Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ಅಲೆಮಾರಿ ಜನಾಂಗಕ್ಕೆ ಸರ್ಕಾರದ ನೆರವು : ದಾಖಲೆ ಸರಳೀಕರಣಕ್ಕೆ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಅಲೆಮಾರಿ ಜನಾಂಗಕ್ಕೆ ಸರ್ಕಾರದ ನೆರವು : ದಾಖಲೆ ಸರಳೀಕರಣಕ್ಕೆ ಮಹತ್ವದ ಕ್ರಮ

A significant step towards document simplification
Raghu ShettyBy Raghu ShettyMarch 26, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಅಲೆಮಾರಿ ಜನಾಂಗದವರ ಜೀವನಮಟ್ಟವನ್ನು ಸುಧಾರಿಸಲು ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಸತಿ, ಶಿಕ್ಷಣ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿರುವ ಜಾತಿ ಪ್ರಮಾಣಪತ್ರ ಮತ್ತು ಪೂರಕ ದಾಖಲೆಗಳನ್ನು ಸರಳೀಕರಿಸಿ ನೀಡುವಂತೆ ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ತಿಳಿಸಿದ್ದಾರೆ.

100 ಕೋಟಿ ಅನುದಾನ : 4 ವಸತಿ ನಿಲಯ ಘೋಷಣೆ :
ರಾಜ್ಯದಲ್ಲಿ ಸುಮಾರು 11 ಲಕ್ಷ ಅಲೆಮಾರಿ ಸಮುದಾಯದವರು ಇದ್ದು, ಅವರ ಅಭಿವೃದ್ಧಿಗಾಗಿ 2026ರ ಬಜೆಟ್‌ನಲ್ಲಿ ರೂ.100 ಕೋಟಿ ವಿಶೇಷ ಅನುದಾನ ಮೀಸಲಿಡಲಾಗಿದೆ. ಜೊತೆಗೆ ಮಕ್ಕಳ ಶಿಕ್ಷಣಕ್ಕಾಗಿ 4 ವಸತಿ ನಿಲಯಗಳನ್ನು ಸ್ಥಾಪಿಸುವ ಯೋಜನೆ ಘೋಷಿಸಲಾಗಿದೆ.

ಈಗಾಗಲೇ 21 ಜಿಲ್ಲೆಗಳ ಪ್ರವಾಸ ಕೈಗೊಂಡು ಅಲೆಮಾರಿ ಜನಾಂಗದವರ ನೈಜ ಸ್ಥಿತಿಯನ್ನು ಪರಿಶೀಲಿಸಲಾಗಿದೆ. ಟೆಂಟ್ ಮತ್ತು ಜೋಪಡಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಸ್ವತಃ ಭೇಟಿ ನೀಡಿ, ಅವರಿಗೆ ವಸತಿ, ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗುರುವಾರ ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಜ್ಯದಲ್ಲಿ ಸುಮಾರು 11 ಲಕ್ಷ ಅಲೆಮಾರಿ ಸಮುದಾಯದವರು ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ 20,048 ಪರಿಶಿಷ್ಟ ಜಾತಿ ಮತ್ತು ೨,೭೨೮ ಪರಿಶಿಷ್ಟ ಪಂಗಡದ ಜನಸಂಖ್ಯೆ ಇದೆ. 2026ರ ಬಜೆಟ್‌ನಲ್ಲಿ ಈ ಸಮುದಾಯದ ಅಭಿವೃದ್ಧಿಗಾಗಿ ರೂ.100 ಕೋಟಿ ಅನುದಾನವನ್ನು ಮೀಸಲಿಡಲಾಗಿದ್ದು, ಮಕ್ಕಳ ಶಿಕ್ಷಣಕ್ಕಾಗಿ 4 ವಸತಿ ನಿಲಯಗಳನ್ನು ಘೋಷಿಸಲಾಗಿದೆ ಎಂದರು.

ವಸತಿ ಮತ್ತು ಹಕ್ಕುಪತ್ರ ವಿತರಣೆ ವೇಗ :
ವಸತಿರಹಿತ ಅಲೆಮಾರಿ ಜನಾಂಗದವರಿಗೆ 3200 ಮನೆಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ. ತೀರ್ಥಹಳ್ಳಿಯಲ್ಲಿ ಈಗಾಗಲೇ ವಸತಿ ಮಂಜೂರಾಗಿದ್ದು, ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ ನಡೆಯಲಿದೆ. ಜೊತೆಗೆ ಜಿಲ್ಲೆಯಲ್ಲಿ ವಸತಿ ಅಗತ್ಯವಿರುವವರ ಪಟ್ಟಿಯನ್ನು ಒಂದು ವಾರದೊಳಗೆ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.

ಜಿಲ್ಲೆಯ ಗೋಂದಿ ಚಟ್ನಹಳ್ಳಿ, ಕಲ್ಲಾಪುರ, ಮಲ್ಲಿಗೇನಹಳ್ಳಿ ಹಾಗೂ ನಗರದ ಎಂಆರ್‌ಎಸ್ ಭಾಗಗಳಲ್ಲಿ ವಾಸಿಸುವ ಸುಡುಗಾಡು ಸಿದ್ದ, ಹಂದಿಜೋಗಿ, ಗೋಸಂಗಿ, ಶಿಳ್ಳೇಕ್ಯಾತ, ಕೊರಚ ಸೇರಿದಂತೆ ಹಲವು ಅಲೆಮಾರಿ ಸಮುದಾಯಗಳ ಪ್ರದೇಶಗಳಿಗೆ ಭೇಟಿ ನೀಡಿ, ಶಾಶ್ವತ ವಸತಿ ಹಾಗೂ ನಿವೇಶನ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ, ಕಂದಾಯ, ಗ್ರಾಮೀಣಾಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಒಟ್ಟಾಗಿ ಈ ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿವೆ. ತೀರ್ಥಹಳ್ಳಿಯಲ್ಲಿ ವಾಸಿಸುವ ಕೆಲ ಕುಟುಂಬಗಳಿಗೆ ಈಗಾಗಲೇ ವಸತಿ ಮಂಜೂರಾಗಿದ್ದು, ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ ನಡೆಯಲಿದೆ ಎಂದರು.

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆಯೂ ವೇಗಗೊಳ್ಳಲಿದೆ. ಅಲೆಮಾರಿ ಜನಾಂಗದವರಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ದಾಖಲೆಗಳ ಕೊರತೆ ದೊಡ್ಡ ಅಡಚಣೆಯಾಗಿದ್ದು, ಆಧಾರ್ ಮತ್ತು ಜಾತಿ ಪ್ರಮಾಣಪತ್ರಗಳನ್ನು ನೀಡಲು ವಿಶೇಷ ಶಿಬಿರಗಳನ್ನು ಆಯೋಜಿಸಲು ಸೂಚಿಸಲಾಗಿದೆ ಎಂದರು.

ವಸತಿ ರಹಿತರಿಗೆ 3200 ಮನೆಗಳನ್ನು ನೀಡುವ ಯೋಜನೆ ಇದ್ದರೂ, ದಾಖಲೆಗಳ ಕೊರತೆಯಿಂದ ಬೇಡಿಕೆ ಕಡಿಮೆಯಾಗಿದೆ. ಆದ್ದರಿಂದ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿ ಅರ್ಹರಿಗೆ ಸೌಲಭ್ಯ ತಲುಪಿಸುವಂತೆ ಸೂಚಿಸಲಾಗಿದೆ. ಜೊತೆಗೆ, ವಸತಿ ರಹಿತರ ಪಟ್ಟಿಯನ್ನು ಒಂದು ವಾರದೊಳಗೆ ಸಿದ್ಧಪಡಿಸಲು ಸಂಬಂಧಿತ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದರು.

ಅಲೆಮಾರಿ ಜನಾಂಗದವರಿಗೆ ನಿಗಮದ ಸೌಲಭ್ಯಗಳ ಬಗ್ಗೆ ಅರಿವು ಕಡಿಮೆ ಇರುವುದರಿಂದ, ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ವಿಶೇಷ ಅನುದಾನ ನೀಡಲಾಗಿದೆ. ಈ ಮೂಲಕ ಸಮುದಾಯದ ಒಟ್ಟು ಅಭಿವೃದ್ಧಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದರು.

ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಮೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಇದ್ದರು.

 

shivamoga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ನಂದಿನಿ ಬೆಣ್ಣೆ, ತುಪ್ಪದ ದರ ಏರಿಕೆ; ಜುಲೈ 24ರಿಂದ ಪರಿಷ್ಕೃತ ಬೆಲೆ ಜಾರಿ

July 23, 2026

ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್: ‘ಯುಗ್ಮಾ ಟೆಕ್‌ಫೆಸ್ಟ್-2.0’ಗೆ ಸಜ್ಜು

July 22, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,274 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

By Raghu ShettyJuly 28, 20260

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.