ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಲಕ್ ಶಾದಿ ಮಹಲ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಅವರು ತಮ್ಮ ಸಿಬ್ಬಂದಿಯೊಂದಿಗೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ.
ಅಕ್ಕಲ್ ಖಾನ್ (23 ವರ್ಷ) ಎಂಬ ಆರೋಪಿಯನ್ನು ಪೊಲೀಸರು ವಶಪಡಿಸಿಕೊಳ್ಳುವುದರಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಅಂದಾಜು 65,000/-ರೂ. ಮೌಲ್ಯದ, ಒಟ್ಟು 01 ಕೆಜಿ 261 ಗ್ರಾಂ ತೂಕದ ಮಾದಕ ವಸ್ತುವಾದ ಗಾಂಜಾವನ್ನು ಪೊಲೀಸರು ಕಾನೂನುಬದ್ಧವಾಗಿ ಅಮಾನತುಪಡಿಸಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ganja-maraṭa-maḍuttidda-aropi-bandhana-34-suspect-arrested-for-selling-marijuana
