Subscribe to Updates
Get the latest creative news from FooBar about art, design and business.
Author: Raghu Shetty
ನವದೆಹಲಿ: ರಾಷ್ಟ್ರ ಪ್ರಶಸ್ತಿ ಹಾಗೂ ಪದ್ಮಶ್ರೀ ಪುರಸ್ಕೃತ ಗಾಯಕಿ, ಬಿಜೆಪಿ ನಾಯಕಿ ಅನುರಾಧಾ ಪೌಡ್ವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ಟೀಕೆ ವ್ಯಕ್ತಪಡಿಸಿದ್ದಾರೆ. ಭಾರತವನ್ನು ‘ವಿಶ್ವಗುರು’ ಎಂದು ಕರೆಯುವ ಮೊದಲು ಶಿಕ್ಷಣ ಸೇರಿದಂತೆ ಮೂಲಭೂತ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ನಡೆದ ಪಾಡ್‌ಕಾಸ್ಟ್ ಸಂದರ್ಶನದಲ್ಲಿ ಮಾತನಾಡಿದ ಅವರು, “ದೇಶದಲ್ಲಿ ಸುಮಾರು ೯೩ ಸಾವಿರ ಶಾಲೆಗಳು ಮುಚ್ಚಲ್ಪಟ್ಟಿವೆ ಎಂದು ಹೇಳಲಾಗುತ್ತಿದೆ. ಶಿಕ್ಷಣದ ಅಡಿಪಾಯವೇ ದುರ್ಬಲವಾಗಿರುವಾಗ ‘ವಿಶ್ವಗುರು’ ಎಂಬ ಘೋಷಣೆಗೆ ಅರ್ಥವೇನು?” ಎಂದು ಪ್ರಶ್ನಿಸಿದರು. ಅವರು “ಕೇವಲ ಘೋಷಣೆಗಳಿಂದ ದೇಶ ಅಭಿವೃದ್ಧಿಯಾಗುವುದಿಲ್ಲ. ಕಾರ್ಯರೂಪಕ್ಕೆ ಬರುವ ನೀತಿಗಳು ಮತ್ತು ಜನರಿಗೆ ನೇರವಾಗಿ ಪ್ರಯೋಜನವಾಗುವ ಯೋಜನೆಗಳೇ ನಿಜವಾದ ಅಭಿವೃದ್ಧಿಯ ಮಾನದಂಡ” ಎಂದು ಹೇಳಿದರು. ರಾಮರಾಜ್ಯದ ಕುರಿತು ಪ್ರಸ್ತಾಪಿಸಿದ ಅನುರಾಧಾ ಪೌಡ್ವಾಲ್, “ರಾಮಮಂದಿರದಲ್ಲಿಯೇ ಕಳ್ಳತನ ನಡೆದಿರುವಾಗ ಆದರ್ಶ ಆಡಳಿತದ ಬಗ್ಗೆ ಮಾತನಾಡುವುದು ಸಾಕಾಗುವುದಿಲ್ಲ. ‘ವಿಶ್ವಗುರು’ ಆಗಲು ಅಗತ್ಯವಾದ ಮಾನದಂಡಗಳನ್ನು ಮೊದಲು ಪೂರೈಸಬೇಕು” ಎಂದು ಹೇಳಿದರು. ಅನುರಾಧಾ ಪೌಡ್ವಾಲ್…
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಗಾಲ ಬಂತೆಂದರೆ ಸಾಕು, ರಸ್ತೆ ಸಂಪರ್ಕ ಕಡಿತಗೊಳ್ಳುವುದು, ವಿದ್ಯುತ್ ಕೈಕೊಡುವುದು ಸರ್ವೇ ಸಾಮಾನ್ಯ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಮನೆಗೆ ಬೆಳಕು ನೀಡಲು ವಿದ್ಯುತ್ ಇಲಾಖೆಯ ಸಿಬ್ಬಂದಿಗಳು ಪಡುವ ಪಾಡು ಅಷ್ಟಿಷ್ಟಲ್ಲ. ಇದಕ್ಕೆ ಸಾಕ್ಷಿ ಎಂಬಂತೆ, ಶಿವಮೊಗ್ಗ ಜಿಲ್ಲೆಯಲ್ಲಿ ಮೆಸ್ಕಾಂ ಸಿಬ್ಬಂದಿಯಿಬ್ಬರು ತಮ್ಮ ಜೀವವನ್ನೇ ಪಣಕ್ಕಿಟ್ಟು ಮಾಡಿರುವ ಸಾಹಸದ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ನಡೆದಿದ್ದೇನು? ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಂಟೆಹೊಳೆಯಲ್ಲಿ ಈ ರೋಮಾಂಚಕ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಕುಂಟೆಹೊಳೆ ನದಿಯು ಅಪಾಯದ ಮಟ್ಟ ಮೀರಿ ರಭಸವಾಗಿ ಹರಿಯುತ್ತಿತ್ತು. ಇದೇ ಹೊಳೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ಮುಖ್ಯ ವಿದ್ಯುತ್ ಲೈನ್ ಕಟ್ ಆಗಿ ನದಿಗೆ ಬಿದ್ದಿತ್ತು. ಇದರಿಂದಾಗಿ ಸುತ್ತಮುತ್ತಲಿನ ಹಳ್ಳಿಗಳು ಸಂಪೂರ್ಣವಾಗಿ ಕತ್ತಲಲ್ಲಿ ಮುಳುಗಿದ್ದವು. ನದಿಯ ನೀರಿನ ಹರಿವು ತೀವ್ರವಾಗಿದ್ದರಿಂದ ವಿದ್ಯುತ್ ಲೈನ್ ಸರಿಪಡಿಸುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೀವದ ಹಂಗು ತೊರೆದ ಮೆಸ್ಕಾಂ ವೀರರು! ಆದರೆ, ಕತ್ತಲಲ್ಲಿ…
ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಹೊರರಾಜ್ಯದ ಯುವತಿಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಕೈಕೊಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಈ ಕೃತ್ಯ ಎಸಗಿದವ ನಗರದ ನಿವಾಸಿ ಶ್ರೀನಿಧಿ ಎಂಬಾತನ ವಿರುದ್ಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನೆಯ ಹಿನ್ನೆಲೆ: ಆರೋಪಿ ಶ್ರೀನಿಧಿ ಹೊರರಾಜ್ಯದ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದಾನೆ. ಪ್ರೀತಿಯ ಹೆಸರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇತ್ತೀಚೆಗೆ ಯುವತಿ ಗರ್ಭಿಣಿಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಶ್ರೀನಿಧಿ ಆಕೆಯನ್ನು ಮದುವೆಯಾಗಲು ನಿರಾಕರಿಸಿ, ಕೈಕೊಟ್ಟಿದ್ದಾನೆ. ತಾನು ವಂಚನೆಗೆ ಒಳಗಾಗಿರುವುದನ್ನು ಅರಿತ ನೊಂದ ಯುವತಿ ತಕ್ಷಣ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾರೆ. ಯುವತಿಯ ದೂರಿನನ್ವಯ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳ ಮಹಜರು ನಡೆಸಿದ ಪೊಲೀಸರು: ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಮಹಿಳಾ ಠಾಣೆಯ ಪೊಲೀಸರು, ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿರುವ ‘ಶ್ರೀ ಅನುರಾಧ ಕ್ರಿಯೇಷನ್’ ಅಂಗಡಿಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ.…
ಶಿವಮೊಗ್ಗ : ಐದು ವರ್ಷದ ಹಿಂದೆ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಹತ್ತಿರ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದೆ. 2021ರ ಮೇ 4ರಂದು ರಾತ್ರಿ ಸುಮಾರು 2.45ರ ವೇಳೆಗೆ ಆರೋಪಿ ಮೊಹಮ್ಮದ್ ನೂರುಲ್ಲಾ, ಮೊಹಮ್ಮದ್ ತಬರಕ್ ಉಲ್ಲಾ, ಸೈಯದ್ ಅಹಮ್ಮದ್ ಎಂಬುವರು ದೂರುದಾರರ ಬಳಿ ಚಾಕು ತೋರಿಸಿ ಬೆದರಿಕೆ ಹಾಕಿ 500 ನಗದು ಹಾಗೂ 12,000 ಮೌಲ್ಯದ ಮೊಬೈಲ್ ಫೋನ್ ದರೋಡೆ ಮಾಡಿದ್ದರು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಅಂದಿನ ತನಿಖಾಧಿಕಾರಿಗಳಾದ ಸಂಜೀವ್ ಕುಮಾರ್ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್ ವಾದ ಮಂಡಿಸಿದ್ದರು. ಓರ್ವ ಆರೋಪಿ ಮೊಹಮ್ಮದ್ ನೂರುಲ್ಲಾ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆ ಒಂದನೇ ಹೆಚ್ಚುವರಿ ನ್ಯಾಯಾಲಯ ಹಾಗೂ…
ಶಿವಮೊಗ್ಗ, : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೂರನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಯುವತಿಯರಿಗೆ ಹಾಗೂ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 09/07/2026 ಗುರುವಾರ ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ…
ಶಿವಮೊಗ್ಗ, : ನಗರದ ಮಿಳಘಟ್ಟದಲ್ಲಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ, ಆತ್ಮರಕ್ಷಣೆಗಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯ ಸಿಪಿಐ ಸತ್ಯನಾರಾಯಣ್ ವೈ. ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಗುಂಡೇಟಿನಿಂದ ಗಾಯಗೊಂಡಿರುವ ಕೊಲೆ ಆರೋಪಿ ಕಿಶೋರ್ (28)ನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ನಡೆಸಿದ ಹಲ್ಲೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಮಿಳಘಟ್ಟ ನಿವಾಸಿ ಸುಶೀಲಮ್ಮ (65) ಅವರನ್ನು ಬುಧವಾರ ತಲೆಯ ಮೇಲೆ ಸೈಜುಗಲ್ಲು ಎತ್ತಿಹಾಕಿ ಅಮಾನುಷವಾಗಿ ಹತ್ಯೆಗೈದ ಬಳಿಕ ಆರೋಪಿ ಕಿಶೋರ್ ಪರಾರಿಯಾಗಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಆರೋಪಿಯ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಲೇಔಟ್‌ನಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಸಿಪಿಐ ಸತ್ಯನಾರಾಯಣ್ ವೈ. ಅವರ…
ಇಂದಿನ ಕಾಲದಲ್ಲಿ ಮಾನವರ ನಡುವೆಯೇ ಸಂಬಂಧಗಳು ದೂರವಾಗುತ್ತಿರುವ ಸಂದರ್ಭದಲ್ಲೂ ಪ್ರಾಣಿಗಳ ನಡುವೆ ಕಂಡುಬರುವ ಪ್ರೀತಿ ಮತ್ತು ಕಾಳಜಿ ಅನೇಕ ಬಾರಿ ಮನಸ್ಸಿಗೆ ಹೊಸ ಭರವಸೆ ನೀಡುತ್ತವೆ. ಅಂತಹ ಅಪರೂಪದ ಮತ್ತು ಹೃದಯಸ್ಪರ್ಶಿ ದೃಶ್ಯವೊಂದು ಹೊಸನಗರ ತಾಲೂಕಿನ ಅರಸಾಳು ಗ್ರಾಮದಲ್ಲಿ ಅಪರೂಪದ ಘಟನೆ ಕಂಡುಬಂದಿದೆ. ನೆಲದ ಮೇಲೆ ವಿಶ್ರಾಂತಿ ಪಡೆಯುತ್ತಿದ್ದ ನಾಯಿ ತನ್ನ ಮರಿಯಂತೆ ಬೆಕ್ಕಿನ ಮರಿಗೂ ಮಮತೆ ತೋರಿಸಿದ್ದು, ಹಸಿವಿನಿಂದ ಅದರ ಬಳಿ ಬಂದ ಬೆಕ್ಕಿನ ಮರಿಗೆ ಯಾವುದೇ ವಿರೋಧವಿಲ್ಲದೆ ಹಾಲು ಕುಡಿಯಲು ಅವಕಾಶ ನೀಡಿರುವ ದೃಶ್ಯ ಎಲ್ಲರ ಗಮನ ಸೆಳೆಯುತ್ತಿದೆ. ಸಾಮಾನ್ಯವಾಗಿ ನಾಯಿ ಮತ್ತು ಬೆಕ್ಕು ಎಂದರೆ ಪರಸ್ಪರ ಹೊಂದಾಣಿಕೆ ಕಡಿಮೆ ಎನ್ನುವ ಕಲ್ಪನೆ ಇದೆ. ಆದರೆ ಈ ದೃಶ್ಯ ಆ ಕಲ್ಪನೆಗೆ ವಿರುದ್ಧವಾಗಿ ಪ್ರಾಣಿಗಳಲ್ಲಿರುವ ಸಹಜ ಪ್ರೀತಿ, ಕರುಣೆ ಮತ್ತು ಸ್ವೀಕಾರ ಮನೋಭಾವವನ್ನು ತೋರಿಸಿದೆ. ಬೆಕ್ಕಿನ ಮರಿ ಕೂಡ ಯಾವುದೇ ಭಯವಿಲ್ಲದೆ ನಾಯಿಯ ಬಳಿ ಸೇರಿ ಹಾಲು ಕುಡಿಯುತ್ತಿರುವುದು, ಪ್ರಾಣಿಗಳ ನಡುವಿನ ನಂಬಿಕೆ ಮತ್ತು ಭಾವನಾತ್ಮಕ ಸಂಬಂಧವನ್ನು ಪ್ರತಿಬಿಂಬಿಸುತ್ತದೆ.…
ಶಿವಮೊಗ್ಗ : ಅಧ್ಯಯನವಿಲ್ಲದ ಅಧ್ಯಾಪನ ಅರ್ಥಹೀನವಾಗಿದ್ದು, ಬದಲಾಗುತ್ತಿರುವ ಕಾಲಘಟ್ಟದಲ್ಲಿ ಶಿಕ್ಷಕರು ನಿರಂತರ ಕಲಿಕೆ ಮತ್ತು ಕ್ರೀಯಾಶೀಲ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಮಕ್ಕಳಿಗೆ ಪರಿಣಾಮಕಾರಿ ಶಿಕ್ಷಣ ನೀಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಹೇಳಿದರು. ನಗರದ ಕಸ್ತೂರಬಾ ಬಾಲಿಕಾ ಪ್ರೌಢಶಾಲೆ ವತಿಯಿಂದ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ೨೦೨೬-೨೭ನೇ ಸಾಲಿನ ವಿದ್ಯಾರ್ಥಿನಿ ಸಂಘದ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ಸಾಧಿಸಿದ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪುಸ್ತಕಾಧಾರಿತ ಶಿಕ್ಷಣದ ಜೊತೆಗೆ ಮಕ್ಕಳಲ್ಲಿರುವ ಅಂತಃಶಕ್ತಿಯನ್ನು ಗುರುತಿಸಿ, ಅವರನ್ನು ಸಾಧಕರಾಗಿ ರೂಪಿಸುವತ್ತ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು ಎಂದರು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಎನ್‌ಇಎಸ್ ವಿದ್ಯಾರ್ಥಿಗಳು ಸಾಧನೆ ಮೂಲಕ ತಮ್ಮದೇ ಆದ ಗುರುತನ್ನು ನಿರ್ಮಿಸುತ್ತಿದ್ದಾರೆ ಎಂದು ಹೇಳಿದರು. 72 ವರ್ಷಗಳ ಶೈಕ್ಷಣಿಕ ಪರಂಪರೆ ಹೊಂದಿರುವ ಕಸ್ತೂರಬಾ ಶಾಲೆಯು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ದಾಖಲಿಸಿದೆ. ಈ ಸಾಧನೆ ಹಿಂದೆ ಶಿಕ್ಷಕರ…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಸ್ವಾತಿ (26) ಎಂದು ಗುರುತಿಸಲಾಗಿದೆ. ಅವರು ಶಿಕಾರಿಪುರ ಮೂಲದ ಯುವಕರೊಂದಿಗೆ ಸುಮಾರು ಮೂರು ತಿಂಗಳ ಹಿಂದೆ ವಿವಾಹವಾಗಿದ್ದು, ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ತವರು ಮನೆಯಲ್ಲಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಸ್ವಾತಿಯವರ ತಂದೆ-ತಾಯಿ ಹೊಲಕ್ಕೆ ತೆರಳಿದ್ದ ಸಮಯದಲ್ಲಿ ಅವರು ಮನೆಯ ಕೋಣೆಯಲ್ಲಿ ಸೀರೆಯನ್ನು ಉರುಳಾಗಿ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಬಳಿಕ ಅಕ್ಕಪಕ್ಕದವರು ವಿಷಯ ತಿಳಿದು ಹೊಲದಲ್ಲಿದ್ದ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ನೆರೆಹೊರೆಯವರು ಮನೆಯ ಬಾಗಿಲು ಮುರಿದು ಸ್ವಾತಿಯವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಕುಟುಂಬದವರ ಮಾಹಿತಿ ಪ್ರಕಾರ, ಸ್ವಾತಿ ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ, ತೀವ್ರ ಹೊಟ್ಟೆನೋವು ಹಾಗೂ ನಿರಂತರ ವಾಂತಿಯಿಂದ ಬಳಲುತ್ತಿದ್ದರು. ಹೊಟ್ಟೆನೋವನ್ನು ತಾಳಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ…
ಶಿವಮೊಗ್ಗ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡ ಬೆನ್ನಲ್ಲೇ, ಜಲಪಾತಗಳನ್ನು ವೀಕ್ಷಿಸಲು ಬರುತ್ತಿರುವ ಕೆಲವು ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ವಿಶ್ವವಿಖ್ಯಾತ ಜೋಗ ಜಲಪಾತದ ನಿರ್ಬಂಧಿತ ವಲಯವಾದ ರಾಜಾ ಫಾಲ್ಸ್ ಬಳಿ ಅಕ್ರಮವಾಗಿ ಪ್ರವೇಶಿಸಿ, ಅಪಾಯಕಾರಿ ಕಲ್ಲುಬಂಡೆಗಳ ಮೇಲೆ ನಿಂತು ವೀಡಿಯೋ ಚಿತ್ರೀಕರಣ ಮಾಡಿದ ಯೂಟ್ಯೂಬರ್ ಸೇರಿದಂತೆ ಮೂವರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಾಯಕಾರಿ ಜಾಗದಲ್ಲಿ ವೀಡಿಯೋ ಮಾಡಿ ಜಾಲತಾಣಕ್ಕೆ ಅಪ್‌ಲೋಡ್ ಮಾಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಜೋಗಿನಕೊಪ್ಪ ಮೂಲದ ಯುವಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳನ್ನು ಮೋಹನ ಶುಭಕರ ಗೌಡ (26 ವರ್ಷ), ಭರತ ಗೌಡ (27 ವರ್ಷ) ಹಾಗೂ ಮದನ ಗೌಡ ಎಂದು ಗುರುತಿಸಲಾಗಿದೆ. ಮಳೆಗಾಲದ ಸಮಯದಲ್ಲಿ ಜಲಪಾತಗಳ ಬಳಿ ಬಂಡೆಗಳು ಅತ್ಯಂತ ನುಣುಪಾಗಿದ್ದು, ಸಣ್ಣ ನಿರ್ಲಕ್ಷ್ಯವೂ ಪ್ರಾಣಕ್ಕೆ ಕುತ್ತು ತರಬಹುದು. ಆದ್ದರಿಂದ ಪ್ರವಾಸಿಗರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ನಿಷೇಧಿತ ಪ್ರದೇಶಗಳಿಗೆ ಇಳಿಯಬಾರದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.