Subscribe to Updates
Get the latest creative news from FooBar about art, design and business.
Author: Raghu Shetty
ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಮಾರಾಟ ಜಾಲವನ್ನು ಭೇದಿಸಿದ್ದು, 21 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ನಗರಕ್ಕೆ ಅಪಾರ ಪ್ರಮಾಣದ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ. ಬಂಧಿತ ಆರೋಪಿಗಳಿಂದ ಸುಮಾರು ೨೧ ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ಎಂಡಿಎಂಎ ಸ್ಫಟಿಕವನ್ನು ವಶಪಡಿಸಿಕೊಂಡಿದ್ದಾರೆ. ತನಿಖೆಯ ಪ್ರಕಾರ, ಆರೋಪಿಗಳು ಟ್ರಾಲಿ ಬ್ಯಾಗ್‌ಗಳಲ್ಲಿ ಡ್ರಗ್ಸ್ ಬಚ್ಚಿಟ್ಟು ಬೆಂಗಳೂರಿಗೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ. ನಿರ್ದಿಷ್ಟ ಮತ್ತು ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನ ಹೊರವಲಯದಲ್ಲಿರುವ ಮಾದನಾಯಕನಹಳ್ಳಿ ಮತ್ತು ಬೈಲಕೋಣೆನಹಳ್ಳಿಯಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ನಗರದ ವಿವಿಧ ಭಾಗಗಳಲ್ಲಿರುವ ವಿದ್ಯಾರ್ಥಿಗಳಿಗೆ ಒಆಒಂ ಕ್ರಿಸ್ಟಲ್ ಡ್ರಗ್ಸ್ ಅನ್ನು ಪೂರೈಸಿದ್ದಾರೆ ಎಂದು ಆರೋಪಿಸಲಾಗಿದೆ. ಖರೀದಿದಾರರು, ಸ್ಥಳೀಯ ಸಂಪರ್ಕಗಳು ಮತ್ತು ಈ ಡ್ರಗ್ಸ್ ಜಾಲದೊಂದಿಗೆ ಸಂಬಂಧ…
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಅಲಿಯನ್ನು ಚಿಕಿತ್ಸೆಗಾಗಿ ಕೇರಳದ ಕೋಝಿಕೋಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ. ಬೆಂಗಳೂರು ಮೂಲದ ಸಾಯಿ ಸುರಭಿ ಹಾಗೂ ಕೇರಳದ ಕೋಝಿಕ್ಕೋಡ್ ನಿವಾಸಿ, ಕ್ಯಾಬ್ ಡ್ರೈವರ್ ಸಂಜೀತ್ ಅಲಿ ಕಳೆದ ಶನಿವಾರ ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇಗೆ ಬಂದು ತಂಗಿದ್ದರು. ಇಂದು ಚೆಕ್-ಔಟ್ ಸಮಯ ಮುಗಿದರೂ ರೂಮ್ ಬಾಗಿಲು ತೆರೆಯದಿದ್ದಾಗ ಸಿಬ್ಬಂದಿ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲ್ಲದೆ ಸ್ಥಳದಲ್ಲಿ ಕೆಲವು ಮಾತ್ರೆಗಳು ಪತ್ತೆಯಾಗಿದ್ದು, ವಿಷ ಸೇವಿಸಿರುವ ಸಾಧ್ಯತೆಗಳೂ ದಟ್ಟವಾಗಿವೆ. ರೂಮ್‌ನಲ್ಲಿ ಒಂದು ಡೈರಿ…
ಶಿವಮೊಗ್ಗ ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದೆ ಅಥವಾ ನಿಯಮಬಾಹಿರ (ಡಿಫೆಕ್ಟಿವ್) ನಂಬರ್ ಪ್ಲೇಟ್ ಅಳವಡಿಸಿಕೊಂಡು ಸಂಚರಿಸುತ್ತಿದ್ದ 74 ದ್ವಿಚಕ್ರ ವಾಹನಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇ-ಚಲನ್ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕೆಲವರು ನಂಬರ್ ಪ್ಲೇಟ್ ಇಲ್ಲದೆ ಅಥವಾ ಕಾನೂನುಬಾಹಿರ ನಂಬರ್ ಪ್ಲೇಟ್ ಅಳವಡಿಸಿಕೊಂಡು ವಾಹನ ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ತಪಾಸಣೆ ಕೈಗೊಳ್ಳಲಾಯಿತು. ತಪಾಸಣೆಯ ವೇಳೆ ನಂಬರ್ ಪ್ಲೇಟ್ ಇಲ್ಲದ ಹಾಗೂ ನಿಯಮಬಾಹಿರ ನಂಬರ್ ಪ್ಲೇಟ್ ಹೊಂದಿದ್ದ ಒಟ್ಟು 74 ದ್ವಿಚಕ್ರ ವಾಹನಗಳನ್ನು ಪರಿಶೀಲಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ ಅವರು ವಾಹನ ಸವಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಸದ್ಯ ವಾಹನ ಮಾಲೀಕರಿಗೆ ದಂಡ ವಿಧಿಸಿ, ನೋಟಿಸ್ ನೀಡಿ ವಾಹನಗಳನ್ನು ಹಿಂತಿರುಗಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಉಲ್ಲಂಘನೆ ಮರುಕಳಿಸಿದರೆ ನೇರವಾಗಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿ ಎಂಬ ಸ್ಥಾನ ಕೇವಲ ಅಧಿಕಾರದ ಸಂಕೇತವಲ್ಲ, ಅದು ಜನರ ನಂಬಿಕೆ ಮತ್ತು ಹೊಣೆಗಾರಿಕೆಯ ಪ್ರತೀಕವಾಗಿದೆ. ಜನರು ತಮ್ಮ ಆಶೋತ್ತರಗಳನ್ನು, ಸಮಸ್ಯೆಗಳನ್ನು ಮತ್ತು ಭವಿಷ್ಯದ ಕನಸುಗಳನ್ನು ಒಬ್ಬ ವ್ಯಕ್ತಿಯ ಕೈಯಲ್ಲಿ ಇಟ್ಟು ಮತದಾನದ ಮೂಲಕ ಪ್ರತಿನಿಧಿಯನ್ನು ಆಯ್ಕೆ ಮಾಡುತ್ತಾರೆ. ಆದ್ದರಿಂದ ಜನಪ್ರತಿನಿಧಿಯ ಸ್ಥಾನವನ್ನು ಅಧಿಕಾರದ ಆಸನವಾಗಿ ಅಲ್ಲ, ಸೇವೆಯ ವೇದಿಕೆಯಾಗಿ ಕಾಣಬೇಕು. ಅಧಿಕಾರ ಬಂದಾಗ ಕೆಲವರಲ್ಲಿ ಅಹಂಕಾರ, ದರ್ಪ ಮತ್ತು ಜನರಿಂದ ದೂರವಾಗುವ ಮನೋಭಾವ ಬೆಳೆಯುವ ಉದಾಹರಣೆಗಳು ಸಮಾಜದಲ್ಲಿ ಕಾಣಿಸುತ್ತವೆ. ಆದರೆ ಅಧಿಕಾರ ಶಾಶ್ವತವಲ್ಲ; ಜನರ ವಿಶ್ವಾಸ ಮತ್ತು ಗೌರವ ಮಾತ್ರ ಶಾಶ್ವತ. ಜನರ ನಡುವೆ ಇರುತ್ತಾ ಅವರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕತ್ವವೇ ಜನಪ್ರತಿನಿಧಿಯ ನಿಜವಾದ ಗುಣವಾಗಿದೆ. ಜನಪ್ರತಿನಿಧಿಗಳು ಜನರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ಜನರ ಪ್ರಶ್ನೆಗಳಿಗೆ ಉತ್ತರಿಸುವುದು, ಅಭಿವೃದ್ಧಿ ಕಾರ್ಯಗಳನ್ನು ಪಾರದರ್ಶಕವಾಗಿ ನಡೆಸುವುದು, ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸುವುದು ಅವರ ಕರ್ತವ್ಯ. ಅಧಿಕಾರದ ಮದದಿಂದ ಸಾರ್ವಜನಿಕರೊಂದಿಗೆ ಅಂತರ ಬೆಳೆಸಿಕೊಂಡರೆ ಜನರ ವಿಶ್ವಾಸ ಕಳೆದುಕೊಳ್ಳುವುದು ಅನಿವಾರ್ಯ. ಇತಿಹಾಸದಲ್ಲಿ ಜನರ…
ಶಿವಮೊಗ್ಗ : ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಟ, ಮಾರಾಟ ಮತ್ತು ಬಳಕೆ ತಡೆಯಲು ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ತಿಳಿಸಿದರು. ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಡಿ.ಎ.ಆರ್ ಸಭಾಂಗಣದಲ್ಲಿ ಕಳೆದ ಆರು ತಿಂಗಳಲ್ಲಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 25 ಲಕ್ಷ ರೂ. ಮೌಲ್ಯದ 59 ಕೆ.ಜಿ. ಗಾಂಜಾವನ್ನು ಸಾರ್ವಜನಿಕ ವೀಕ್ಷಣೆಗೆ ಇಟ್ಟು ಬಳಿಕ ಕಾನೂನುಬದ್ಧವಾಗಿ ನಾಶಪಡಿಸಲಾಯಿತು. ಮಾತನಾಡಿದ ಅವರು, ಜಿಲ್ಲೆಗೆ ಹೊರ ರಾಜ್ಯಗಳಿಂದ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಎಂಟು ಮಂದಿಯನ್ನು ಪತ್ತೆಹಚ್ಚಿ ಜೈಲಿಗೆ ಕಳುಹಿಸಲಾಗಿದ್ದು, ಇನ್ನಷ್ಟು ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದೆ ಎಂದರು. ಜಿಲ್ಲೆಯಲ್ಲಿ 18ರಿಂದ 30 ವರ್ಷದ ಯುವಕರಲ್ಲಿ ಮಾದಕ ವ್ಯಸನ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ತಿಳಿಸಿದ ಅವರು, ಶಾಲಾ-ಕಾಲೇಜುಗಳಲ್ಲಿ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. 484 ವಿದ್ಯಾರ್ಥಿಗಳ…
ಶಿವಮೊಗ್ಗ : ನಗರಾಭಿವೃದ್ಧಿ ಮತ್ತು ಯೋಜಿತ ನಗರ ನಿರ್ಮಾಣದ ದೂರದೃಷ್ಟಿಯನ್ನು ಸುಮಾರು ಐದು ಶತಮಾನಗಳ ಹಿಂದೆಯೇ ತೋರಿಸಿದ ನಾಡಪ್ರಭು ಕೆಂಪೇಗೌಡರು ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು. ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಕ್ಕಲಿಗ ಸಮಾಜದ ವಿವಿಧ ಉಪಜಾತಿಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಕಾರ್ಯವನ್ನು ಆದಿಚುಂಚನಗಿರಿ ಮಠ ಕೈಗೊಂಡಿದ್ದು, ಸಮುದಾಯದ ಸಂಘಟನಾ ಬಲವರ್ಧನೆಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದರು. ಸಮುದಾಯ ಭವನ ನಿರ್ಮಾಣಕ್ಕೆ ಸಮಾಜದ ಜನರು ಉದಾರವಾಗಿ ಸಹಕಾರ ನೀಡಬೇಕೆಂದು ಕರೆ ನೀಡಿದರು. ————————————————— ಕೆಂಪೇಗೌಡರು ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಆಡಳಿತ ನಡೆಸಿದ್ದರು ಎಂದರು. ಯುವಜನತೆ ಸಮಾಜ ನಿರ್ಮಾಣದ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಹಾಗೂ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಆದ್ಯತೆ…
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಲಕ್ ಶಾದಿ ಮಹಲ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಅವರು ತಮ್ಮ ಸಿಬ್ಬಂದಿಯೊಂದಿಗೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ. ಅಕ್ಕಲ್ ಖಾನ್ (23 ವರ್ಷ) ಎಂಬ ಆರೋಪಿಯನ್ನು ಪೊಲೀಸರು ವಶಪಡಿಸಿಕೊಳ್ಳುವುದರಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಅಂದಾಜು 65,000/-ರೂ. ಮೌಲ್ಯದ, ಒಟ್ಟು 01 ಕೆಜಿ 261 ಗ್ರಾಂ ತೂಕದ ಮಾದಕ ವಸ್ತುವಾದ ಗಾಂಜಾವನ್ನು ಪೊಲೀಸರು ಕಾನೂನುಬದ್ಧವಾಗಿ ಅಮಾನತುಪಡಿಸಿಕೊಂಡಿದ್ದಾರೆ.
ಶಿವಮೊಗ್ಗ : ಪತ್ರೋಡೆ ಎಲೆ ಕೀಳಲು ಮರ ಏರಿದ್ದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ರ್ಘಟನೆ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದ್ದು ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾರೆ. ಮೃತ ಯುವಕನಿಗೆ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಬಂಧು-ಬಳಗದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಪತ್ರೋಡೆ ಎಲೆ ಕೀಳುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಗೊಂಡು ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿದೆ. ಶಿವಮೊಗ್ಗ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಬಂದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಎಚ್ಚೆತ್ತುಕೊಂಡು ತಕ್ಷಣ ಸ್ಥಳಕ್ಕೆ ಧಾವಿಸಿದರು. ಶ್ವಾನದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿಯನ್ನು ನಿಯೋಜಿಸಿ ನ್ಯಾಯಾಲಯದ ಸಂಪೂರ್ಣ ಆವರಣ, ನ್ಯಾಯಾಂಗ ಕೊಠಡಿಗಳು, ಕಚೇರಿಗಳು, ಕಾರಿಡಾರ್‌ಗಳು ಹಾಗೂ ಸಾರ್ವಜನಿಕರ ಸಂಚಾರ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಯಿತು. ಘಟನೆ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಆಗಮಿಸುವ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತಿದೆ. ಅನುಮಾನಾಸ್ಪದ ವಸ್ತುಗಳ ಪತ್ತೆಗೆ ವಿಶೇಷ ನಿಗಾವಹಿಸಲಾಗಿದೆ. ಬಾಂಬ್ ಬೆದರಿಕೆ ಪ್ರಕರಣದ ಹಿನ್ನೆಲೆಯಲ್ಲಿ ವಕೀಲರ ಸಂಘವು ತನ್ನ ಸದಸ್ಯರಿಗೆ ತುರ್ತು ಮನವಿ ಮಾಡಿದ್ದು, ನ್ಯಾಯಾಲಯಕ್ಕೆ…
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನಕಲಿ (ಫೇಕ್) ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ. ಲಭ್ಯ ಮಾಹಿತಿಯ ಪ್ರಕಾರ, ನಿಖಿಲ್ ಬಿ. ಅವರ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಯಿಂದ ಮೆಸೆಂಜರ್ ಮೂಲಕ ಜನರಿಗೆ ಸಂದೇಶ ಕಳುಹಿಸಿ ಪರಿಚಯ ಬೆಳೆಸಲು ಪ್ರಯತ್ನಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸಿ ಸಾರ್ವಜನಿಕರ ವಿಶ್ವಾಸ ಗಳಿಸುವುದು ಹಾಗೂ ವೈಯಕ್ತಿಕ ಮಾಹಿತಿ ಸಂಗ್ರಹಿಸುವಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅಧಿಕಾರಿಯ ಹೆಸರು, ಹುದ್ದೆ ಅಥವಾ ಫೋಟೋ ಕಂಡ ತಕ್ಷಣ ಖಾತೆ ಅಧಿಕೃತ ಎಂದು ನಂಬದೇ ಅದರ ನೈಜತೆಯನ್ನು ಪರಿಶೀಲಿಸಿಕೊಳ್ಳಬೇಕು. ವಿಶೇಷವಾಗಿ ಹಣಕಾಸು ಸಹಾಯ, ವೈಯಕ್ತಿಕ ದಾಖಲೆಗಳು, ಬ್ಯಾಂಕ್ ಮಾಹಿತಿ ಅಥವಾ ಇತರೆ ಸೂಕ್ಷ್ಮ…