Subscribe to Updates
Get the latest creative news from FooBar about art, design and business.
Author: Raghu Shetty
ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರ ತನಿಖೆ ವೇಳೆ ಈ ದಂಪತಿಯೇ ನಕಲಿ ನಂದಿನಿ ಉತ್ಪನ್ನಗಳ ತಯಾರಿಕೆ ಘಟಕದ ಕಿಂಗ್‌ಪಿನ್‌ಗಳು ಎಂಬುದು ದೃಢಪಟ್ಟಿದೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ದಂಪತಿಗಳು ನೆರೆಯ ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕವನ್ನು ಸ್ಥಾಪಿಸಿದ್ದರು. ಈ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ, ನಕಲಿ ತುಪ್ಪ ತಯಾರಿಸಲು ಬಳಸುತ್ತಿದ್ದ ದೊಡ್ಡ ದೊಡ್ಡ ಹೈಟೆಕ್ ಮೆಷಿನರಿಗಳು ಮತ್ತು ಅತ್ಯಾಧುನಿಕ ಯಂತ್ರಗಳು ಪತ್ತೆಯಾಗಿವೆ. ಈ ಯಂತ್ರಗಳನ್ನು ಬಳಸಿಕೊಂಡು ದಂಪತಿಗಳು ನಂದಿನಿ ಲೇಬಲ್‌ನ ನಕಲಿ ತುಪ್ಪಗಳನ್ನು ತಯಾರಿಸಿ, ರೀ-ಪ್ಯಾಕಿಂಗ್ ಮಾಡಿ ಮಾರಾಟ ಮಾಡುತ್ತಿದ್ದರು. ದಾಳಿ ವೇಳೆ ಪೊಲೀಸರು ಮೆಷಿನರಿಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬೃಹತ್ ಕಲಬೆರಕೆ ತುಪ್ಪ ಜಾಲ ಭೇದಿಸಿದ ಸಿಸಿಬಿ; 1.26 ಕೋಟಿ…
ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಏಕೆಂದರೆ ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ ನಡುವೆ ನಡೆದ “ರಹಸ್ಯ ಒಪ್ಪಂದ”ವಾಗಿದೆ. ನಾನು ಆತ್ಮಸಾಕ್ಷಿಯನ್ನು ನಂಬುತ್ತೇನೆ ಎಂದಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ ತಂತ್ರ ಒಂದುಕಡೆಯಾದರೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬಣದ ಪ್ರತಿತಂತ್ರ ರೂಪಿಸುತ್ತಿದೆ. ಈ ಮಧ್ಯೆ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ ಎಂದಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಏಕೆಂದರೆ ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ ನಡುವೆ ನಡೆದ “ರಹಸ್ಯ ಒಪ್ಪಂದ”ವಾಗಿದೆ. ನಾನು ಆತ್ಮಸಾಕ್ಷಿಯನ್ನು ನಂಬುತ್ತೇನೆ ಎಂದಿದ್ದಾರೆ. ನಾನು ಪಕ್ಷಕ್ಕೆ ಯಾವುದೇ ಮುಜುಗರವನ್ನುಂಟುಮಾಡಲು ಮತ್ತು ಪಕ್ಷವನ್ನು ದುರ್ಬಲಗೊಳಿಸಲು ಬಯಸುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿಕೆ…
ಬೆಳ್ಳಂಬೆಳಗ್ಗೆ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳ್ಳಂಬೆಳ್ಳಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು (ಎಲೆಕ್ಟ್ರಾನಿಕ್ ಸಿಟಿ) – RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ ಮಂಡ್ಯ – ನಗರ ಪಾಲಿಕೆ CAO ಪುಟ್ಟಸ್ವಾಮಿ ಬೀದರ್ – ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್ ಮೈಸೂರು – ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ರಾಮಸ್ವಾಮಿ ಸಿ ಧಾರವಾಡ – ಕರ್ನಾಟಕ ವಿವಿಯ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ ಧಾರವಾಡ – ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್ ಶಿವಮೊಗ್ಗ…
ಬೆಂಗಳೂರು: BBM ವಿದ್ಯಾರ್ಥಿನಿಗೆ ಕರೆ ಮಾಡಿ ರೂಮಿಗೆ ಕರೆಸಿಕೊಂಡಿದ್ದ ಯುವಕನೋರ್ವ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ 21 ವರ್ಷದ ದೇವಿಶ್ರೀ ಎಂದು ಗುರುತಿಸಲಾಗಿದೆ. ಕೊಲೆ ನಂತರ ಆರೋಪಿ ಪ್ರೇಮ್ ವರ್ಧನ್ ತಲೆಮರೆಸಿಕೊಂಡಿದ್ದಾನೆ. ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ಬೆಳಗ್ಗೆ ಪ್ರೇಮ್ ವರ್ಧನ್ ಜೊತೆ ದೇವಿಶ್ರೀ ಸ್ನೇಹಿತೆಯ ರೂಂಗೆ ಹೋಗಿದ್ದಳು. ರೂಮಿನಲ್ಲಿ ಇಬ್ಬರ ಮಧ್ಯೆ ಏನು ನಡೆಯಿತೋ ಪ್ರೇಮ್, ದೇವಿಶ್ರೀಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಹತ್ಯೆ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಕೊಲೆ ಪ್ರಕರಣ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪ್ರೇಮ್ ವರ್ಧನ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಶಿವಮೊಗ್ಗ, : ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬAಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ. 1990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಅವಧಿಯಲ್ಲಿ 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು ಸಂಬAಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದಾಗಿದೆ ಎಂದು ಆರ್.ಟಿ.ಓ ಮುರಗೇಂದ್ರ.ಬಿ.ಶಿರೋಲ್ಕರ್ ಇವರು ತಿಳಿಸಿದ್ದಾರೆ.
ಶಿವಮೊಗ್ಗ, : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿ.15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಶಿಬಿರಾರ್ಥಿಗಳು ಡಿ.04 ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ…
ಶಿವಮೊಗ್ಗ,: ಹೆಣ್ಣನ್ನು ಯಾವುದೇ ಜಾತಿಗೆ ಸೇರಿಸಬೇಡಿ. ಯಾಕೆಂದರೆ ಹೆಣ್ಣು ಸಂಕುಲವೇ ಒಂದು ಜಾತಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಹೇಳಿದರು. ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಸಹಯೋಗದೊಂದಿಗೆ ಸೋಮವಾರ ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಸಭಾಂಗಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗಗಿನ ಸಂವಾದ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣಿಗೆ ಅಸಾಧ್ಯ ಎನ್ನವುದು ಯಾವುದು ಇಲ್ಲ. ಆಕೆ ವಿಭಿನ್ನ, ಧೈರ್ಯವಂತೆ. ಮಾತೃತ್ವದ ಶಕ್ತಿಯನ್ನು ಹೊಂದಿರುವ ಆಕೆ ಸಾವನ್ನೇ ಗೆದ್ದು ಮನುಜಕುಲವನ್ನು ಸೃಷ್ಟಿಸುತ್ತಾಳೆ. ಆದರೂ ಕೂಡ ಯಾವುದೇ ಧರ್ಮ, ಜಾತಿ ಮಹಿಳೆಗೆ ಸಮಾನತೆ ಕೊಟ್ಟಿಲ್ಲ. ಅನಾದಿಕಾಲದಿಂದಲೂ ತಳ ಸಮುದಾಯಕ್ಕಿಂತ ಕೀಳಾಗಿ ಆಕೆಯ ಮೇಲೆ ಶೋಷಣೆ ಹಾಗೂ ತಾರತಮ್ಯ ನಡೆಸುತ್ತಾ ಬರಲಾಗಿದೆ. ಆದ್ದರಿಂದ ಆಕೆ ಯಾವ ಜಾತಿಗೆ ಸೇರಿಲ್ಲ, ಅವಳದ್ದೇ ಒಂದು ಜಾತೆ ಎಂದು ಅಭಿಪ್ರಾಯಪಟ್ಟರು. ಹೆಣ್ಣು ಎಲ್ಲವನ್ನು ಧೈರ್ಯದಿಂದ ಎದುರಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಈ ಮಣ್ಣಿನ…
ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ ತಾಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಕಲಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಗ್ರಾಪಂ ಸದಸ್ಯನಿಂದ ನಿಂದ ಜಿಪಂ ಅಧ್ಯಕ್ಷ ಗಾದಿಗೆ ಏರುವ ಮೂಲಕ ಹೊಸನಗರ ತಾಲೂಕಿನಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ.ಅವರ ಪಕ್ಷ ನಿಷ್ಠೆ ಹಾಗೂ ಕ್ರೀಯಾಶೀಲತೆಯನ್ನು ಪಕ್ಷದ ಹೈಕಮಾಂಡ್ ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ನಮ್ಮೆಲ್ಲರ ಹೆಬ್ಬಯಕೆಯಾಗಿದೆ ಈ ನಿಟ್ಟಿನಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ನೀಡಲಿ ಎಂದು ಒತ್ತಾಯಿಸಿದರು. ನಂತರ…
ಶಿವಮೊಗ್ಗ, : ತನ್ನ ಆದಿವಾಸಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಚಿಕ್ಕವಯಸ್ಸಿನಲ್ಲೇ ಹೋರಾಟದ ಕಿಚ್ಚು ಹತ್ತಿಸಿದ ಬಿರ್ಸಾ ಮುಂಡಾರವರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕಂಟ್ರೀ ಕ್ಲಬ್ ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 150 ನೇ ಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ ಆಚರಣೆ 2025 ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅತಿ ಚಿಕ್ಕ ವಯಸ್ಸಿನಲ್ಲೇ ತಮ್ಮ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ ಹಾಗೂ ಬ್ರಿಟಿಷರ ವಿರುದ್ದ ಸಿಡಿದೆದ್ದ ಬಿರ್ಸಾ ಮುಂಡಾ ಸಮುದಾಯದ ಪಾಲಿಗೆ ದೇವರಾಗಿದ್ದರು. ನೀರು, ಭೂಮಿ, ಅರಣ್ಯ ಬುಡಕಟ್ಟು ಜನರ ಹಕ್ಕು ಎನ್ನುವ ರೀತಿಯಲ್ಲಿ ಹೋರಾಡಿದ್ದರು. ಆಧ್ಯಾತ್ಮಿಕತೆಗೆ ಶಕ್ತಿ ತುಂಬಿದ್ದ ಇವರನ್ನು ದೇವರಂತೆ ಕಾಣುತ್ತಿದ್ದರು. ಇಂತಹ ಆದಿವಾಸಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ…
ಶಿವಮೊಗ್ಗ : ನಗರದ ಎಸ್‌ಬಿಐ ನಿವೃತ ನೌಕರ ತೆನ್ನರಸು ಮತ್ತು ಕಲಾವತಿಯವರ ಮಗಳಾದ ಪ್ರೀತಿ ನ.16ಕ್ಕೆ ಭರತನಾಟ್ಯ ರಂಗಪ್ರವೇಶ ಕುವೆಂಪು ರಂಗಮಂದಿರದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ ಎಂದು ಎಸ್.ಕೇಶವಕುಮಾರ್ ಪಿಳ್ಳೈ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ನೃತ್ಯ ಗುರು ರಾಧಾಕೃಷ್ಣ ನೃತ್ಯ ನಿಕೇತನದ ವೀಣಾ ಎಂ.ಸಾಮಗ ವಸಹಿಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್, ಡಾ.ಜಿ.ಎಸ್.ಸಂತೋಷ್ ಭಾಗವಹಿಸಲಿದ್ದಾರೆಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು. ಕಾರ್ಯಕ್ರಮ ಅಂದು ಸಂಜೆ 4 ಗಂಟೆಗೆ ನೃತ್ಯ ಕಲಾತಾರೆಯ ಮೆರವಣಿಗೆ ಮಹಾವೀರ ವೃತ್ತದಿಂದ ಕುವೆಂಪು ರಂಗಮಂದಿರದವರೆಗೆ ನಡೆಯಲಿದೆ. ಸಂಜೆ.4.45ಕ್ಕೆ ವಿಘ್ನೇಶ್ವರಸ್ತುತಿ ಮತ್ತು ನಟರಾಜ ಪೂಜೆ, ಸಂಜೆ 5 ಗಂಟೆಗೆ ರಂಗಪ್ರವೇಶ ಪೂವಾರ್ಧ, ಸಂಜೆ.7.30ಕ್ಕೆ ಗುರುವಂದನಾ ಕಾರ್ಯಕ್ರಮ, ಸಂಜೆ 8 ಕ್ಕೆ ರಂಗಪ್ರವೇಶ ಉತ್ತರಾರ್ಧ ನಡೆಯಲಿ ಎಂದರು.