Author: Raghu Shetty

“ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ಲಾಠಿಚಾರ್ಜ್‌ಗೆ ಅಮಿತ್ ಶಾ ಹೊಣೆ, ಕೆಪಿಎಸ್‌ಸಿ ಅಕ್ರಮಕ್ಕೆ ಕಠಿಣ ಶಿಕ್ಷೆ ಆಗಲಿ; ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಮಧು ಬಂಗಾರಪ್ಪ ಶಿವಮೊಗ್ಗ: ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ವಿರುದ್ಧವೇ ಈಗ ಸೋಶಿಯಲ್ ಮೀಡಿಯಾ ತಿರುಗಿಬಿದ್ದಿದೆ. ಯುವಕರು ಬೀದಿಗಿಳಿದು ಹೋರಾಟ ನಡೆಸಿದ್ದು, ಅವರ ಹೋರಾಟಕ್ಕೆ ದೊಡ್ಡ ಜಯ ಸಿಕ್ಕಿದೆ ಎಂದರು. ಯಾವುದೇ ನಿಯಮಗಳನ್ನು ಪಾಲಿಸದೆ ಅಮಾಯಕರ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ. ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಅಮಾಯಕರ ಸಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನೇರ ಹೊಣೆ ಎಂದು ಗಂಭೀರ ಆರೋಪ ಮಾಡಿದರು. ಯುವಕರ ಭವಿಷ್ಯದೊಂದಿಗೆ ಆಟವಾಡುವ ಹಕ್ಕು ಯಾವುದೇ ಸರ್ಕಾರಕ್ಕೂ…

Read More

ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಭಾರಿ ಗಾಳಿ-ಮಳೆಯ ಸಂದರ್ಭದಲ್ಲಿ ಮರ ಬಿದ್ದು ಕಾಲೇಜು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಹಿರೆಸಾನಿ ಗ್ರಾಮದ ನಿಖಿತಾ ಎಂದು ಗುರುತಿಸಲಾಗಿದೆ. ನಿಖಿತಾ ಅವರು ಗರ್ತಿಕೆರೆ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತಿದ್ದು ತರಗತಿ ಮುಗಿಸಿ ಇಬ್ಬರು ಸ್ನೇಹಿತರೊಂದಿಗೆ ಶುಕ್ರವಾರ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾರ್ಗ ಮಧ್ಯೆ ಭಾರಿ ಗಾಳಿ ಮತ್ತು ಮಳೆಯ ಪರಿಣಾಮ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿರುವುದನ್ನು ಗಮನಿಸಿದ ಮೂವರು ವಿದ್ಯಾರ್ಥಿಗಳು ಸುರಕ್ಷತೆಗಾಗಿ ಹಿಂದಕ್ಕೆ ಸರಿದು ಓಡಲು ಮುಂದಾಗಿದ್ದಾರೆ. ಇದೇ ವೇಳೆ ರಸ್ತೆ ಬದಿಯಲ್ಲಿದ್ದ ದೊಡ್ಡ ಮರವೊಂದು ಏಕಾಏಕಿ ಉರುಳಿ ನಿಖಿತಾ ಅವರ ಮೇಲೆ ಬಿದ್ದಿದೆ. ಘಟನೆಯ ಪರಿಣಾಮ ನಿಖಿತಾ ಅವರ ಎಡಗಾಲಿಗೆ ತೀವ್ರ ಪೆಟ್ಟಾಗಿದ್ದು, ಕಾಲು ಸಂಪೂರ್ಣವಾಗಿ ಮುರಿದಿರುವುದಾಗಿ ತಿಳಿದುಬಂದಿದೆ. ತೀವ್ರ ನೋವಿನಿಂದ ವಿದ್ಯಾರ್ಥಿನಿ ಕೂಗಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣವೇ ಧಾವಿಸಿ ರಕ್ಷಣೆ…

Read More

ಶಿವಮೊಗ್ಗ,  : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಬ್ರಹ್ಮಾವರ ಕೃಷಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ನಲ್ಲಿ ಖಾಲಿ ಉಳಿದಿರುವ 31 ಸೀಟುಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್ ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು).ದಿನಾಂಕ: 06-08-2026 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು…

Read More

ಶಿವಮೊಗ್ಗ: ಮಳೆಗಾಲ ಆರಂಭವಾದರೂ ಸಮರ್ಪಕ ಮಳೆಯಾಗದೆ ಸಂಕಷ್ಟದಲ್ಲಿರುವ ರೈತರಿಗೆ ಇದೀಗ ಪಂಪ್‌ಸೆಟ್‌ಗಳ ವಿದ್ಯುತ್ ಕೇಬಲ್ ಕಳ್ಳತನ ಮತ್ತೊಂದು ಹೊಡೆತ ನೀಡಿದೆ. ಕೂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾಪುರ, ಜಾವಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪಂಪ್‌ಸೆಟ್‌ಗಳಿಗೆ ಅಳವಡಿಸಿದ್ದ ಬೆಲೆಬಾಳುವ ತಾಮ್ರದ ವಿದ್ಯುತ್ ಕೇಬಲ್‌ಗಳನ್ನು ಕಿಡಿಗೇಡಿಗಳು ಕಳವು ಮಾಡಿರುವುದರಿಂದ ರೈತರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ತುಂಗಾ ನದಿ ದಂಡೆಯ ಸಮೀಪ ನೀರಾವರಿಗಾಗಿ ಅಳವಡಿಸಲಾಗಿದ್ದ ಸುಮಾರು ೪೦ಕ್ಕೂ ಹೆಚ್ಚು ಪಂಪ್‌ಸೆಟ್‌ಗಳ ಮೋಟಾರ್ ಮನೆಗಳ ಬೀಗ ಒಡೆದು, ಅವುಗಳಿಗೆ ಸಂಪರ್ಕಿಸಲಾಗಿದ್ದ ಕಾಪರ್ ಕೇಬಲ್‌ಗಳನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ. ಇದರಿಂದ ಬೆಳೆಗಳಿಗೆ ನೀರುಣಿಸುವ ಕಾರ್ಯಕ್ಕೆ ತೊಂದರೆಯಾಗಿದ್ದು, ರೈತರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಪಂಪ್‌ಸೆಟ್, ಮೋಟಾರ್ ಹಾಗೂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ರೈತರನ್ನು ಮತ್ತಷ್ಟು ಚಿಂತೆಗೆ ದೂಡಿದೆ. ಈ ಘಟನೆಯಲ್ಲಿ ಸುಮಾರು ೩ ಲಕ್ಷ ರೂ. ಮೌಲ್ಯದ ೪೦ಕ್ಕೂ ಹೆಚ್ಚು ವಿದ್ಯುತ್ ಕೇಬಲ್‌ಗಳನ್ನು ಕಳವು ಮಾಡಲಾಗಿದೆ ಎಂದು ರೈತರು…

Read More

ಬೆಂಗಳೂರು : ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್‌ನ ಬೆಣ್ಣೆ ಹಾಗೂ ತುಪ್ಪದ ದರವನ್ನು ಹೆಚ್ಚಿಸಿದ್ದು, ಪರಿಷ್ಕೃತ ದರಗಳು ಜುಲೈ 24ರಿಂದ ಜಾರಿಗೆ ಬರಲಿವೆ. ಕೆಎಂಎಫ್ ಪ್ರಕಟಿಸಿರುವ ಹೊಸ ದರಗಳ ಪ್ರಕಾರ, ನಂದಿನಿ ತುಪ್ಪದ ಬೆಲೆಯನ್ನು ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ಬೆಲೆಯನ್ನು ಪ್ರತಿ ಕೆಜಿಗೆ 22 ರೂ. ಹೆಚ್ಚಳ ಮಾಡಲಾಗಿದೆ. ರಾಜ್ಯಾದ್ಯಂತ ಇರುವ ಎಲ್ಲಾ ನಂದಿನಿ ಮಾರಾಟ ಮಳಿಗೆಗಳಲ್ಲಿ ಹೊಸ ದರಗಳು ಅನ್ವಯವಾಗಲಿವೆ. ದರ ಏರಿಕೆಯಿಂದ ಗೃಹ ಬಳಕೆದಾರರ ಜೊತೆಗೆ ಹೋಟೆಲ್, ಬೇಕರಿ ಹಾಗೂ ಸಿಹಿ ತಿಂಡಿ ತಯಾರಿಕಾ ಉದ್ಯಮಗಳ ಮೇಲೂ ಪರಿಣಾಮ ಬೀಳುವ ಸಾಧ್ಯತೆ ಇದೆ. ತುಪ್ಪ ಮತ್ತು ಬೆಣ್ಣೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ವ್ಯಾಪಾರಿಗಳು ಉತ್ಪಾದನಾ ವೆಚ್ಚ ಹೆಚ್ಚಳದ ಆತಂಕ ವ್ಯಕ್ತಪಡಿಸಿದ್ದಾರೆ. ದರ ಏರಿಕೆಗೆ ಸಮರ್ಥನೆ ನೀಡಿರುವ ಕೆಎಂಎಫ್, ಹಾಲು ಒಕ್ಕೂಟಗಳ ನಿರ್ವಹಣಾ ವೆಚ್ಚ, ಪ್ಯಾಕೇಜಿಂಗ್ ಸಾಮಗ್ರಿಗಳ ಬೆಲೆ ಹಾಗೂ ಸಾಗಣೆ ವೆಚ್ಚ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ…

Read More

​ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ವಾತಾವರಣ ಉದ್ವಿಗ್ನಗೊಳ್ಳುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟಿದ್ದಾರೆ. ​ಬ್ಯಾನರ್ ಹರಿದು ಆಕ್ರೋಶ ​ಕಾಂಗ್ರೆಸ್ ಪ್ರತಿಭಟನೆಯಿಂದ ಕೆರಳಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿದ್ದ ಬ್ಯಾನರ್‌ಗಳನ್ನು ಹರಿದುಹಾಕಿ ತಮ್ಮ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಚೇರಿಯೊಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಪೊಲೀಸರೊಂದಿಗೆ ವಾಗ್ವಾದ ​ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ತಾರಕಕ್ಕೇರಿದ ವಾಗ್ವಾದ ನಡೆಯಿತು. ವಶಕ್ಕೆ ಪಡೆಯುವ ಸಂದರ್ಭದಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ಪೊಲೀಸ್ ಜೀಪ್ ಏರಲು ಸ್ಪಷ್ಟವಾಗಿ ನಿರಾಕರಿಸಿದ. ಕೊನೆಗೆ ಪೊಲೀಸರು ಆತನನ್ನು ಬಲವಂತವಾಗಿ ಎತ್ತಿ ಜೀಪ್‌ಗೆ ಹಾಕಿಕೊಂಡು ಸ್ಥಳದಿಂದ ಕರೆದೊಯ್ದರು. ​ಪ್ರತಿಭಟನೆಯ ತೀವ್ರತೆ ಹೆಚ್ಚಾಗುತ್ತಿದ್ದಂತೆ, ಕಾರ್ಯಕರ್ತನೊಬ್ಬ ಕೈಯಲ್ಲಿ…

Read More

ಶಿವಮೊಗ್ಗ : ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪರೀಕ್ಷೆಯ ಅಕ್ರಮ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಭಾರೀ ಹೈಡ್ರಾಮಾ ನೆರವೇರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ​ಮೆರವಣಿಗೆಯು ಬಿಜೆಪಿ ಕಚೇರಿಯತ್ತ ಸಾಗುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆಯಲು ಯತ್ನಿಸಿದರು. ಆದರೆ, ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ಭದ್ರತಾ ವಲಯವನ್ನು ಭೇದಿಸಿ, ಬ್ಯಾರಿಕೇಡ್‌ಗಳನ್ನು ತಳ್ಳಿ ಬಿಜೆಪಿ ಕಚೇರಿಯೊಳಗೆ ನುಗ್ಗಲು ಯತ್ನಿಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಹೈಡ್ರಾಮಾವೊಂದು ನಡೆಯಿತು. ಪೊಲೀಸರು ವಶಕ್ಕೆ ಪಡೆದು ವಾಹನಕ್ಕೆ ಹತ್ತಿಸುತ್ತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತನೊಬ್ಬ ಪೊಲೀಸ್ ಜೀಪ್ ಮೇಲೆಯೇ ಹತ್ತಿ ನಿಂತು ಕಾಂಗ್ರೆಸ್ ಪಕ್ಷದ ಬಾವುಟ ಬೀಸುತ್ತಾ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದನು. ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಜೀಪ್ ಮೇಲೇರಿದ್ದ…

Read More

ಶಿವಮೊಗ್ಗ: ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜುಲೈ 24 ಮತ್ತು 25ರಂದು ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಕೃತಕ ಬುದ್ಧಿಮತ್ತೆ (ಎಐ) ಹ್ಯಾಕಥಾನ್ ಆಯೋಜಿಸಲಾಗುತ್ತಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ತಿಳಿಸಿದ್ದಾರೆ. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿರುವ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು, ಅವರಲ್ಲಿ ಸೃಜನಶೀಲ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ನೈಜ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಬೆಳೆಸುವುದು ಹ್ಯಾಕಥಾನ್‌ನ ಪ್ರಮುಖ ಉದ್ದೇಶವಾಗಿದೆ ಎಂದರು. ಎರಡು ದಿನಗಳ ಕಾಲ ನಿರಂತರವಾಗಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ ಹಾಗೂ ವಿವಿಧ ರಾಜ್ಯಗಳ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ತಂಡಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಹ್ಯಾಕಥಾನ್‌ನಲ್ಲಿ ವಿದ್ಯಾರ್ಥಿಗಳಿಗೆ ಎರಡು ಪ್ರಮುಖ ವಿಷಯಗಳ ಕುರಿತು ಸವಾಲುಗಳನ್ನು ನೀಡಲಾಗುತ್ತದೆ. ಮೊದಲ ವಿಭಾಗದಲ್ಲಿ ‘ಕೃತಕ…

Read More

ನವದೆಹಲಿ: ರಾಷ್ಟ್ರ ಪ್ರಶಸ್ತಿ ಹಾಗೂ ಪದ್ಮಶ್ರೀ ಪುರಸ್ಕೃತ ಗಾಯಕಿ, ಬಿಜೆಪಿ ನಾಯಕಿ ಅನುರಾಧಾ ಪೌಡ್ವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ಟೀಕೆ ವ್ಯಕ್ತಪಡಿಸಿದ್ದಾರೆ. ಭಾರತವನ್ನು ‘ವಿಶ್ವಗುರು’ ಎಂದು ಕರೆಯುವ ಮೊದಲು ಶಿಕ್ಷಣ ಸೇರಿದಂತೆ ಮೂಲಭೂತ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ನಡೆದ ಪಾಡ್‌ಕಾಸ್ಟ್‌ ಸಂದರ್ಶನದಲ್ಲಿ ಮಾತನಾಡಿದ ಅವರು, “ದೇಶದಲ್ಲಿ ಸುಮಾರು ೯೩ ಸಾವಿರ ಶಾಲೆಗಳು ಮುಚ್ಚಲ್ಪಟ್ಟಿವೆ ಎಂದು ಹೇಳಲಾಗುತ್ತಿದೆ. ಶಿಕ್ಷಣದ ಅಡಿಪಾಯವೇ ದುರ್ಬಲವಾಗಿರುವಾಗ ‘ವಿಶ್ವಗುರು’ ಎಂಬ ಘೋಷಣೆಗೆ ಅರ್ಥವೇನು?” ಎಂದು ಪ್ರಶ್ನಿಸಿದರು. ಅವರು “ಕೇವಲ ಘೋಷಣೆಗಳಿಂದ ದೇಶ ಅಭಿವೃದ್ಧಿಯಾಗುವುದಿಲ್ಲ. ಕಾರ್ಯರೂಪಕ್ಕೆ ಬರುವ ನೀತಿಗಳು ಮತ್ತು ಜನರಿಗೆ ನೇರವಾಗಿ ಪ್ರಯೋಜನವಾಗುವ ಯೋಜನೆಗಳೇ ನಿಜವಾದ ಅಭಿವೃದ್ಧಿಯ ಮಾನದಂಡ” ಎಂದು ಹೇಳಿದರು. ರಾಮರಾಜ್ಯದ ಕುರಿತು ಪ್ರಸ್ತಾಪಿಸಿದ ಅನುರಾಧಾ ಪೌಡ್ವಾಲ್, “ರಾಮಮಂದಿರದಲ್ಲಿಯೇ ಕಳ್ಳತನ ನಡೆದಿರುವಾಗ ಆದರ್ಶ ಆಡಳಿತದ ಬಗ್ಗೆ ಮಾತನಾಡುವುದು ಸಾಕಾಗುವುದಿಲ್ಲ. ‘ವಿಶ್ವಗುರು’ ಆಗಲು ಅಗತ್ಯವಾದ ಮಾನದಂಡಗಳನ್ನು ಮೊದಲು ಪೂರೈಸಬೇಕು” ಎಂದು ಹೇಳಿದರು. ಅನುರಾಧಾ ಪೌಡ್ವಾಲ್…

Read More

​ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಗಾಲ ಬಂತೆಂದರೆ ಸಾಕು, ರಸ್ತೆ ಸಂಪರ್ಕ ಕಡಿತಗೊಳ್ಳುವುದು, ವಿದ್ಯುತ್ ಕೈಕೊಡುವುದು ಸರ್ವೇ ಸಾಮಾನ್ಯ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಮನೆಗೆ ಬೆಳಕು ನೀಡಲು ವಿದ್ಯುತ್ ಇಲಾಖೆಯ ಸಿಬ್ಬಂದಿಗಳು ಪಡುವ ಪಾಡು ಅಷ್ಟಿಷ್ಟಲ್ಲ. ಇದಕ್ಕೆ ಸಾಕ್ಷಿ ಎಂಬಂತೆ, ಶಿವಮೊಗ್ಗ ಜಿಲ್ಲೆಯಲ್ಲಿ ಮೆಸ್ಕಾಂ ಸಿಬ್ಬಂದಿಯಿಬ್ಬರು ತಮ್ಮ ಜೀವವನ್ನೇ ಪಣಕ್ಕಿಟ್ಟು ಮಾಡಿರುವ ಸಾಹಸದ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ​ನಡೆದಿದ್ದೇನು? ​ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಂಟೆಹೊಳೆಯಲ್ಲಿ ಈ ರೋಮಾಂಚಕ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಕುಂಟೆಹೊಳೆ ನದಿಯು ಅಪಾಯದ ಮಟ್ಟ ಮೀರಿ ರಭಸವಾಗಿ ಹರಿಯುತ್ತಿತ್ತು. ಇದೇ ಹೊಳೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ಮುಖ್ಯ ವಿದ್ಯುತ್ ಲೈನ್ ಕಟ್ ಆಗಿ ನದಿಗೆ ಬಿದ್ದಿತ್ತು. ಇದರಿಂದಾಗಿ ಸುತ್ತಮುತ್ತಲಿನ ಹಳ್ಳಿಗಳು ಸಂಪೂರ್ಣವಾಗಿ ಕತ್ತಲಲ್ಲಿ ಮುಳುಗಿದ್ದವು. ನದಿಯ ನೀರಿನ ಹರಿವು ತೀವ್ರವಾಗಿದ್ದರಿಂದ ವಿದ್ಯುತ್ ಲೈನ್ ಸರಿಪಡಿಸುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ​ಜೀವದ ಹಂಗು ತೊರೆದ ಮೆಸ್ಕಾಂ ವೀರರು! ​ಆದರೆ, ಕತ್ತಲಲ್ಲಿ…

Read More