ಶಿವಮೊಗ್ಗ : ಪತ್ರೋಡೆ ಎಲೆ ಕೀಳಲು ಮರ ಏರಿದ್ದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ರ್ಘಟನೆ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಸಂಭವಿಸಿದೆ.
ಮೃತ ಯುವಕನನ್ನು ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದ್ದು ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾರೆ.
ಮೃತ ಯುವಕನಿಗೆ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಬಂಧು-ಬಳಗದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಪತ್ರೋಡೆ ಎಲೆ ಕೀಳುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಗೊಂಡು ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Subscribe to Updates
Get the latest creative news from FooBar about art, design and business.
ಮರದ ಮೇಲೆ ಎಲೆ ಕೀಳಲು ಹೋಗಿ ಯುವಕ ಸಾವು
A young man died while picking leaves from a tree
