ಶಿವಮೊಗ್ಗ, : ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಟೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 9 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಎ-ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಿಂದ ಸರ್ಚ್ ವಾರೆಂಟ್ ಪಡೆದುಕೊಂಡು, ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡವು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿತು.
ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹33,470 ನಗದು, 8 ಮೊಬೈಲ್ ಫೋನ್ಗಳು ಹಾಗೂ ಇಸ್ಟೀಟ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಆರೋಪಿಗಳ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 200/2026 ಅಡಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 79 ಮತ್ತು 80ರ ಅನ್ವಯ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಹೊಸಮನೆ ಪ್ರದೇಶದಲ್ಲಿ ಅಕ್ರಮ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: 9 ಮಂದಿ ವಶಕ್ಕೆ
Police raid on illegal Andar-Bahar gambling
