Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಂದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. ೫೦,೦೦೦/- ನೀಡುವ ಯೋಜನೆಯು ಜಾರಿಯಲ್ಲಿದ್ದು, ಆರ್ಹ ಹಾಗೂ ಆಸಕ್ತಿಯುಳ್ಳ ವಧು ವರರು ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು, ದೇವಸ್ಥಾನ ಟ್ರಸ್ಟ್ಗಳು, ಸಂಘ, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದವರಿಂದ ಅರ್ಜಿ ಆಹ್ವಾನಿಸಿದೆ. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. ೫,೦೦೦/-ಗಳನ್ನು ನೀಡಲಾಗುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ ೩ ದಿನಗಳೊಳಗಾಗಿ…
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ “ಸ್ವಸ್ಥ ನಾರಿ ಸಶಕ್ತ ಭಾರತ” ಅಭಿಯಾನಕ್ಕೆ ಶಿವಮೊಗ್ಗದ ತುಂಗಾ ನಗರ ಹೆರಿಗೆ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾ ಡಿದ ಸಂಸದರಾದ ಬಿ.ವೈ.ರಾಘವಂದ್ರ ಈ ಯೋಜನೆಯಡಿ ಮಹಿಳೆಯರ ಸ್ವಾಸ್ಥ್ಯ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನುರಿತ ವೈದ್ಯರಿಂದ ಸೂಕ್ತ ಸಲಹೆ ಸೂಚನೆ ಮುಂಜಾ ಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗುರುತುಪಡಿಸಿದ ಸ್ಥಳಗಳಲ್ಲಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕೂಡ ಹಮ್ಮಿಕೊಳ್ಳುವ ಯೋಜನೆ ಇದಾಗಿದೆ ಎಂದರು. ಮಹಿಳೆಯರ ಮಾನಸಿಕ ಆರೋಗ್ಯ ಸೇವೆ ಒದಗಿಸುವುದು, ಗರ್ಭಿಣಿ ಸ್ತ್ರೀಯರಿಗೆ ಮಾರ್ಗ ದರ್ಶನ ನೀಡುವುದು, ಮಕ್ಕಳ ಹಾಗೂ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವುದು ಈ ಯೋಜನೆಯಲ್ಲಿ ಒಳಗೊಂಡಿದೆ. ಕುಟುಂಬದ ಸಂಪೂರ್ಣ ಹೊಣೆಗಾರಿಕೆ ಮಾಡುತ್ತಾ, ಕುಟುಂಬದ ಆಗು ಹೋಗುಗಳನ್ನು ಗಮನಿಸುತ್ತಾ ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಹಿಳೆಯರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ…
ಶಿವಮೊಗ್ಗ : ನಗರದ ಖಾಸಗಿ ಬಸ್ ಸ್ಟಾಂಡ್ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ನಿರುದ್ಯೋಗ ದಿನ ಎಂದು ಆಚರಣೆ ಮಾಡಲಾಯಿತು. ದೇಶದಲ್ಲಿ ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿ ಕೇಂದ್ರದಲ್ಲಿ ಮೂರು ಬಾರಿ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಎರಡು ಅವಧಿ ಮುಗಿಸಿ ಮೂರನೇ ಅವಧಿಯ ವರ್ಷದ ಸಂಭ್ರಮಾಚರಣೆ ಆಚರಿಸಿದರೂ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡದೇ ದೇಶದಲ್ಲಿ ನಿರುದ್ಯೋಗ ತಾಂಡವವಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು, ಇದನ್ನು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದಾರೆ. ೨೦೧೪ರ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಸುವು ದಾಗಿ ನರೇಂದ್ರ ಮೋದಿ ಹೇಳಿದ್ದರು. ಆದರೆ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡಲಿಲ್ಲ. ಬದಲಿಗೆ ಈ ಹಿಂದಿನಿಂದ ಕಾಂಗ್ರೆಸ್ ಬೆಳೆಸಿ, ಪೋಷಿಸಿದ್ದ ಸರ್ಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆಗಳನ್ನು ಮುಚ್ಚಿ ಲಕ್ಷಾಂತರ ಉದ್ಯೋಗಿಗಳು ಬೀದಿಗೆ ಬೀಳುವಂತೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು .…
ಶಿವಮೊಗ್ಗ : ಮೆಗ್ಗಾ ನ್ ಆಸ್ಪತ್ರೆಯ ಆವರಣ ದಲ್ಲಿ ನಾಮಫಲಕಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣಿಗೆ ಶರಣಾದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುರಹೊನ್ನೆಯ ನಿವಾಸಿ ಆಕಾಶ್ (೨೮) ನೇಣಿಗೆ ಶರಣಾಗಿದ್ದಾನೆ. ಆಕಾಶ್ ತಾಯಿಗೆ ಹುಷಾರಿಲ್ಲದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ತಾಯಿಯ ಅರೈಕೆಗಾಗಿ ಆಸ್ಪತ್ರೆಗೆ ಬಂದಿದ್ದ ಆಕಾಶ್ ಒಪಿಡಿಗೆ ಅಡ್ಮಿಷನ್ ಪತ್ರ ಪಡೆಯುವ ಪಕ್ಕದಲ್ಲಿ ಸೂಪರ್ ಸ್ಪೆಷಾಲಿಟಿಗೆ ದಾರಿ ಎಂಬ ನಾಮಫಲಕಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಆಸ್ಪತ್ರೆ ಮುಂಭಾಗ ಈತ ನೇಣು ಬಿಗಿದುಕೊಳ್ಳುತ್ತಿದ್ದ ದೃಶ್ಯ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದ್ಯ ವ್ಯಸನಿಯಾಗಿದ್ದ ಆಕಾಶ್ ಮೆಗ್ಗಾನ್ ನಿಂದ ೩-೩೦ ಕ್ಕೆ ಹೊರಹೋಗಿ ಆಟೋದವರಿಗೆ ಹೊಳೆ ಬಸ್ ನಿಲ್ದಾಣಕ್ಕೆ ಬಿಡಿ ಎಂದು ಕೇಳಿದ್ದಾನೆ. ೭೦ ರೂ ಬಾಡಿಗೆ ಆಗುತ್ತೆ ಎಂದಿದ್ದಾರೆ. ನಿಮಗೆ ಯಾಕೆ ೭೦ ರೂ. ಕೊಡಬೇಕು ಎಂದು ಹೇಳಿ ನಾಮಫಲಕಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಈ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು ಅದು ತಡವಾಗಿ…
ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಅಜೀಂ ಪ್ರೇಮ್ಜಿ ಫೌಂಡೇಶನ್ವತಿಯಿಂದ ಮಕ್ಕಳ ಪೌಷ್ಟಿಕ ಆಹಾರ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಒದಗಿಸಲಾ ಗಿರುವ ೧೫೦೦ಕೋ. ಮೊತ್ತವನ್ನು ನಿಗಧಿಪಡಿಸಿದ ಉದ್ದೇಶಕ್ಕಾಗಿಯೇ ಬಳಸಿಕೊಳ್ಳುವಂತೆ ಮುಖ್ಯ ಮಂತ್ರಿಯವರ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಶ್ರೀಮತಿ ಬಿ.ವಿ.ಕಾವೇರಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇ ಶಕರಿಗೆ ಸೂಚಿಸಿದರು. ಅವರು ಜಿಲ್ಲಾ ಪಂಚಾಯಿತಿಯ ಅಬ್ದುಲ್ ಸಭಾಂಗಣ ಏರ್ಪಡಿಸಲಾ ಗಿದ್ದ ಪ್ರಸಕ್ತ ಸಾಲಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿರುವ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.ಪ್ರಸಕ್ತ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ೩೦ ಕೊಠಡಿಗಳ ನಿರ್ಮಾಣಕ್ಕೆ ೪೦೮ ಕೋಟಿ., ವಿವೇಕ ಶಾಲಾ ಬಾಕಿ ಅನುದಾನದಲ್ಲಿ ೩೦ಕೊಠಡಿಗಳ ನಿರ್ಮಾಣಕ್ಕೆ ೪೪೦ಕೋ. ೩೪೭ ಕೊಠಡಿ ಗಳ ದುರಸ್ತಿಗೆ ೪೭೪ಕೋ. ಹಾಗೂ ಪರಿಶಿಷ್ಟ ಜಾತಿ/ವರ್ಗಗಳ ಯೋಜನೆಯಡಿಯಲ್ಲಿ…
ಶಿವಮೊಗ್ಗ : ಕೇಂದ್ರ ಸರ್ಕಾರವು ನಾಗಾಲೋಟದಲ್ಲಿ ಬೆಳೆಯುತ್ತಿರುವ ದೇಶದ ಅಭಿವೃದ್ಧಿಗೆ ಪೂರಕವಾಗಿ ಸೌಲಭ್ಯ-ಸಹಕಾರಗಳನ್ನು ಒದಗಿಸುವುದರ ಜೊತೆಗೆ ಎದುರಾಗುವ ಎಲ್ಲಾ ರೀತಿಯ ಸಮಸ್ಯೆ ಸವಾಲುಗಳನ್ನು ಎದುರಿಸಿ ಮುನ್ನುಗ್ಗುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಹೇಳಿದರು.ಅವರು ಬಿ.ಎಸ್.ಎನ್. ಎಲ್.ಭವನದಲ್ಲಿ ದೂರಸಂಚಾರ ಕ್ಷೇತ್ರದಲ್ಲಿ ಆಗಿರುವ ಸಾಧನೆಗಳ ಕುರಿತು ಏರ್ಪಡಿಸಲಾಗಿದ್ದ ದೂರಸಂಪರ್ಕ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸ್ವಚ್ಚ ಭಾರತದಿಂದ ಇಂದಿನ ಡಿಜಿಟಲ್ಯುಗದವರೆಗೆ ಎಲ್ಲಾ ಕ್ಷೇತ್ರಗಳಲ್ಲೂ ಡಿಜಿಟಲೀಕರಣದ ಕಾರ್ಯ ಭರದಿಂದ ಸಾಗಿದೆ. ಬಹುಸಂಖ್ಯೆಯನ್ನು ಹೊಂದಿರುವ ರಾಷ್ಟ್ರಕ್ಕೆ ಅಗತ್ಯ ಸೌಲತ್ತುಗಳನ್ನು ಒದಗಿಸುವ ದೊಡ್ಡ ಹೊಣೆಗಾರಿಕೆ ಹೊಂದಿದೆ ಎಂದರು.ಒಂದು ಕಾಲದಲ್ಲಿ ನಷ್ಟದಲ್ಲಿ ಸಾಗುತ್ತಿದ್ದ ದೂರಸಂಚಾರ ನಿಗಮವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಕೇಂದ್ರ ಸರ್ಕಾರವು ಅಗತ್ಯ ಆರ್ಥಿಕ ನೆರವನ್ನು ಒದಗಿಸಿದೆ. ಖಾಸಗಿ ವಲಯಗಳ ತೀವ್ರ ಸ್ಪರ್ಧೆಗಳ ನಡುವೆಯೂ ನಿಗಮ ಇನ್ನಷ್ಟು ಬಂಡವಾಳ ತೊಡಗಿಸಿ ಮುನ್ನುಗ್ಗುತ್ತಿದೆ. ಸಾಧಿಸಲು ಗುರಿ ಇರುವಂತೆಯೇ ಸವಾಲುಗಳೂ ಕೂಡ ಇವೆ ಎಂದರು.೪ ಶ್ರೇಣಿಯೊಳಗಿನ ೨೮೭ಟವರ್ಗಳ ನಿರ್ಮಾಣದ ಪೈಕಿ ೧೩೬ ಟವರ್ಗಳ ನಿರ್ಮಾಣ ಕಾರ್ಯದ ಪಟ್ಟಿ…
ಶಿವಮೊಗ್ಗ : ಇಂಟರ್ ನ್ಯಾಷನಲ್ ಲಿಂಗಾ ಯತ ಯುವ ಒಕ್ಕೂಟದಿಂದ ಸೆ.೨೦ ಮತ್ತು ೨೧ ರಂದು ವೈದ್ಯೋದ್ಯಮಿಗಳು ಹಾಗೂ ವೈದ್ಯಕೀ ಯ ಕ್ಷೇತ್ರದ ಚಿಂತಕರ ಶಿಬಿರವನ್ನ ನಗರದ ಕನ್ವೆಷನಲ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಸೆ೨೧ ರಂದು ಶಿಬಿರಾರ್ಥಿಗಳಿಗೆ ನೆಟ್ವರ್ಕ್ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದರು ಡಾ.ಧನಂಜಯ್ ಸರ್ಜಿ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ವೈದ್ಯಕೀಯ ಕ್ಷೇತ್ರದಲ್ಲಿ ಕಾನೂನು ಸಲಹೆ ಬಗ್ಗೆ ಹೇಗೆ ಮುನ್ನಡೆಯಬೇಕು. ಪಾರ್ಟ್ನಶಿಪ್ ಹೇಗಿರಬೇಕು. ಡಿಜಿಟಲ್ ಮಾರ್ಕೆಂಟಿಂಗ್ ನ್ನ ಬಳಕೆ ಹೇಗೆ? ಎಐ ಒಳನೋಟಗಳನ್ನ ಹಾಸ್ಪಿಟಲ್ ವಿಸ್ತರಣೆ, ಸಂಪನ್ಮೂಲ ಕ್ರೂಢೀಕರಣ, ಸಂಪತ್ತಿನ ಸೃಷ್ಠಿ, ಮತ್ತು ನೂತನ ಡಿಜಿಟಲ್ ಹೆಲ್ತ್ ಕೇರ್ ನ ಸಾಧಕ ಬಾದಕಗಳ ಬಗ್ಗೆ ವಿಶೇಷ ಚರ್ಚೆಗಳನ್ನ ಶಿಬಿರದಲ್ಲಿ ಮಾಡಲಾಗುವುದು ಎಂದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಶಿಬಿರ ಉದ್ಘಾಟಿಸಲಿದ್ದಾರೆ, ದಾವಣಗೆರೆ ಸಂಸದರಾದ ಪ್ರಭಾ ಮಲ್ಲಿಕಾರ್ಜುನ, ಶಿವಮೊ ಗ್ಗದ ಸಂಸದರು ಶಾಸಕ ಚೆನ್ನಬಸಪ್ಪ, ಚಿತ್ರದುರ್ಗದ ಎಂಲ್ ಸಿ ನವೋನ್ ಕೊಟ್ಟಿಗೆ, ಈ ಟ್ರಸ್ಟ್ ನ ಅಧ್ಯಕ್ಷ ಸಂತೋಷ ಕೆಂಚಾಂಬ…
ಶಿವಮೊಗ್ಗ : ಸೆ.೧೭ ರಿಂದ ಅ.೨ ರವರೆಗೆ ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಪ್ರಯುಕ್ತ ಹಲವಾರು ಸಾಮಾಜಿಕ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದು ಸಂಸದರಾ ಬಿ.ವೈ.ರಾಘವೇಂದ್ರ ತಿಳಿಸಿದರು.ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಮೋದಿಯವರ ೭೫ನೇ ಹುಟ್ಟುಹಬ್ಬ ವಿಶೇಷವಾಗಿ ಸಾರ್ವಜನಿಕರಿಗೆ ಅನುಕೂಲವಾಗ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳ ಲಾಗಿದೆ ಎಂದರು.ದೇಶಾದ್ಯಂತ ಮಹಿಳೆಯರು, ಹದಿಹರೆಯದ ಹುಡುಗಿಯರು ಮತ್ತು ಮಕ್ಕಳಿಗೆ ಆರೋಗ್ಯ ಮತ್ತು ಪೌಷ್ಟಿಕಾಂಶ ಸೇವೆಗಳನ್ನು ಬಲಪಡಿಸುವ ಒಂದು ಹೆಜ್ಜೆಯಾಗಿ,ಪ್ರಧಾನಿ ಮೋದಿ ಅವರು ಸೆ.೧೭ರ ಬುಧವಾರ ತಮ್ಮ ಜನ್ಮದಿನ ದಂದು ’ಸ್ವಸ್ಥ ನಾರಿ, ಸಶಕ್ತ ಪರಿವಾರ್ ಅಭಿಯಾನ’ ಮತ್ತು ಪೋಷಣ್ ಮಾಹ್ ಯೋಜನೆಯ ೮ ನೇ ಆವೃತ್ತಿಯನ್ನು ಪ್ರಾರಂಭಿಸಲಿ ದ್ದಾರೆ ಎಂದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಜಂಟಿಯಾಗಿ ಈ ಉಪಕ್ರಮವನ್ನು ಮುನ್ನಡೆಸಲಿವೆ, ಇದನ್ನು ಸರ್ಕಾರವು ಭಾರತದ ಅತಿದೊಡ್ಡ ಮಹಿಳಾ ಮತ್ತು ಮಕ್ಕಳ ಆರೋಗ್ಯ ಸಜ್ಜುಗೊ ಳಿಸುವ ಅಭಿಯಾನ ಎಂದು ಬಣ್ಣಿಸಿದೆ. ಆಯುಷ್ ಸಚಿವಾಲ ಯವು ’ಸ್ವಸ್ಥ…
ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾ ಶಿವಮೊಗ್ಗದ ಪ್ರಮುಖ ಬೀದಿಗಳಲ್ಲಿ ಗಮನ ಸೆಳೆಯಿತು. ೩೦೦ಕ್ಕೂ ಹೆಚ್ಚಿನ ಮಹಿಳೆಯರು ಸೇರಿದ್ದ ಈ ಕಾರ್ಯಕ್ರಮ ನಿಜಕ್ಕೂ ನಾರಿಶಕ್ತಿಯನ್ನು ಪ್ರತಿಬಿಂಬಿಸುವಂತಿತ್ತು.ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಷ್ ಬಾನು ರವರು ಜಾಥಾ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಪಾಲಿಕೆ ವ್ಯಾಪ್ತಿಯ ಮಹಿಳೆಯರು ವಿವಿಧ ವೇಷ ತೊಟ್ಟು ಪಾಲ್ಗೊಂಡಿದ್ದು ವಿಶೇಷವಾಗಿತ್ತು.ಮಹಿಳಾ ದಸರಾ ಸಮಿತಿಯ ಕಾರ್ಯದರ್ಶಿ ಅನುಪಮಾ ಮತ್ತು ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.
ಶಿವಮೊಗ್ಗ : ಪರಿಶಿಷ್ಟ ಸಮುದಾಯಕ್ಕೆ ಸುಮಾರು ೫೧ ಜಾತಿ ಇದ್ದು, ಪ್ರಸ್ತುತ ಗೊಂಡ, ಕುರುಬ, ಕೋಲಿ ಮತ್ತು ಕಬ್ಬಲಿಗ ಸಮುದಾಯವನ್ನು ಪರಿಶಿಷ್ಟ ಸಮುದಾಯಕ್ಕೆ ಸೇರಿಸುವದಕ್ಕೆ ಸಿದ್ದರಾಮಯ್ಯನವರ ನೇತ್ರತ್ವದ ಸರ್ಕಾರವು ಪ್ರಸ್ತಾವನೆಯನ್ನು ಮಾಡಿರುವುದು ಖಂಡನೀಯ, ಇದನ್ನು ತಕ್ಷಣದಲ್ಲಿ ಕೈ ಬಿಡುವಂತೆ ದಿಶಾ ಸಮಿತಿ ಸದಸ್ಯರಾದ ಗಿರೀಶ್ ಈ ಭದ್ರಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸೌಲಭ್ಯಗಳನ್ನು ಪರಿಶಿಷ್ಟ ಸಮುದಾಯದಿಂದ ಕಸಿದುಕೊಳ್ಳುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇದರಿಂದ ರಾಜ್ಯದಲ್ಲಿ ಕುರುಬ ಸಮಾಜ ಮತ್ತು ಪರಿಶಿಷ್ಟ ಸಮುದಾಯವರು ಅಣ್ಣ-ತಮ್ಮಂದಿರಂತೆ ಇದ್ದು ಸಂಬಂಧ ನಡುವೆ ವಿಷ ಬೀಜ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿದರು. ಪರಿಶಿಷ್ಟ ಸಮುದಾಯಕ್ಕೆ ಸೇರಿದ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಆದಂತಹ ಸತೀಶ ಎಲ್. ಜಾರಕಿಹೊಳಿ ಪರಿಶಿಷ್ಟ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ತಿಳಿದರು ಕೂಡ ಯಾವುದೇ ರೀತಿಯಲ್ಲಿ ವಿರೋದ ವ್ಯಕ್ತಪಡಿಸುತ್ತಿಲ್ಲ. ಇದ್ದರಿಂದ ಅವರಿಗೆ ಮುಂದಿನ ರಾಜಕೀಯ ಭವಿಷ್ಯ ಕುತ್ತ ಬರುವ ಸಾಧ್ಯತೆಯಿದೆ, ಮುಂದಿನ ದಿನಗಳಲ್ಲಿ ಈ ಅನ್ಯಾಯವು ಮುಂದುವರೆದರೇ ನಮ್ಮ ಸಮುದಾಯದ ಶ್ರೀ…