಮಾರುಕಟ್ಟೆ, ದೇವಸ್ಥಾನಗಳು ಹಾಗೂ ಉದ್ಯಾನವನಗಳ ಬಳಿ ಗಸ್ತು ತಿರುಗಿತು. ಈ ವೇಳೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ, ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು.
ಅಸಭ್ಯವಾಗಿ ವರ್ತಿಸುವವರು ಹಾಗೂ ಮಹಿಳೆಯರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಡೆಯು ಎಚ್ಚರಿಕೆ ನೀಡಿತು. ಸಾರ್ವಜನಿಕರು ಸಹ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಲಾಯಿತು.
Subscribe to Updates
Get the latest creative news from FooBar about art, design and business.
ಅಕ್ಕ ಪಡೆಯು’ ಗಸ್ತು: ಮಹಿಳಾ ಸುರಕ್ಷತೆ ಬಗ್ಗೆ ಜಾಗೃತ
Get Sister' patrol: Awareness about women's safety
