Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ, : ನಗರದ ಪ್ರಸಿದ್ಧ ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದೇವಿಯನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿ ಮೆರವಣಿಗೆಯೊಂದಿಗೆ ಮಾರಿಕಾಂಬಾ ವನಕ್ಕೆ ಬಿಡಲಾಯಿತು. ಜಾತ್ರೆಯ ಅಂಗವಾಗಿ ನಗರದಲ್ಲಿ ಭವ್ಯವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಯ ಮೂರ್ತಿಗೆ ಪೂಜೆ, ಅಲಂಕಾರ ಹಾಗೂ ವಿಶೇಷ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಲಾಯಿತು. ನಂತರ ಸಾವಿರಾರು ಭಕ್ತರ ಜಯಘೋಷ, ಡೊಳ್ಳು-ತಾಳ, ನಾದಸ್ವರಗಳ ಮಧ್ಯೆ ಮೆರವಣಿಗೆ ಆರಂಭವಾಯಿತು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ಮಹಿಳಾ ಬಳಗಗಳು, ಯುವಕರ ತಂಡಗಳು ಭಾಗವಹಿಸಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿವೆ. ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿದ ಮೆರವಣಿಗೆಗೆ ಎಲ್ಲೆಡೆ ಭಕ್ತರು ಹೂವಿನ ಮಳೆ ಸುರಿಸಿ ಭಕ್ತಿಭಾವ ವ್ಯಕ್ತಪಡಿಸಿದರು. ಭದ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಹಾಗೂ ನಗರ ಪಾಲಿಕೆ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಮಾರಿಕಾಂಬಾ ವನದಲ್ಲಿ ವಿಧಿವಿಧಾನಗಳೊಂದಿಗೆ ದೇವಿಯ ವಿಸರ್ಜನೆ ನೆರವೇರಿತು. ಜಾತ್ರೆಯ ಯಶಸ್ವಿ ಆಯೋಜನೆಗೆ ದೇವಸ್ಥಾನ ಸಮಿತಿ, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರ ಗಮನಾರ್ಹವಾಗಿದೆ. ಹಬ್ಬದ ಅಂಗವಾಗಿ ನಗರದಲ್ಲಿ ಭಕ್ತಿಪರ ವಾತಾವರಣ…
ಶಿವಮೊಗ್ಗ: ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (16) ಪರೀಕ್ಷೆಗೆ ಮುನ್ನ ವಿಶೇಷ ತರಗತಿಗೆ ಹಾಜರಾದ ನಂತರ ಈ ಘಟನೆ ಸಂಭವಿಸಿದೆ. ಸಂಕೇತ್ ತನ್ನ ಶಾಲೆಯ ಹೊರಗೆ ಹುಡುಗರ ಗುಂಪಿನ ನಡುವೆ ನಡೆದ ವಾಗ್ವಾದದಲ್ಲಿ ಮಧ್ಯಪ್ರವೇಶಿಸಿದ್ದರು. ಈ ವೇಳೆ ವಾಗ್ವಾದ ನಡೆದು ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಸುದ್ದಿಗಾರರಿಗೆ ತಿಳಿಸಿದರು.ಸಂಕೇತ್ ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಗಳೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯಿಂದ ನಿನ್ನೆ ರಾತ್ರಿಯೇ ಎಸ್ಪಿ ನಿಖಿಲ್ ಘಟನೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಏಳು ಅಪ್ರಾಪ್ತ ವಯಸ್ಕರನ್ನು ಈ ಸಂಬಂಧ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು. ಕ್ರಿಕೆಟ್ ಮ್ಯಾಚ್ ವಾಗ್ವಾದದಿಂದ ಕೊಲೆ ಸಂಕೇತ್ ಹತ್ಯೆಯ ಬಗ್ಗೆ…
ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ ಶಿವಮೊಗ್ಗ: ನಗರದ ಊರಗಡೂರಿನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿರುವ ದುರ್ಘಟನೆ ಸೋಮವಾರ ನಡೆದಿದೆ. ಮೃತ ವಿದ್ಯಾರ್ಥಿ ಊರಗಡೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದನು. ಪರೀಕ್ಷೆ ಹಿನ್ನೆಲೆ ನಡೆಯುತ್ತಿದ್ದ ವಿಶೇಷ ತರಗತಿಗೆ ಹಾಜರಾಗಿ ಮನೆಗೆ ತೆರಳುತ್ತಿದ್ದ ವೇಳೆ ಶಾಲೆಯಿಂದ ಅನತಿ ದೂರದಲ್ಲಿ 3–4 ಅಪ್ರಾಪ್ತ ಬಾಲಕರ ಗುಂಪು ಹಲ್ಲೆ ನಡೆಸಿದರೆಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲಿದ್ದ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಿದರು. ಪ್ರಕರಣ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಘಟನೆಯ ಹಿನ್ನೆಲೆಯಲ್ಲಿ ನಗರಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು,…
ಶಿವಮೊಗ್ಗ : ಕೋಟೆ ಮಾರಿಕಾಂಬ ದೇವಸ್ಥಾನ ಜಾತ್ರೆ ನಾಳೆಯಿಂದ ಪ್ರಾರಂಭವಾಗುತ್ತಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಮರಿಯಪ್ಪ ತಿಳಿಸಿದ್ದಾರೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಭೆ ನಡೆಸಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ಬಾರಿ ಜಾತ್ರೆಯ ವಿಶೇಷ ಆಕರ್ಷಣೆಯಾಗಿ ೪೮ ಅಡಿ ಎತ್ತರದ ಮಹಾಕಾಳಿ ಪ್ರತಿಮೆ ಸ್ಥಾಪಿಸಲಾಗಿದ್ದು, ಇದು ರಾಜ್ಯದಲ್ಲೇ ಪ್ರಥಮವಾಗಿದೆ. ಅದ್ದೂರಿ ಅಲಂಕಾರ ಮಾಡಲಾಗಿದ್ದು, ಜರ್ಮನ್ ಟೆಂಟ್ ಅಳವಡಿಸಿ ಭಕ್ತರಿಗೆ ಅನುಕೂಲಕರ ವ್ಯವಸ್ಥೆ ಮಾಡಲಾಗಿದೆ. ಅಲಂಕಾರವನ್ನು ಶ್ರೀಕಾಂತ್ ಅವರ ನೇತೃತ್ವದಲ್ಲಿ ಸುಮಾರು ೧೦ ಸಾವಿರ ಗುಲಾಬಿ ಹೂಗಳಿಂದ ಮಾಡಲಾಗುತ್ತಿದೆ. ಒಟ್ಟು ೧೫ ಸಮಿತಿಗಳನ್ನು ರಚಿಸಿ ಜಾತ್ರೆ ವ್ಯವಸ್ಥೆಯನ್ನು ಸುಸೂತ್ರವಾಗಿ ನಿರ್ವಹಿಸಲಾಗುತ್ತಿದೆ ಎಂದರು. ವಿವಿಐಪಿ ಪಾಸ್‌ಗಳು ಸಿದ್ಧವಾಗಿವೆ. ವಿಕಲಾಂಗರಿಗೆ ಮತ್ತು ವಿವಿಐಪಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿಶೇಷ ದರ್ಶನಕ್ಕೆ ೨೦೦ ರೂ. ನಿಗದಿಪಡಿಸಲಾಗಿದೆ. ಕೆಳಗಡೆ ಮತ್ತು ಮೇಲ್ಗಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಗಾಂಧಿಬಜಾರ್ ಪ್ರದೇಶದಲ್ಲೂ ಅಗತ್ಯ ಸೌಕರ್ಯ…
ಶಿವಮೊಗ್ಗ: ನಗರದ ಪ್ರಮುಖ ಹಸಿರು ತಾಣವಾದ ಈ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, ಒಂದು ತಿಂಗಳೊಳಗೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದ್ದಾರೆ. ನಗರಸಭೆ ವತಿಯಿಂದ ನಿರ್ವಹಣೆಗೆ ಹರಾಜು ಪ್ರಕ್ರಿಯೆ ನಡೆಸಿದ ಸಂದರ್ಭದಲ್ಲಿ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ, ಇನ್ನುಮುಂದೆ ನಗರಸಭೆಯೇ ನೇರವಾಗಿ ನಿರ್ವಹಣೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈಗಾಗಲೇ ಆಟದ ಉಪಕರಣಗಳನ್ನು ದುರಸ್ತಿ ಮಾಡಲಾಗಿದ್ದು, ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಲಾಗಿದೆ. ಹಸಿರೀಕರಣಕ್ಕಾಗಿ ತುಂತುರು ನೀರಾವರಿ ವ್ಯವಸ್ಥೆ ಜಾರಿಗೊಳಿಸಿ, ಸಸಿಗಳಿಗೆ ನಿಯಮಿತವಾಗಿ ನೀರು ಒದಗಿಸಲಾಗುತ್ತಿದೆ. ಒಳಚರಂಡಿ ನೀರಿನಿಂದ ದುರ್ವಾಸನೆ ಬಾರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಪಾರ್ಕ್‌ನಲ್ಲಿ ವನ್ಯಜೀವಿ ಮಾಹಿತಿ ಹಾಗೂ ವಿವರಣೆ ಕೇಂದ್ರವನ್ನು ಸ್ಥಾಪಿಸಿ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗಿದೆ. ಮಕ್ಕಳಲ್ಲಿ ಪರಿಸರ ಮತ್ತು ವನ್ಯಜೀವಿಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕೇಂದ್ರವನ್ನು ರೂಪಿಸಲಾಗಿದೆ ಎಂದರು. ಕಾಮಗಾರಿಗಳ ಮೇಲ್ವಿಚಾರಣೆಗೆ ಉಪ ಆಯುಕ್ತರು ಮತ್ತು ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಅಧಿಕಾರಿಗಳ…
ನವದೆಹಲಿ, :ಪರಿಸರ ಸೂಕ್ಷ್ಮ ಹಾಗೂ ಅಪಘಾತಗಳಿಗೆ ಹೆಸರಾದ ಆಗುಂಬೆ ಘಾಟ್ ರಸ್ತೆಯ ಮೇಲ್ದರ್ಜೆಗೇರಿಸುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-169ಎ ವ್ಯಾಪ್ತಿಯ ಆಗುಂಬೆ ಘಾಟ್ ರಸ್ತೆ (ಕಿ.ಮೀ. 30.75 ರಿಂದ 51.60) ಅಭಿವೃದ್ಧಿಗಾಗಿ ಕಾರ್ಯಸಾಧ್ಯತಾ ಅಧ್ಯಯನ, ಸಮೀಕ್ಷೆ, ಭೂ ಯೋಜನೆ ಹಾಗೂ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಟೆಂಡರ್ ಆಹ್ವಾನಿಸಿದೆ. ಈ ಯೋಜನೆಯಡಿ ರಸ್ತೆನ್ನು ಎರಡು ಲೇನ್‌ಗಳಿಗೆ ವಿಸ್ತರಿಸುವುದರ ಜೊತೆಗೆ ಎರಡೂ ಬದಿ ಪಾದಚಾರಿ ಮಾರ್ಗ ಕಲ್ಪಿಸುವ ಉದ್ದೇಶವಿದೆ. ಗಮನಾರ್ಹವಾಗಿ, ಡಿಪಿಆರ್ ವ್ಯಾಪ್ತಿಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಕಾರ್ಯಸಾಧ್ಯತೆಯನ್ನು ಪರಿಶೀಲಿಸುವ ಅಂಶವೂ ಸೇರಿದ್ದು, ಸುರಂಗ ವಿನ್ಯಾಸ ತಜ್ಞರು ಹಾಗೂ ಹಿರಿಯ ಭೂ-ಭೌತಶಾಸ್ತ್ರಜ್ಞರ ಸೇವೆ ಪಡೆಯಲು ಹಾಗೂ ಭೂ-ತಾಂತ್ರಿಕ ತನಿಖೆ ನಡೆಸಲು ಪ್ರತ್ಯೇಕ ಬಜೆಟ್ ವ್ಯವಸ್ಥೆ ಮಾಡಲಾಗಿದೆ. ಈ ಡಿಪಿಆರ್ ಅನ್ನು ಆರು ತಿಂಗಳೊಳಗೆ ಸಿದ್ಧಪಡಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ 2.33 ಕೋಟಿ ರೂ. ಮೀಸಲಿಡಲಾಗಿದೆ. ಸಂಸದ ಬಿ.ವೈ.…
ಶಿವಮೊಗ್ಗ : ಕಾರಿನ ಮೇಲೆ ಕಾಡುಕೋಣವೊಂದು ಹಾರಿ ಕಾರು ಜಖಂಗೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡು ಬಳಿ ನಡೆದಿದ್ದು ಕಾರಿನಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಸ್ತೆಯಲ್ಲಿ ಕಾಡುಕೋಣದ ಹಿಂಡು ಸಂಚರಿಸುವಾಗ ಕಾರೊಂದು ಅಡ್ಡ ಬಂದ ಪರಿಣಾಮ ಕಾರಿನ ಮೇಲೆ ಕಾಡುಕೋಣ ಹಾರಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಹರಿಹರಪುರದಿಂದ ಕಮ್ಮರಡಿ ಮಾರ್ಗವಾಗಿ ತೀರ್ಥಹಳ್ಳಿಗೆ ಬರುತ್ತಿದ್ದ ಕಾರಿಗೆ ಅಡ್ಡ ಬಂದ ಕಾಡುಕೋಣದ ಹಿಂಡಿನಲ್ಲಿ ಒಂದು ಕಾಡುಕೋಣ ಕಾರಿನ ಮೇಲೆ ಹಾರಿದ ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಿದೆ.
ಸಾಗರದ ಶ್ರೀ ಮಾರಿಕಾಂಬಾ ದೇವಿಯ 9 ದಿನಗಳ ಜಾತ್ರೆ ಜನಸಾಗರದ ನಡುವೆ ಮಂಗಳವಾರದಿಂದ ಆರಂಭಗೊಂಡಿದೆ. ಮೊದಲ ದಿನ ಅಮ್ಮನವರ ದರ್ಶನಕ್ಕೆ ಲಕ್ಷಾಂತರ ಭಕ್ತರು ಬರುವ ಮೂಲಕ ದಾಖಲೆ ನಿರ್ಮಾಣವಾಗಿದೆ. ಬರುವ ಭಕ್ತರಿಗೆ ಸುಲಲಿತವಾಗಿ ದೇವಿ ದರ್ಶನ ಮಾಡಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡಿದ್ದರೇ, ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನ ಭಕ್ತರು ಸರದಿ ಸಾಲಿನಲ್ಲಿ ದೇವಿ ದರ್ಶನಕ್ಕೆ ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿsಸಲಾಗಿತ್ತು. ದೇವಿಯ ದರ್ಶನಕ್ಕೆ ಪಾಸ್ ವ್ಯವಸ್ಥೆ ಸಹ ಕಲ್ಪಿಸಲಾಗಿತ್ತು. ಕೆಲವರು ಪಾಸ್ ಮೂಲಕ ಕುಟುಂಬ ಸಮೇತರಾಗಿ ಅಮ್ಮನವರ ದರ್ಶನ ಪಡೆದರು. ಬೇರೆಬೇರೆ ಸಂಘ ಸಂಸ್ಥೆಗಳು ಅಮ್ಮನವರ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತ ಭಕ್ತರಿಗೆ ನೀರು, ಪಾನಕ ಇನ್ನಿತರೆ ನೀಡಿ ಸೇವೆ ಮಾಡಿದರು. ಸಾಗರದ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬೆ ದರ್ಶನಕ್ಕೆ ಭಕ್ತರು ನೂಗುನುಗ್ಗಲು ಮಾಡಿದ್ದು ಕಂಡು ಬಂದಿದೆ. ರಾತ್ರಿ ೯ ಗಂಟೆಯಿಂದಲೇ ಮಾರಿಕಾಂಬಾ ದೇವಿ ಪೂಜೆಗೆ ಜನರು ಸರದಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ ನಿಂತವರಿಗೆ ಬೆಳಿಗ್ಗೆ ೫ ಗಂಟೆಗೆ…
ಶಿವಮೊಗ್ಗ: ಕೇಂದ್ರ ಹಣಕಾಸು ಸಚಿವರು ಮಂಡಿಸಿದ 9ನೇ ಬಜೆಟ್ ಆತ್ಮನಿರ್ಭರ ಭಾರತ, ವಿಕಸಿತ ಭಾರತ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದ ಸ್ಪಷ್ಟ ದೃಷ್ಟಿಕೋನವನ್ನು ಹೊಂದಿದ್ದು, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಜೆಟ್ ಜನಪ್ರಿಯತೆಯ ಲೆಕ್ಕಾಚಾರಕ್ಕಲ್ಲ, ರಾಷ್ಟ್ರದ ದೀರ್ಘಕಾಲೀನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ ಎಂದರು. ಜಾಗತಿಕ ಆರ್ಥಿಕ ಅಸ್ಥಿರತೆಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಧೈರ್ಯಶಾಲಿ ಸುಧಾರಣೆಗಳನ್ನು ಕೈಗೊಳ್ಳಲಾಗಿದೆ. ಕೈಗಾರಿಕೆ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ವಲಯಗಳಿಗೂ ಸಮಾನ ಆದ್ಯತೆ ನೀಡಲಾಗಿದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿದೆ ಎಂದು ಹೇಳಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಹಣಕಾಸು ಕೊರತೆಯನ್ನು 4.4 ಶೇಕಡಕ್ಕೆ ಇಳಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಲ್ಪ ಅನುದಾನ ನೀಡಲಾಗುತ್ತಿದ್ದರೆ, ಎನ್‌ಡಿಎ ಸರ್ಕಾರದ ಕಾಲದಲ್ಲಿ ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ…
ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೊಲೀಸ್ ಇಲಾಖೆ ಕುರಿತು ಜನಸಾಮಾನ್ಯರಲ್ಲಿ ಗಂಭೀರ ಪ್ರಶ್ನೆಗಳು ಮೂಡುತ್ತಿವೆ. ಸಮಾಜದ ರಕ್ಷಕರಾಗಬೇಕಾದ ಪೊಲೀಸರು ಕೆಲವೊಮ್ಮೆ ದರ್ಪ, ದೌರ್ಜನ್ಯ ಹಾಗೂ ನಿರ್ಲಕ್ಷ್ಯದ ಪ್ರತೀಕವಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸರು ನಮ್ಮ ರಕ್ಷಕರು, ಕಾನೂನಿನ ಜಾರಿಗಾರರು, ಸಮಾಜದ ಶಾಂತಿಯ ಕಾವಲುಗಾರರು ಎಂಬ ನಂಬಿಕೆ ಜನರಲ್ಲಿ ಇದ್ದರೂ, ಠಾಣೆಗಳಿಗೆ ಹೋಗಲು ಇನ್ನೂ ಭಯಪಡುವ ವಾತಾವರಣ ನಿರ್ಮಾಣವಾಗಿರುವುದು ಕಳವಳಕಾರಿಯಾಗಿದೆ. ದೂರುದಾರರೊಂದಿಗೆ ಕೆಲ ಪೊಲೀಸ್ ಸಿಬ್ಬಂದಿ ನಡೆದುಕೊಳ್ಳುವ ರೀತಿ, ಪ್ರಭಾವಿಗಳು ಹಾಗೂ ಹಣವಂತರಿಗೆ ಮಾತ್ರ ನ್ಯಾಯ ದೊರೆಯುತ್ತದೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಗಟ್ಟಿಯಾಗಿ ಬೇರೂರುವಂತೆ ಮಾಡಿದೆ. ಓಸಿ ಬಿಡ್ಡರ್‌ಗಳು, ಕಳ್ಳರು, ರೌಡಿಗಳೇ ಇಂದು ಸಮಾಜದ ಮುಂಚೂಣಿ ನಾಯಕರೆಂಬಂತೆ ಹೊರಹೊಮ್ಮುತ್ತಿರುವುದು ಕಳವಳಕಾರಿ. ಅಕ್ರಮ ಹಣ ಮತ್ತು ಬಲದ ನೆರವಿನಿಂದ ದೇವಸ್ಥಾನ ಸಮಿತಿಗಳ ಅಧ್ಯಕ್ಷರು, ಸಮಾಜ ಸೇವಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರಾಗುತ್ತಿರುವ ಈ ವ್ಯಕ್ತಿಗಳ ರಾಜಕೀಯ–ಸಾಮಾಜಿಕ ಪ್ರಭಾವಕ್ಕೆ ಕಡಿವಾಣ ಹಾಕಿದರೆ, ಅಕ್ರಮ ದಂಧೆಗಳು ಸಹಜವಾಗಿಯೇ ಕುಂಠಿತವಾಗಲಿವೆ. ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ…