Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ: 37 ವರ್ಷಗಳ ನಂತರ ತರಳಬಾಳು ಹುಣ್ಣಿಮೆ ಉತ್ಸವ ನಡೆಯುತ್ತಿರುವುದು ಸಂತಸದ ವಿಷಯ ಎಂದು ತಿಳಿಸಿದ್ದಾರೆ. ಅವರು ಕನಕಪುರದ ಕನಕೋತ್ಸವ ಕಾರ್ಯಕ್ರಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಈ ಬಾರಿ ಐದು ಗ್ಯಾರಂಟಿ ಯೋಜನೆಯಡಿ ಮನೆಗೊಂದು ರಂಗೋಲಿ ಸ್ಪರ್ಧೆ ಆಯೋಜನೆಯಾಗಿದೆ. ಈ ಕಾರ್ಯಕ್ರಮದಲ್ಲಿ 73,000ಕ್ಕೂ ಹೆಚ್ಚು ಜನ ಭಾಗವಹಿಸಿದ್ದು, 11,000 ಮುಸ್ಲಿಂ ಮಹಿಳೆಯರು ಮೆಹಂದಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು. ಉಪಮುಖ್ಯಮಂತ್ರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆಯನ್ನು ಪಕ್ಷದ ತೀರ್ಮಾನದಂತೆ ಮುಂದೂಡಲಾಗಿದೆ ಎಂದು ತಿಳಿಸಿದ್ದರು. ಅವರು ಈ ಚುನಾವಣೆಗೆ ಅರ್ಜಿ ಹಾಕಿಲ್ಲ ಮತ್ತು ಜಾರ್ಜ್ ರಾಜೀನಾಮೆ ಬಗ್ಗೆ ಯಾವುದೇ ಮಾಹಿತಿ ಹೊಂದಿಲ್ಲವೆಂದು ಹೇಳಿದ್ದಾರೆ. ಆಧಿಕಾರಿಗಳೊಂದಿಗೆ ಸಮಾಲೋಚನೆ: ಡಿ.ಕೆ.ಶಿವಕುಮಾರ್ ಆಡಳಿತದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಲ್ಲಿ ತಪ್ಪಿಲ್ಲ ಎಂದು ಹೇಳಿದರು. “ಯಾರಾದರೂ ಅಧಿಕಾರಿಗಳೊಂದಿಗೆ ಚರ್ಚಿಸಬಹುದು. ಅಧಿಕಾರಿಗಳು ತಮ್ಮ ಜವಾಬ್ದಾರಿಯಂತೆ ಸಲಹೆ ನೀಡುತ್ತಾರೆ. ಅದರಲ್ಲಿ ದೋಷವಿಲ್ಲ” ಎಂದು ಅವರು ಹೇಳಿದರು. ಮನರೇಗಾ ಯೋಜನೆ ಮತ್ತು ಗ್ರಾಮೀಣ ಅಭಿವೃದ್ಧಿ: ಅವರ ಹೇಳಿಕೆಯಿಂದ, ಮನರೇಗಾ ಯೋಜನೆಯಲ್ಲಿ ತಮ್ಮ ಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ…
ಶಿವಮೊಗ್ಗ : ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಹೊತ್ತಿದ ಬೆಂಕಿಗೆ ಮನೆ ಮಾಲೀಕ ಮಲ್ಲಿಕಾರ್ಜುನ್ ತೀವ್ರ ರೀತಿ ಗಾಯಗೊಂಡಿರುವ ಘಟನೆ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ಬಡಾವಣೆಯಲ್ಲಿ ನಡೆದಿದೆ. ಮನೆಗೆ ಬಂದ ತುಂಬಿದ ಅಡುಗೆ ಅನಿಲ ಸಿಲಿಂಡರ್ ಅನ್ನು ಮಲ್ಲಿಕಾರ್ಜುನ್ ಹಾಗೂ ಅವರ ಪತ್ನಿ ಓಲೆಗೆ ಸಂಪರ್ಕ ನೀಡುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹರಡಿಕೊಂಡಿದೆ. ಬೆಂಕಿಯಿಂದ ತೀವ್ರ ರೀತಿ ಗಾಯಗೊಂಡ ಮನೆ ಮಾಲೀಕ ಮಲ್ಲಿಕಾರ್ಜುನ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿಯ ತೀವ್ರತೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿ ಮನೆಗೆ ಬಹುತೇಕ ಹಾನಿಯಾಗಿದೆ. ಅಡುಗೆ ಮನೆಯಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಸಂದರ್ಭದಲ್ಲಿ ಮನೆಯಿಂದ ಹೊರಗೆ ಓಡಿ ಬಂದ ಮಲ್ಲಿಕಾರ್ಜುನ್ ಅಕ್ಕ ಹಾಗೂ ಪತ್ನಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಬೆಂಕಿ ಹರಡಿದ ಸಂದರ್ಭದಲ್ಲಿ ಮನೆ ಸಮೀಪವಿದ್ದ ಎದುರು ಮನೆ ಮಹಿಳೆ ಕಮಲಮ್ಮ ಅವರ ಕಾಲಿಗೆ ಬೆಂಕಿ ತಗುಲಿದ ಪರಿಣಾಮ ಸಣ್ಣ…
ಶಿವಮೊಗ್ಗ : ಮನೆಯ ಬಾತ್ ರೂಂ ನಲ್ಲಿ ಹೆಬ್ಬಾವುವೊಂದು ಕಾಣಿಸಿಕೊಂಡು ಮನೆಯವರಿಗೆ ಭಯ ಹುಟ್ಟಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗೋಪಾಳದ ತುಳಸಿ ಬಡಾವಣೆಯ ವಿನಯ್ ಎಂಬುವರ ಮನೆಯ ಬಾತ್ ರೂಂ ನಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಇದನ್ನ ಕಂಡ ಮನೆಯವರು ಶಾಕ್ ಆಗಿದ್ದಾರೆ. ವಿನಯ್ ಮನೆಯಲ್ಲಿ ಕಳೆದ ರಾತ್ರಿ ಏಕಾಏಕಿ ಹೆಬ್ಬಾವು ಕಾಣಿಸಿಕೊಂಡಿದೆ. ಮನೆಯೊಳಗೆ ಬಂದ ಹೆಬ್ಬಾವು ಬಾತ್ ರೂಂ ಕಾಣಿಸಿಕೊಂಡಿದೆ. ಕೂಡಲೇ ಉರಗ ತಜ್ಞ ಸ್ನೇಕ್ ಕಿರಣ್ ಗೆ ಮನೆಯವರು ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹೆಬ್ಬಾವು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಇದರಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಶಿವಮೊಗ್ಗ ನಗರದ ರಾಗಿಗುಡ್ಡ ಪ್ರದೇಶದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಶಾಲೆಯಲ್ಲಿರುವ 14 ವಿದ್ಯಾರ್ಥಿನಿಯರಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ. ಕೆಮ್ಮು ತೀವ್ರಗೊಂಡ ಕಾರಣ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 6 ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ವಸತಿ ಶಾಲೆಯ ವಾರ್ಡನ್ ನಿರಂತರ ಕೆಮ್ಮಿನ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದಾರೆ. ಇದು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆ ಆಗಿದ್ದು, ಪ್ರಕರಣದ ಗಂಭೀರತೆಯನ್ನು ಗಮನಿಸಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರ್ (THO) ಹಾಗೂ ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ಹೆಚ್ಚಿನ ತನಿಖೆ ಮತ್ತು ಅಗತ್ಯ ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಂಡಿದೆ.
ಶಿವಮೊಗ್ಗ: ಮನೆ ಬೋಗ್ಯ ಕೊಡಿಸುವುದಾಗಿ ಹೇಳಿ ಅಕ್ರಮವಾಗಿ 5 ಲಕ್ಷ ಹಣ ಪಡೆದು ಮೋಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಕಚೇರಿ ಮುಂಭಾಗ ಡಿಎಸ್‌ಎಸ್ ಸಂಚಾಲಕ ಚಿನ್ನಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಚಂದ್ರಿಕಾ ಎಂಬ ಮಹಿಳೆಯಿಂದ ಸುಮಾರು ಮೂರು ತಿಂಗಳ ಹಿಂದೆ ಕರಾರು ಮಾಡಿಕೊಂಡು ಹಣ ಪಡೆದು, ಅರ್ಚನಾ ಎಂಬ ಮಹಿಳೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ, ಡಿವೈಎಸ್‌ಪಿಯವರಿಗೆ ದೂರು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದಲ್ಲಿ ಕ್ರಮ ಕೈಗೊಳ್ಳದ ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ಅವರನ್ನು ತಕ್ಷಣವೇ ಇಲ್ಲಿಂದ ವಾಪಸ್ ಕರೆಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇಂದಿನ ಪೊಲೀಸ್ ಠಾಣೆಗಳು ಮಧ್ಯವರ್ತಿಗಳಂತೆ ವರ್ತಿಸುವುದನ್ನು ಬಿಟ್ಟು, ನೊಂದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು. ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಮಾತನಾಡಿ ನೊಂದ ದಲಿತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದಲೇ ಸರ್ಕಾರ…
ಭದ್ರಾವತಿ: ತರಳಬಾಳು ಹುಣ್ಣಿಮೆ ತನ್ನದೆ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪೂಜ್ಯರು ನಗರದ ಉಂಬ್ಳೆಬೈಲು ರಸ್ತೆಯ ಬೊಮ್ಮನಕಟ್ಟೆ ವಿಐಎಸ್‌ಎಲ್ ಹೆಲಿಪ್ಯಾಡ್ ಬಳಿ ಹಮ್ಮಿಕೊಂಡಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವದ ಕಾರ್ಯಕ್ರಮದ ಭರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಮಹಾಮಂಟಪ, ರಾಷ್ಟ್ರಕವಿ ಕುವೆಂಪು ಮಹಾವೇದಿಕೆಯಲ್ಲಿ ನಡೆದ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು. ಯಡಿಯೂರಪ್ಪ ನವರು ಸಿಎಂ ಆಗಿದ್ದ ಸಂಧರ್ಭದಲ್ಲಿ ಶ್ರೀ ಮಠಕ್ಕೆ ಏನಾದರೂ ಕೊಡುಗೆ ಕೊಡಬೇಕು ಎಂದು ಕೊಂಡಿದ್ದೇನೆ ಏನು ಕೊಡಲಿ ಎಂದು ಹೇಳಿದಾಗ ಶ್ರೀ ಮಠಕ್ಕೆ ಕೊಡುಗೆ ಕೊಟ್ಟರೆ ನೀವು ಕೆಟ್ಟ ಹೆಸರು ಪಡೆಯುತ್ತೀರಾ, ಹಾಗಾಗಿ ಮಠಕ್ಕೆ ಕೊಡುಗೆ ನೀಡುವ ಬದಲಿಗೆ ಮಠದವತಿಯಿಂದ ಹಮ್ಮಿಕೊಂಡಿರುವ ನೀರಾವರಿ ಯೊಜನೆಗಳಿಗೆ ಅನುದಾನ ನೀಡಿ ಎಂದಾಗ ೨೫ ಕೋಟಿ ರೂಗಳನ್ನ ಮಂಜೂರು ಮಾಡುವ ಮೂಲಕ ಜಗಳೂರು, ಭರಮಸಾಗರ, ಹಳೇಬೀಡುಗಳಲ್ಲಿ ಏತ ನೀರಾವರಿ ಯೋಜನೆಗಳು ಅನುಷ್ಟಾನಗೊಳ್ಳಲು ಕಾರಣೀಭೂತರಾದರು ಎಂದು ಅವರ ಕೊಡುಗೆಯನ್ನು ಸ್ಮರಿಸಿದರು. ರಾಜಪ್ರಭುತ್ವದ ಕಾಲದಲ್ಲಿ ವಿಐಎಸ್‌ಎಲ್ ಕಾರ್ಖಾನೆ…
ಅಪಹರಿಸಿ, ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 9 ಗೋವುಗಳು ಶಿವಮೊಗ್ಗ : ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 9 ಗೋವುಗಳನ್ನು ರಕ್ಷಿಸಿರುವ ಮಾಳೂರು ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಡಗದ್ದೆ ಸಮೀಪದ ನೆಲ್ಲಿಸರ ಕ್ಯಾಂಪ್ ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸುತ್ತಮುತ್ತಲ ಹಳ್ಳಿಗಳಿಂದ ಹಸುಗಳು ಮತ್ತು ಕರುಗಳನ್ನು ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿರುವಾಗ ಗಸ್ತಿನಲ್ಲಿದ್ದ ಮಾಳೂರು ಪೊಲೀಸರು ಅನುಮಾನಗೊಂಡು ಗೋವುಗಳಿದ್ದ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿ ಪರಿಶೀಲಿಸಿದಾಗ ಹಸುಗಳಿರುವುದು ಪತ್ತೆಯಾಗಿದೆ. ಸಣ್ಣ ವಾಹನದಲ್ಲಿ ಒಂಬತ್ತು ಹಸುಗಳನ್ನು ಸ್ವಲ್ಪವೂ ಜಾಗವಿಲ್ಲದೆ ಇಕ್ಕಟ್ಟಾಗಿ ಬಂಧಿಸಿ ಸಾಗಿಸುತ್ತಿದ್ದರು. ಕೂಡಲೆ ಹಸುಗಳನ್ನು ವಶಕ್ಕೆ ಮಾಳೂರು ಠಾಣಾ ಪೊಲೀಸರು ಪಡೆದಿದ್ದಾರೆ. ಶಿವಮೊಗ್ಗದ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ವಶಕ್ಕೆ ಪಡೆದ ಗೋವುಗಳನ್ನು ಸುರಕ್ಷಿತವಾಗಿ ಶಿವಮೊಗ್ಗದ ಗೋಶಾಲೆಯೊಂದಕ್ಕೆ ಕಳುಹಿಸಲಾಗಿದೆ ಎಂದು ಮಾಳೂರು ಪಿಎಸ್‌ಐ ಸಂತೋಷ್ ತಿಳಿಸಿದ್ದಾರೆ.
ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆಯಾ ಗಿಲ್ಲ ಎಂದು ಪಾಲಿಕೆ ಆಯುಕ್ತ ಡಿ.ಸಿ. ಮಾಯಣ್ಣಗೌಡ ತಿಳಿಸಿದ್ದಾರೆ. ಅವರು ಬುಧವಾರ 2025-26ನೇ ಸಾಲಿನ ಆಯ-ವ್ಯಯದ ಮೊದಲ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸಭೆಯ ಆರಂಭದಲ್ಲಿ ಕಳೆದ ಸಾಲಿನ ಆಯವ್ಯಯ ಅನುಷ್ಟಾನದ ಮಾಹಿತಿ ಮತ್ತು ಅಂಕಿ-ಅಂಶಗಳನ್ನು ಅಧಿಕಾರಿಗಳು ಪಿಪಿಟಿ ಮೂಲಕ ವಿವರಿಸಲು ಮುಂದಾದಾಗ, ನಾಗರಿಕ ಹಿತರಕ್ಷಣಾ ಸಮಿತಿಗಳ ಒಕ್ಕೂಟದ ಪದಾಧಿಕಾರಿ ಗಳಾದ ಕೆ.ವಿ. ವಸಂತ್‌ಕು ಮಾರ್, ಡಾ. ಸತೀಶ್‌ಕು ಮಾರ್ ಶೆಟ್ಟಿ ಹಾಗೂ ಪರಿಸರ ರಮೇಶ್ ಅವರು ಅಂಕಿ ಅಂಶಗಳ ಮುದ್ರಿತ ಪ್ರತಿಯನ್ನು ಸಭೆಗೆ ಪೂರೈಸಿದ ಬಳಿಕವೇ ಚರ್ಚೆ ಮುಂದುವರಿಸಬೇಕು ಎಂದು ಪಟ್ಟು ಹಿಡಿದರು. ಪ್ರಮುಖ ಸಭೆಗಳಲ್ಲಿ ಸದಸ್ಯರಿಗೆ ಮುದ್ರಿತ ದಾಖಲೆ ನೀಡುವುದು ಕಡ್ಡಾಯವಾಗ ಬೇಕು ಎಂದು ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಸೇರಿದಂತೆ ಹಲವು ಯೋಜ ನೆಗಳಿಗೆ ಸರ್ಕಾರದಿಂದ…
ಶಿವಮೊಗ್ಗದಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ 21 ವರ್ಷದ ಗಣೇಶ್ ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಗಣೇಶ್ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ನಗರದ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದನು. ಇಂದು ಬೆಳಿಗ್ಗೆ ಹಾಸ್ಟೆಲ್‌ನ ಬಾತ್‌ರೂಮ್‌ಗೆ ತೆರಳಿದ್ದ ವೇಳೆ ಅಚಾನಕ್ ಕುಸಿದು ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಸಹಪಾಠಿಗಳು ಹಾಗೂ ಹಾಸ್ಟೆಲ್ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಮಾರ್ಗ ಮಧ್ಯೆಯಲ್ಲೇ ಗಣೇಶ್ ಪ್ರಾಣ ಕಳೆದುಕೊಂಡಿದ್ದಾನೆ. ಪ್ರಾಥಮಿಕ ಮಾಹಿತಿಯಂತೆ ಹೃದಯಾಘಾತವೇ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ ಐದನೇ ವರ್ಷದ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದು, ಆತನ ಅಕಾಲಿಕ ನಿಧನವು ಕಾಲೇಜು ವಲಯ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಸಮೂಹದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ…
ಶಿವಮೊಗ್ಗ : ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಮಾಡದ ಕಾರಣ ವೃದ್ಧಾಪ್ಯ ಮತ್ತು ಅಂಗವೈಕಲ್ಯ ಪಿಂಚಣಿ ಇಲ್ಲದೆ 77 ವರ್ಷದ ವಿಕಲಚೇತನ ವ್ಯಕ್ತಿ ಮತ್ತು ಅವರ ಹಾಸಿಗೆ ಹಿಡಿದ ಪತ್ನಿ ಕಷ್ಟಪಡುತ್ತಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಆಧರಿಸಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆಎನ್ ಫಣೀಂದ್ರ ಸ್ವಯಂಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ. ಈ ದಂಪತಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವಾಸಿಸುತ್ತಿದ್ದಾರೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಲ್ಲ ಎಂಬ ಒಂದೇ ಒಂದು ಕಾರಣಕ್ಕಾಗಿ ದಂಪತಿಯ ವೃದ್ಧಾಪ್ಯ ಮತ್ತು ಅಂಗವಿಕಲ ಪಿಂಚಣಿ ನಿರಾಕರಿಸುವುದು ಮತ್ತು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದು ಪ್ರಾಥಮಿಕವಾಗಿ ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಸಮನಾಗಿರುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 2(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ ನ್ಯಾಯಮೂರ್ತಿ ಫಣೀಂದ್ರ ಹೇಳಿದ್ದಾರೆ. ದೂರಿನ ಪ್ರಕಾರ, ಗಜಾನನ ಅವರು ಅಂಗವಿಕಲರಾಗಿದ್ದು, 7-8 ವರ್ಷಗಳಿಂದ ಹಾಸಿಗೆ ಹಿಡಿದಿರುವ ತಮ್ಮ ಪತ್ನಿ ಭಾರತಿಯನ್ನು ನೋಡಿಕೊಳ್ಳುತ್ತಿದ್ದಾರೆ. ಜೀವನೋಪಾಯಕ್ಕೆ ಬೇರೆ ದಾರಿಗಳಿಲ್ಲದೆ, ಸಾಗರದ ಭೀಮನಕೋಣೆ ಮುಖ್ಯ ರಸ್ತೆಯ…