Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ: ಗಲಾಟೆ ಬಿಡಿಸಲು ಹೋಗಿ ಕೊಲೆಯಾಗಿದ್ದ ಶಾಲಾ ಬಾಲಕ ಸಂಕೇತ್‌ನ ಸಮಾಧಿಗೆ ಹಾನಿ ಮಾಡಲಾಗಿದೆ. ಕಳೆದ ಫೆಬ್ರವರಿ 24ರಂದು ಊರಗಡೂರಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆಯಾಗಿತ್ತು. ಸಮೀಪದ ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಸಂಕೇತ್‌ನ ಅಂತ್ಯೆಕ್ರಿಯೆ ನೆರವೇರಿಸಲಾಗಿತ್ತು. ಸಂಕೇತ್ ಸಮಾಧಿಗೆ ಕಟ್ಟೆ ನಿರ್ಮಿಸಿ ಫೋಟೊ ಅಳವಡಿಸಲಾಗಿತ್ತು. ಮಂಗಳವಾರ ಸಂಜೆ ಸಮಾಧಿಯ ಒಂದು ಭಾಗ ಒಡೆದಿರುವುದು ಗೊತ್ತಾಗಿದೆ. ಇದರಿಂದ ಬೇಸರ ಮತ್ತು ಆಕ್ರೋಶಗೊಂಡ ಸಂಕೇತ್‌ನ ಪೋಷಕರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಇನ್ನು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿಂದೂ ರುದ್ರಭೂಮಿಯಲ್ಲಿ ಮಾರ್ಚ್ 26ರಂದು ಸಂಕೇತ್ ಸಮಾಧಿಗೆ ಕಟ್ಟೆ ಕಟ್ಟಿಸಲಾಗಿತ್ತು. ಕುಟುಂಬದವರು ಸುತ್ತಲು ಗ್ರಾನೈಟ್ ಕಲ್ಲು ಹಾಕಿಸಿದ್ದರು. ಮುಂಭಾಗದಲ್ಲಿ ದೀಪ ಇಡಲು ವ್ಯವಸ್ಥೆ ಮಾಡಿದ್ದರು. ಹಿಂಬದಿಯಲ್ಲಿ ಸಂಕೇತ್‌ನ ಫೋಟೊ ಇರಿಸಲಾಗಿತ್ತು. ಕುಟುಂಬದವರು ಪ್ರತಿ ಸಂಜೆ ಸಮಾಧಿ ಸ್ಥಳಕ್ಕೆ ಹೋಗಿ ಪೂಜೆ ಮಾಡಿ ಬರುತ್ತಿದ್ರು, ಸಂಕೇತ್‌ಗೆ ಬುಧವಾರ ಅಂದರೆ ಪ್ರೀತಿ. ಆತ ಪ್ರತಿ ಬುಧವಾರ ಬೆಳಗ್ಗೆ ಬೇಗ ಎದ್ದು…
ಶಿವಮೊಗ್ಗ, :ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ಸಂಭವಿಸಿದ ಪಶುವೈದ್ಯೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖಾ ವರದಿ ಅರಣ್ಯ ಸಚಿವರಿಗೆ ಸಲ್ಲಿಸಲಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಶಿವಮೊಗ್ಗ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ. ಹನುಮಂತಪ್ಪ ತಿಳಿಸಿದ್ದಾರೆ. ,ಮಾ. 20ರ ರಾತ್ರಿ ಥರ್ಮಲ್ ಕ್ಯಾಮರಾ ಮೂಲಕ ಪ್ರಾಣಿಗಳ ತಾಪಮಾನ ಪರಿಶೀಲನೆ ನಡೆಸುವ ವೇಳೆ ನೀರಾನೆ ದಾಳಿ ಸಂಭವಿಸಿದ್ದು, ಈ ದುರಂತದಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ದುಃಖಕರ ಘಟನೆ ಎಂದು ಪತ್ರಿಕೆಗೆ ಶನಿವಾರ ಮಾಹಿತಿ ನೀಡಿದರು. ಘಟನೆ ಕುರಿತು ಸಂಪೂರ್ಣ ಪರಿಶೀಲನೆ ನಡೆಸಿ, ಎಲ್ಲಾ ಅಂಶಗಳನ್ನು ಒಳಗೊಂಡ ಸಮಗ್ರ ವರದಿ ಸಿದ್ಧಪಡಿಸಿ ಅರಣ್ಯ ಸಚಿವರಿಗೆ ಸಲ್ಲಿಸಲಾಗಿದೆ. ವರದಿಯಲ್ಲಿ ಘಟನೆ ಸಂಭವಿಸಿದ ಸಂದರ್ಭ, ಭದ್ರತಾ ವ್ಯವಸ್ಥೆ ಹಾಗೂ ಸಿಬ್ಬಂದಿ ಕಾರ್ಯವಿಧಾನದ ಬಗ್ಗೆ ವಿವರವಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಮೃಗಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಹೆಚ್ಚುವರಿ ಭದ್ರತಾ ಮಾರ್ಗಸೂಚಿಗಳು, ತರಬೇತಿ ಹಾಗೂ ತಂತ್ರಜ್ಞಾನ…
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆಯ ವಾಟ್ಸಪ್ ಸಂದೇಶಗಳು ಇದೀಗ ವೈರಲ್ ಆಗಿವೆ. ಈ ಸಂದೇಶಗಳಲ್ಲಿ ಲಯನ್ ಸಫಾರಿ ವಿಭಾಗದಲ್ಲಿ ಭದ್ರತಾ ಹಾಗೂ ಪ್ರಾಣಿಗಳ ಆರೈಕೆ ವ್ಯವಸ್ಥೆಯಲ್ಲಿ ಕೆಲವು ಕೊರತೆಗಳಿವೆ ಎಂದು ಉಲ್ಲೇಖಿಸಿರುವುದು ಬೆಳಕಿಗೆ ಬಂದಿದೆ. ಕಾರ್ಯನಿರ್ವಾಹಕ ನಿರ್ದೇಶಕರಾದ ಅಮರಾಕ್ಷರ್ ಪ್ರತಿಕ್ರಿಯಿಸಿ, ಈ ಸಂದೇಶಗಳು ಬಂದ ನಂತರವೇ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ. ವೈರಲ್ ಆಗಿರುವ ಚಾಟ್‌ಗಳಲ್ಲಿ ಹೇಳಿರುವ ವಿಷಯಗಳಲ್ಲಿ ಕೆಲವೊಂದು ಸತ್ಯವಾಗಿದ್ದರೂ, ಅವುಗಳನ್ನು ಗಮನದಲ್ಲಿಟ್ಟು ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತನಿಖಾ ತಂಡಕ್ಕೆ ಸಲ್ಲಿಸಲಾಗಿದ್ದು, ಮುಂದಿನ ಕ್ರಮ ಸರ್ಕಾರದ ನಿರ್ಧಾರಕ್ಕೆ ಅನುಗುಣವಾಗಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಮಹತ್ವದ ಶಿಕ್ಷಣ ಸುಧಾರಣೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ವಿಧಾನಸಭಾ ಅಧಿವೇಶನದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಯನ್ನು ಗ್ರೇಡಿಂಗ್ ವ್ಯವಸ್ಥೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದರು. ಈವರೆಗೆ 625 ಅಂಕಗಳಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗುತ್ತಿತ್ತು. ಆದರೆ ಹೊಸ ವ್ಯವಸ್ಥೆಯಲ್ಲಿ ತೃತೀಯ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ. ಅಂತಿಮ ಫಲಿತಾಂಶದ ಅಂಕಗಳಲ್ಲಿ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ. ಬದಲಿಗೆ ಎ, ಬಿ, ಸಿ, ಡಿ ಮಾದರಿಯ ಗ್ರೇಡ್ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಹಿಂದಿ, ಸಂಸ್ಕೃತ, ತುಳು, ಮರಾಠಿ, ಅರೇಬಿಕ್ ಸೇರಿದಂತೆ ಎಲ್ಲಾ ತೃತೀಯ ಭಾಷೆಗಳಿಗೂ ಈ ನಿಯಮ ಅನ್ವಯವಾಗಲಿದೆ. ಈ ಸಂಬಂಧ ಅಧಿಕೃತ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಗೆ ಒತ್ತು…
ಶಿವಮೊಗ್ಗ : ಅಲೆಮಾರಿ ಜನಾಂಗದವರ ಜೀವನಮಟ್ಟವನ್ನು ಸುಧಾರಿಸಲು ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಸತಿ, ಶಿಕ್ಷಣ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿರುವ ಜಾತಿ ಪ್ರಮಾಣಪತ್ರ ಮತ್ತು ಪೂರಕ ದಾಖಲೆಗಳನ್ನು ಸರಳೀಕರಿಸಿ ನೀಡುವಂತೆ ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ತಿಳಿಸಿದ್ದಾರೆ. 100 ಕೋಟಿ ಅನುದಾನ : 4 ವಸತಿ ನಿಲಯ ಘೋಷಣೆ : ರಾಜ್ಯದಲ್ಲಿ ಸುಮಾರು 11 ಲಕ್ಷ ಅಲೆಮಾರಿ ಸಮುದಾಯದವರು ಇದ್ದು, ಅವರ ಅಭಿವೃದ್ಧಿಗಾಗಿ 2026ರ ಬಜೆಟ್‌ನಲ್ಲಿ ರೂ.100 ಕೋಟಿ ವಿಶೇಷ ಅನುದಾನ ಮೀಸಲಿಡಲಾಗಿದೆ. ಜೊತೆಗೆ ಮಕ್ಕಳ ಶಿಕ್ಷಣಕ್ಕಾಗಿ 4 ವಸತಿ ನಿಲಯಗಳನ್ನು ಸ್ಥಾಪಿಸುವ ಯೋಜನೆ ಘೋಷಿಸಲಾಗಿದೆ. ಈಗಾಗಲೇ 21 ಜಿಲ್ಲೆಗಳ ಪ್ರವಾಸ ಕೈಗೊಂಡು ಅಲೆಮಾರಿ ಜನಾಂಗದವರ ನೈಜ ಸ್ಥಿತಿಯನ್ನು ಪರಿಶೀಲಿಸಲಾಗಿದೆ. ಟೆಂಟ್ ಮತ್ತು ಜೋಪಡಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಸ್ವತಃ ಭೇಟಿ ನೀಡಿ, ಅವರಿಗೆ ವಸತಿ, ಶಿಕ್ಷಣ ಮತ್ತು…
ಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣದ ಪಕ್ಕದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಎಂಬುವರು ಚಿಕಿತ್ಸೆಯ ನಂತರ ಕೋಮಾಗೆ ಜಾರಿದ್ದು, ಇದಕ್ಕೆ ವೈದ್ಯರು ನೀಡಿದ ‘ಹೈಡೋಸ್’ ಔಷಧಿಯೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಮಾ.11 ರಂದು ದೇವಿ ಬಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ.12 ರ ರಾತ್ರಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ರೋಗಿಗೆ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಅವರು ಕೋಮಾಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ. ಆಪರೇಷನ್ ಮಾಡುವ ಮೊದಲು ಲವಲವಿಕೆಯಿಂದಿದ್ದ ರೋಗಿ, ವೈದ್ಯರ ಎಡವಟ್ಟಿನಿಂದಾಗಿ ಇಂದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮೂರ್ನಾಲ್ಕು ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೋಗಿಯ ಅಳಿಯ ಕಾಂತರಾಜ್ ಮತ್ತು ಸಂಬಂಧಿ ಉಷಾ ನಾಯ್ಕ್ ಆರೋಪಿಸಿದ್ದಾರೆ. ಘಟನೆ ನಡೆದು 12 ದಿನಗಳಾದರೂ ಆಸ್ಪತ್ರೆಯ ಮುಖ್ಯಸ್ಥರು ಯಾವುದೇ ಜವಾಬ್ದಾರಿ ವಹಿಸಿಲ್ಲ ಎಂಬುದು ಸಂಬಂಧಿಕರ ಆಕ್ರೋಶಕ್ಕೆ…
ಶಿವಮೊಗ್ಗ : ಭವಿಷ್ಯದ ಕನಸುಗಳು ಒಂದೆಡೆ, ಜನ್ಮಕೊಟ್ಟ ತಂದೆಯ ಅಂತಿಮ ಕ್ಷಣಗಳು ಮತ್ತೊಂದೆಡೆ ಈ ಎರಡು ಭಾವನೆಗಳ ನಡುವೆ ಸಿಲುಕಿದ ಹೃದಯದ ಹೋರಾಟ ಎಷ್ಟು ಕಠಿಣವಾಗಿರಬಹುದು ಎಂಬುದಕ್ಕೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದ ವಿದ್ಯಾರ್ಥಿನಿ ಶರಣ್ಯ ಜೀವಂತ ಉದಾಹರಣೆಯಾಗಿದ್ದಾಳೆ. “ತಂದೆಯ ಸಾವಿನ ನೋವಿನಲ್ಲಿ ಪರೀಕ್ಷೆ ಬರೆಯುವುದು ತುಂಬಾ ಕಷ್ಟವಾಯಿತು. ಆದರೂ ತಾಯಿ, ಶಿಕ್ಷಕರು ಮತ್ತು ಗ್ರಾಮಸ್ಥರ ಬೆಂಬಲದಿಂದ ಪರೀಕ್ಷೆಯನ್ನು ಚೆನ್ನಾಗಿ ಬರೆದಿದ್ದೇನೆ. ಆದರೆ ತಂದೆಯ ಕಳೆವಿನ ನೋವನ್ನು ಸಹಿಸಲು ಆಗುತ್ತಿಲ್ಲ. ನಮ್ಮ ಜೀವನ ಮುಂದೇ ಹೇಗಿರುತ್ತದೆ ಎಂಬುದು ಗೊತ್ತಿಲ್ಲ.” : ವಿದ್ಯಾರ್ಥಿನಿ ಶರಣ್ಯ ತಂದೆ ತಂಗರಾಜ್ ಮತ್ತು ತಾಯಿ ಮೀನಾ ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ಸಾಗಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳು ಉತ್ತಮವಾಗಿ ಓದಿ ಬದುಕಿನಲ್ಲಿ ದೊಡ್ಡ ಮಟ್ಟಕ್ಕೇರಬೇಕು ಎಂಬ ಕನಸು ತಂದೆಗೆ ಇತ್ತು. ಆದರೆ ಅನಾರೋಗ್ಯದ ಹಿನ್ನೆಲೆ ತಂಗರಾಜ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಕುಟುಂಬವನ್ನು ಸಂಕಷ್ಟಕ್ಕೆ ತಳ್ಳಿದರು. ಈ ದುರ್ಘಟನೆ ಮಂಗಳವಾರ ರಾತ್ರಿ ಸಂಭವಿಸಿತು. ಬುಧವಾರ ತರುಣ್ಯಗೆ…
ಶಿವಮೊಗ್ಗ: ತಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ನಡೆದ ದುರಂತ ಘಟನೆಯಲ್ಲಿ ವನ್ಯಜೀವಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (೨೬) ಅವರು ನೀರಾನೆ ದಾಳಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೂಲತಃ ಬೆಂಗಳೂರು ನಗರದ ಬನ್ನೇರುಘಟ್ಟ ನಿವಾಸಿಯಾದ ಸಮೀಕ್ಷಾ ರೆಡ್ಡಿ, ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಅವರು ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ತಾವರೆಕೊಪ್ಪ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸುಮಾರು ೧೧.೩೦ರ ಸುಮಾರಿಗೆ ಮೃಗಾಲಯದ ಆಸ್ಪತ್ರೆಗೆ ತೆರಳಿ ಹಕ್ಕಿಯೊಂದಕ್ಕೆ ಚಿಕಿತ್ಸೆ ನೀಡಿದ ನಂತರ, ಗರ್ಭಿಣಿಯಾಗಿದ್ದ ನೀರಾನೆ ಇರುವ ಆವರಣಕ್ಕೆ ತೆರಳಿದರು. ಥರ್ಮಲ್ ಕ್ಯಾಮೆರಾ ಬಳಸಿ ಅದರ ಆರೋಗ್ಯ ಸ್ಥಿತಿ ಪರಿಶೀಲಿಸುವಾಗ, ಆ ನೀರಾನೆ ಏಕಾಏಕಿ ದಾಳಿ ನಡೆಸಿ ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಯಿತು. ಆದರೆ ತೀವ್ರ ರಕ್ತಸ್ರಾವದಿಂದಾಗಿ ಅವರು ಚಿಕಿತ್ಸೆಗೂ ಸ್ಪಂದಿಸದೆ ಬೆಳಿಗ್ಗೆ ಸುಮಾರು ೬.೩೦ರ ಸುಮಾರಿಗೆ ನಿಧನರಾದರು. ದಾಳಿ ನಡೆಸಿದ ನೀರಾನೆ…
ಶಿವಮೊಗ್ಗ: ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ ೧೩೧ ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಇಂಡಿಗೋ ಸಂಸ್ಥೆಯು ಏಪ್ರಿಲ್ ೩೦ರ ವರೆಗಷ್ಟೇ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಿದ್ದು, ಮೇ ೧ರಿಂದ ಯಾವುದೇ ಬುಕ್ಕಿಂಗ್ ಲಭ್ಯವಿಲ್ಲ. ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದ ಹಿನ್ನೆಲೆ ಡಿಜಿಸಿಎ (ಆಉಅಂ) ವಿಮಾನಯಾನ ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ಪೈಲಟ್‌ಗಳ ಕೆಲಸದ ಅವಧಿ ಮತ್ತು ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದ ಹೊಸ ನಿಯಮಗಳಿಂದಾಗಿ ಇಂಡಿಗೋ ಸಂಸ್ಥೆಗೆ ಪೈಲಟ್‌ಗಳು ಕೊರತೆ ಎದುರಾಗಿದೆ. ಈ ತಾಂತ್ರಿಕ ಕಾರಣದಿಂದಾಗಿ ಸಂಸ್ಥೆಯು ಸಣ್ಣ ನಗರಗಳಿಗೆ ನೀಡುತ್ತಿದ್ದ ಎಟಿಆರ್ ವಿಮಾನ ಸೇವೆಗಳನ್ನು ಕಡಿತಗೊಳಿಸಲು ಮುಂದಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ಸ್ಥಗಿತ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾರ್ಗಸೂಚಿಗಳ ಪ್ರಕಾರ, ಪೈಲಟ್‌ಗಳ ಕೊರತೆಯಿಂದಾಗಿ ಇಂಡಿಗೋ ಏರ್‌ಲೈನ್ಸ್ ಮೇ ೧ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವಿನ ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ…
ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದ ಕಾಡಂಚಿನಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿವೆ. ಪುರದಾಳು ಗ್ರಾಮ ಸಮೀಪದ ನರಸೀಪುರ ಕಾಡಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯೇಕ್ಷವಾಗಿವೆ. ನರಸೀಪುರದ ಕೆರೆಯಲ್ಲಿ ಮೂರು ಕಾಡಾನೆಗಳು ನೀರು ಕುಡಿಯುವ ದೃಶ್ಯವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಪುರದಾಳು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಕಾಡಾನೆಗಳು ರೈತರ ಅಡಿಕೆ-ಬಾಳೆ ತೋಟ, ಭತ್ತದ ಗದ್ದೆಗಳನ್ನು ನಾಶ ಮಾಡಿದ್ದವು. ಈಗ ಮತ್ತೆ ಕಾಡಾನೆಗಳು ಪ್ರತ್ಯೇಕ್ಷವಾಗಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.