ಶಿವಮೊಗ್ಗ, : ಅಬ್ಬಲಗೆರೆಯ ಸಮೀಪ ನಡೆದ ಯುವತಿಯೊಬ್ಬರ ಸರ ಕಳವು ಮಾಡಿದ ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮೇ.೨೨ ರ ಸಂಜೆ ಯುವತಿಯೊಬ್ಬರು ಕಾರಿಂದ ಕೆಳಗೆ ಇಳಿಯುತ್ತಿದ್ದ ವೇಳೆ, ಹಿಂಭಾಗದಿಂದ ಇಕೋ ಸ್ಪೋರ್ಟ್ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರು ಯುವತಿಯ ಕೊರಳಿನಲ್ಲಿದ್ದ ಬಂಗಾರದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆ, ಆರೋಪಿಗಳ ಪತ್ತೆ ಹಾಗೂ ಮಾಲು ವಶಕ್ಕೆ ವಿಶೇಷ ತಖಾ ತಂಡವನ್ನು ರಚಿಸಿತು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಖಿಲ್ ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ.ಜಿ ಹಾಗೂ ಉಪ ವಿಭಾಗ-ಬಿ ಡಿವೈಎಸ್‌ಪಿ ಸಂಜೀವ್ ಕುಮಾರ್ ಟಿ ಅವರ ಮಾರ್ಗದರ್ಶನದಲ್ಲಿ ಪಿಐ ರಾಘವೇಂದ್ರ ಕಾಂಡಿಕೆ ಹಾಗೂ ಪಿಎಸ್‌ಐ ನವೀನ್ ಮಠಪತಿ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.
ತಖಾ ತಂಡದಲ್ಲಿ ಸಿಪಿಸಿ ಶ್ರೀಕಾಂತ್, ಕಾಶಿನಾಥ ಹಾಗೂ ಕವನ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆಯ ವೇಳೆ ಆರೋಪಿ ಮಂಜುನಾಥನಾಯ್ಕನನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಸುಮಾರು ೫ ಲಕ್ಷ ರೂ. ಮೌಲ್ಯದ ಕಾರು ಹಾಗೂ ಸುಮಾರು 1.50 ಲಕ್ಷ ರೂ. ಮೌಲ್ಯದ ಗ್ರಾಂ ತೂಕದ ಬಂಗಾರದ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
Subscribe to Updates
Get the latest creative news from FooBar about art, design and business.
ಯುವತಿಯ ಸರ ಕಳವು ಪ್ರಕರಣ ಭೇದಿಸಿದ ಗ್ರಾಮಾಂತರ ಪೊಲೀಸರು ; ಆರೋಪಿ ಬಂಧನ : ಕಾರು ಹಾಗೂ 1.50 ಲಕ್ಷ ಮೌಲ್ಯದ ಬಂಗಾರದ ಸರ ವಶ
Rural police crack case of theft of young woman's necklace
