Author: Raghu Shetty

ಶಿವಮೊಗ್ಗ : ಹಳೇ ದ್ವೇಷದ ಹಿನ್ನೆಲೆ ಅಡಿಕೆ ಮರಗಳನ್ನೇ ದುಷ್ಕರ್ಮಿಗಳು ಕಡಿದು ನಾಶ ಮಾಡಿರುವ ಘಟನೆ ಹೊಸನಗರ ತಾಲೂಕಿನ ಬ್ರಾಹ್ಮಣ ತರುವೆ ಗ್ರಾಮದ ಚಕ್ರೆ ಎಂಬಲ್ಲಿ ನಡೆದಿದೆ. ಚಕ್ರೆಯ ನಾರಾಯಣ ಮೂರ್ತಿ ಎಂಬುವವರಿಗೆ ಸೇರಿದ ಅಡಿಕೆ ತೋಟಕ್ಕೆ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಪುಂಡಾಟ ಮೆರೆದಿದ್ದಾರೆ. ಅಲ್ಲದೇ ತೋಟದಲ್ಲಿದ್ದ ಜೆಟ್ ಪೈಪ್ ಸೇರಿದಂತೆ ಹಲವು ವಸ್ತುಗಳನ್ನ ನಾಶ ಪಡಿಸಿದ್ದಾರೆ. ತಂತಿ ಬೇಲಿಯನ್ನೂ ಕಟ್ ಮಾಡಿದ್ದಾರೆ. ಏಕಾಏಕಿ ರಾತ್ರಿ ವೇಳೆ ಅಡಿಕೆ ತೋಟಕ್ಕೆ ನುಗ್ಗಿದ ಐದಾರು ಜನರ ತಂಡ ಕೃತ್ಯ ಎಸಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ: ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ತಿಳಿಸಿದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಲಾಗಿದ್ದ 35 ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೋಲುಗಳು ಜೀವನದ ಅವಿಭಾಜ್ಯ ಅಂಗವಾಗಿದ್ದು, ಅವುಗಳಿಂದ ಪಾಠ ಕಲಿದು ಮುಂದಕ್ಕೆ ಸಾಗುವುದು ಯಶಸ್ಸಿನ ಮೂಲವೆಂದು ತಿಳಿಸಿದರು. ಪದವಿ ಕೇವಲ ಜ್ಞಾನದ ಸಂಕೇತವಲ್ಲದೆ, ಸಮಾಜಕ್ಕೆ ಉತ್ತಮ ದಿಕ್ಕು ನೀಡಬಲ್ಲ ನಿಮ್ಮ ಸಾಮರ್ಥ್ಯದ ಪ್ರತೀಕವಾಗಿದೆ ಎಂದು ಹೇಳಿದರು. ಈ ಸಾಧನೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ತರವಾಗಿದ್ದು, ಅವರ ಮಾರ್ಗದರ್ಶನವಿಲ್ಲದೆ ಈ ಸಾಧನೆ ಸಾಧ್ಯವಾಗುತ್ತಿರಲಿಲ್ಲ ಎಂದು ಅಭಿನಂದಿಸಿದರು. ಇಂದಿನ ಜಗತ್ತು ವಿಜ್ಞಾನ, ತಂತ್ರಜ್ಞಾನ ಮತ್ತು ನವೀನತೆಯ ವೇಗದ ಬದಲಾವಣೆಯನ್ನು ಅನುಭವಿಸುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ಸೈನ್ಸ್ ಮತ್ತು ಡಿಜಿಟಲ್ ಕ್ರಾಂತಿ ಹೊಸ ಅವಕಾಶಗಳ ಜೊತೆಗೆ ಸವಾಲುಗಳನ್ನೂ ತಂದಿವೆ. ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುವ ಮನೋಭಾವ ಬೆಳೆಸಿ ತಮ್ಮ ಕೌಶಲ್ಯಗಳನ್ನು ಕಾಲಕ್ಕೆ ತಕ್ಕಂತೆ ನವೀಕರಿಸಿಕೊಳ್ಳಬೇಕು…

Read More

ಶಿವಮೊಗ್ಗ: ಮೇ.೪ ರಂದು ಪೂರ್ವ ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಮಂಜುನಾಥ್ ಮತ್ತು ಸಿಪಿಸಿ ಸಂತೋಷ್ ನಗರದ ಗಾಂಧಿ ಬಜಾರ್ ಪ್ರದೇಶದಲ್ಲಿ ಸಂಚಾರ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೆ ಸಂಚಾರ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನವನ್ನು ಚಲಾಯಿಸುತ್ತಿದ್ದ ಸವಾರನನ್ನು ಗಮನಿಸಿ, ತಡೆದು ನಿಲ್ಲಿಸಲು ಸೂಚಿಸಿದ ವೇಳೆ ಬೈಕ್ ಸವಾರ ಸಯ್ಯದ್ ಮುಜಾಮಿಲ್ ರಸ್ತೆ ಮಧ್ಯೆ ವಾಹನವನ್ನು ನಿಲ್ಲಿಸಿ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆ ಪೊಲೀಸರು ತಿಳಿಸುತ್ತಿದ್ದಾಗ, ಅಲ್ಲಿಗೆ ಬಂದ ಜಬಿವುಲ್ಲಾ ಎಂಬ ಮತ್ತೊಬ್ಬ ವ್ಯಕ್ತಿ “ನಾವು ಹೆಲ್ಮೆಟ್ ಹಾಕುವುದಿಲ್ಲ, ಏನು ಮಾಡುತ್ತೀಯ?” ಎಂದು ಹೇಳಿ ಇಬ್ಬರೂ ಸೇರಿ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪೊಲೀಸ್ ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ತಳ್ಳಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿ, ಬೈಕ್ ಕೀ ಕಿತ್ತುಕೊಂಡು ಬೆದರಿಕೆ ಹಾಕಿ ವಾಹನವನ್ನು ತೆಗೆದುಕೊಂಡು ಹೋಗಿರುವುದು ವರದಿ ಅಡಿಯಲ್ಲಿ ಪ್ರಕರಣ ದಾಖಸಿಕೊಂಡು. ಇಬ್ಬರೂ ಆರೋಪಿತರನ್ನು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read More

ಶಿವಮೊಗ್ಗ: ನಗರದ ಎಸ್.ಆರ್. ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ (ಎಸ್.ಆರ್.ಎನ್.ಎಂ) ಬಿಸಿಎ ಹಾಗೂ ಬಿಎಸ್ಸಿ ವಿಭಾಗದ ವಿದ್ಯಾರ್ಥಿಗಳು ಕುವೆಂಪು ವಿವಿ ೨೦೨೪ನೇ ಸಾಲಿನ ಪರೀಕ್ಷಾ ಫಲಿತಾಂಶಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಎರಡು ಚಿನ್ನದ ಪದಕಗಳೊಂದಿಗೆ ಹಲವಾರು ರ‍್ಯಾಂಕ್‌ಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಬಿಸಿಎ ವಿಭಾಗದಲ್ಲಿ ಮಾನಸ ಟಿ.ಸಿ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಬಿಎಸ್ಸಿ ವಿಭಾಗದಲ್ಲಿ ರಶ್ಮಿ ಆರ್.ಎ ದ್ವಿತೀಯ ರ‍್ಯಾಂಕ್ ಜೊತೆಗೆ ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಬಿಎಸ್ಸಿ ವಿಭಾಗದಲ್ಲಿ ಹೇಮಾ ಜೆ. ಗೋರ್ಪಡೆ ಹಾಗೂ ಪ್ರೀತಿ ಎಸ್.ಎ ತೃತೀಯ ರ‍್ಯಾಂಕ್, ಅನು ಸೋಮಶೇಖರ್ ನಾಲ್ಕನೇ ರ‍್ಯಾಂಕ್, ತೇಜಶ್ರೀ ಎನ್.ಆರ್ ಆರನೇ ರ‍್ಯಾಂಕ್ ಹಾಗೂ ಸ್ನೇಹ ಕೆ.ಎಂ ಹತ್ತನೇ ರ‍್ಯಾಂಕ್ ಪಡೆದು ಗಮನಸೆಳೆದಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎಲ್. ಅರವಿಂದ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಎನ್.ಇ.ಎಸ್ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.

Read More

ಶಿವಮೊಗ್ಗ, : ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026)  ದಿನಾಂಕ 03.05.2026 ರಂದು ಮಧ್ಯಾಹ್ನ 02:00 ರಿಂದ ಸಂಜೆ 05:00 ರವರೆಗೆ ನಡೆಯಲಿದ್ದು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ(ಪ್ರ) ಹೇಮಂತ್ ಎನ್ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ನೀಟ್ ಪರೀಕ್ಷೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದ್ದು, ಒಟ್ಟು 4577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು. ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ…

Read More

ಶಿವಮೊಗ್ಗ : ಜಿಲ್ಲೆಯಲ್ಲಿ ಮನೆ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾ ಪೊಲೀಸ್ ಇಲಾಖೆ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (ಎಲ್‌ಹೆಚ್‌ಬಿಎಸ್)’ ಎಂಬ ಹೊಸ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ತಿಳಿಸಿದ್ದಾರೆ. ಮನೆಗಳನ್ನು ಬೀಗ ಹಾಕಿ ಹೊರಗಡೆ ಹೋಗುವವರು ತಮ್ಮ ಮನೆಯ ಸುರಕ್ಷತೆಯ ಜವಾಬ್ದಾರಿಯನ್ನು ಪೊಲೀಸರಿಗೆ ಹಸ್ತಾಂತರಿಸಬಹುದಾಗಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಇದಕ್ಕಾಗಿ ನಾಗರಿಕರು ಮೂರು ಮುಖ್ಯ ಮಾಹಿತಿಗಳನ್ನು ನೀಡಬೇಕು, ಹೊರಡುವ ಮತ್ತು ಮರಳುವ ದಿನಾಂಕ, ಮನೆಯ ಸಂಪೂರ್ಣ ವಿಳಾಸ ಹಾಗೂ ತಮ್ಮ ಮನೆಯ ಮುಂದೆ ನಿಂತು ತೆಗೆದ ಸೆಲ್ಫಿಯನ್ನು ವಾಟ್ಸಾಪ್ ಮೂಲಕ 8277982901 ದೂರವಾಣಿ ಸಂಖ್ಯೆಗೆ ಕಳುಹಿಸಬೇಕು. ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿವರಗಳನ್ನು ಅಪ್‌ಲೋಡ್ ಮಾಡಬಹುದು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ನಿಯಮಿತವಾಗಿ ಮನೆಗಳ ಮೇಲೆ ಕಣ್ಗಾವಲು ಇಡಲಿದ್ದಾರೆ ಎಂದರು. ಮನೆಯ ಮುಂದೆ ಪತ್ರಿಕೆಗಳ ರಾಶಿ ಅಥವಾ ಹಾಲಿನ ಪ್ಯಾಕೇಟ್‌ಗಳು ಬಿದ್ದಿರುವುದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾಸದ…

Read More

ಶಿವಮೊಗ್ಗ, ಏಪ್ರಿಲ್ 25: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಚಾನಲ್ ಪ್ರದೇಶದ ಬಳಿ ಮಂಗಳಮುಖಿಯೊಬ್ಬರ ಮೇಲೆ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಶೀಘ್ರವೇ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಪ್ರಿಲ್ 24ರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಮಂಗಳಮುಖಿಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ, 4,000 ರೂ. ನಗದು, ಮೊಬೈಲ್, ಕೊರಳ ಚೈನ್ ಹಾಗೂ ಬಂಗಾರದ ಉಂಗುರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಕುರಿತು ಏಪ್ರಿಲ್ 25ರಂದು ದೂರು ದಾಖಲಾಗಿದ್ದು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 82/2026, ಬಿಎನ್ಎಸ್ ಕಲಂ 309(4) ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ತನಿಖೆಗೆ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ಹಾಗೂ ಡಿವೈಎಸ್ಪಿ ಸಂಜೀವ್ ಕುಮಾರ್ ಟಿ.ಡಿ. ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಅವರ ಉಸ್ತುವಾರಿಯಲ್ಲಿ ಪಿಎಸ್ಐ ತಿರುಮಲೇಶ್ ಜಿ. ಮತ್ತು ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದರು. ತನಿಖಾ ತಂಡವು ಆರೋಪಿತ ದೇವರಾಜ…

Read More

ಶಿವಮೊಗ್ಗ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  ಜಿಲ್ಲೆಯು ಒಟ್ಟಾರೆ ಶೇ. 96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.  ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ತಾಲ್ಲೂಕುವಾರು ಸಾಧನೆ: ತಾಲ್ಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕು ಶೇ. 99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಸಾಗರ ಶೇ. 99.01 ಮತ್ತು ಹೊಸನಗರ ಶೇ. 98.90 ಫಲಿತಾಂಶದೊಂದಿಗೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ. ಉಳಿದಂತೆ ಸೊರಬ ಶೇ. 96.77, ಶಿವಮೊಗ್ಗ ಶೇ. 96.55, ಶಿಕಾರಿಪುರ ಶೇ. 94.79 ಹಾಗೂ ಭದ್ರಾವತಿ ಶೇ. 94.00 ಫಲಿತಾಂಶ ದಾಖಲಿಸಿವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ಅನಘ ಕೆ.ಎಸ್. 624 ಅಂಕ ಗಳಿಸಿ ಮುಂಚೂಣಿಯಲ್ಲಿದ್ದಾರೆ. ಶಿವಮೊಗ್ಗದ ಪ್ರಿಯದರ್ಶಿನಿ ಪ್ರೌಢಶಾಲೆಯ ಕೃತಿ ಪಿ.ಎಸ್. 623 ಅಂಕ, ಭದ್ರಾವತಿಯ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಅಕುಲ್ ವಿಷ್ಣು ಭಟ್…

Read More

ಶಿವಮೊಗ್ಗ : ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆಯುವ ಮೂಲಕ ತೀರ್ಥಹಳ್ಳಿಯ ಅನಘ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ತೀರ್ಥಹಳ್ಳಿ ವಾಗ್ದೇವಿ ಶಿಕ್ಷಣ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಅನಘ ಕೆ ಎಸ್ ೬೨೫/೬೨೪ ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಮೇಲಿನ ಕಡಗೋಡುವಿನ ಮಂಗಳ ಮತ್ತು ಶಿವಕುಮಾರ ದಂಪತಿಗಳ ಪುತ್ರಿ ಅನಘ ಈ ಸಾಧನೆ ಮಾಡಿದ್ದಾಳೆ.

Read More

ಶಿವಮೊಗ್ಗ: ಪ್ರಾಮಾಣಿಕತೆ ಮೆರೆದ ಘಟನೆ ಒಂದು ನಗರದಲ್ಲಿ ಗಮನಸೆಳೆದಿದೆ. ಏ.16ರಂದು ಗಾಯತ್ರಿ ಎಂಬ ಗ್ರಾಹಕಿ ದುರ್ಗಿಗುಡಿಯ ನ್ಯೂ ಇತಿಹಾಸ ಕಲೆಕ್ಷನ್ ಬಟ್ಟೆ ಅಂಗಡಿಯಲ್ಲಿ ವ್ಯಾನಿಟಿ ಬ್ಯಾಗ್ ಅನ್ನು ಮರೆತು ಬಿಟ್ಟು ಹೋಗಿದ್ದರು. ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕು. ಸ್ವಾತಿ ಮತ್ತು ಕು. ಸಂಗೀತ ಅವರುಗಳು ಆ ಬ್ಯಾಗ್ ಅನ್ನು ಕಂಡು ಅಂಗಡಿ ಮಾಲೀಕರಾದ ಮಾರ್ತಾಂಡ ಅವರಿಗೆ ಒಪ್ಪಿಸಿದರು. ನಂತರ ಏ.21 ರಂದು ಬ್ಯಾಗ್ ಅನ್ನು ಜಯನಗರ ಪೊಲೀಸ್ ಠಾಣೆಗೆ ತಂದು ಹಾಜರುಪಡಿಸಲಾಯಿತು. ಪೊಲೀಸ್ ನಿರೀಕ್ಷಕರ ಸಮಕ್ಷಮದಲ್ಲಿ ಸುಮಾರು 5,00,000 ರೂ. ಮೌಲ್ಯದ ಬಂಗಾರ ಹಾಗೂ ಇತರೆ ವಸ್ತುಗಳಿದ್ದ ವ್ಯಾನಿಟಿ ಬ್ಯಾಗ್ ಅನ್ನು ಅದರ ಮಾಲೀಕೆಯಾದ ಗಾಯತ್ರಿ ಅವರಿಗೆ ಸುರಕ್ಷಿತವಾಗಿ ಮರಳಿ ನೀಡಲಾಯಿತು. ಪ್ರಾಮಾಣಿಕತೆ ಮತ್ತು ನಿಷ್ಠೆಯನ್ನು ತೋರಿದ ಕು. ಸ್ವಾತಿ, ಕು. ಸಂಗೀತ ಹಾಗೂ ಮಾರ್ತಾಂಡ ಅವರನ್ನು ಜಯನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

Read More