Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

Take strict and coordinated action to prevent drug addiction.
Raghu ShettyBy Raghu ShettyJuly 28, 2026Updated:July 28, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು

ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಶಾಲೆ-ಕಾಲೇಜುಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ನಿರಂತರ ಜಾಗೃತಿ ಮೂಡಿಸಬೇಕು ಎಂದರು.

ಶಿಕ್ಷಣ ಇಲಾಖೆ ಪ್ರತಿ ತಿಂಗಳು ಮಕ್ಕಳ ಕ್ಲಬ್‌ಗಳ ಮೂಲಕ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ವರದಿ ಸಲ್ಲಿಸಬೇಕು. ವಸತಿ ನಿಲಯಗಳ ವಾರ್ಡನ್‌ಗಳು ವಿದ್ಯಾರ್ಥಿಗಳಲ್ಲಿ ಸಿಗರೇಟ್, ಗುಟ್ಕಾ ಹಾಗೂ ಇತರ ಮಾದಕ ವಸ್ತುಗಳ ಬಳಕೆ ಕುರಿತು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಆರೋಗ್ಯ ಇಲಾಖೆಯಲ್ಲಿ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾದಕ ವಸ್ತು ಪತ್ತೆ ಪರೀಕ್ಷಾ ಕಿಟ್‌ಗಳು ಲಭ್ಯವಿದ್ದು, ವ್ಯಸನಮುಕ್ತಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಲು ಮುಂದೆ ಬರುವವರಿಗೆ ಕಾನೂನಿನಡಿ ಅವಕಾಶವಿದೆ. ಆದ್ದರಿಂದ ಡಿ-ಅಡಿಕ್ಷನ್ ಕೇಂದ್ರಗಳನ್ನು ಮತ್ತಷ್ಟು ಬಲಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಬಕಾರಿ ಇಲಾಖೆ ಅಕ್ರಮ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ತಡೆಯಬೇಕು. ಕೃಷಿ ಇಲಾಖೆ ಬೆಳೆ ಸಮೀಕ್ಷೆ ಹಾಗೂ ರೈತರ ಸಭೆಗಳಲ್ಲಿ ಜಾಗೃತಿ ಮೂಡಿಸಬೇಕು. ಅರಣ್ಯ ಇಲಾಖೆ ಅಕ್ರಮ ಗಾಂಜಾ ಬೆಳೆ ಕುರಿತು ನಿಗಾ ವಹಿಸಿ ಪೊಲೀಸ್ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ನಗರದ ಕಾಂಡಿಮೆಂಟ್ ಅಂಗಡಿಯೊಂದರಲ್ಲಿ ಆಯುರ್ವೇದ ಔಷಧಿ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಮಾತ್ರೆ ಪರೀಕ್ಷೆಯಲ್ಲಿ ನೋವು ನಿವಾರಕ ಔಷಧಿ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ, ಸಂಬಂಧಿಸಿದ ಅಂಗಡಿಯ ವಿರುದ್ಧ ಕ್ರಮ ಕೈಗೊಂಡು ಅಗತ್ಯವಿದ್ದರೆ ವ್ಯಾಪಾರ ಪರವಾನಗಿ ರದ್ದುಪಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ ಮಾತನಾಡಿ, ಅಬಕಾರಿ, ಅರಣ್ಯ, ಶಿಕ್ಷಣ, ಆರೋಗ್ಯ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯಗಳ ಜಾಲವನ್ನು ನಿಯಂತ್ರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,273 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

By Raghu ShettyJuly 28, 20260

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.