ಶಿವಮೊಗ್ಗ : ಹೊಸನಗರ ತಾಲೂಕಿನ ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ನೋಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಈಗಾಗಲೇ ಮೇಯಲು ಬಿಟ್ಟ ಸಾಕಷ್ಟು ಜಾನುವಾರುಗಳನ್ನು ಚಿರತೆ ತಿಂದಿರುವ ಬಗ್ಗೆ ಮಾಹಿತಿ ಇದ್ದು ಜಾನುವಾರುಗಳ ಕಳೇಬರಗಳು ಅಲ್ಲಲ್ಲಿ ಕಂಡುಬಂದಿದೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕಡಸೂರು ನಿವಾಸಿಗಳು ಆಗ್ರಹಿಸಿದ್ದಾರೆ.
