Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ : ಪತ್ರೋಡೆ ಎಲೆ ಕೀಳಲು ಮರ ಏರಿದ್ದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ರ್ಘಟನೆ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದ್ದು ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾರೆ. ಮೃತ ಯುವಕನಿಗೆ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಬಂಧು-ಬಳಗದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಪತ್ರೋಡೆ ಎಲೆ ಕೀಳುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಗೊಂಡು ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿದೆ. ಶಿವಮೊಗ್ಗ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಬಂದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಎಚ್ಚೆತ್ತುಕೊಂಡು ತಕ್ಷಣ ಸ್ಥಳಕ್ಕೆ ಧಾವಿಸಿದರು. ಶ್ವಾನದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿಯನ್ನು ನಿಯೋಜಿಸಿ ನ್ಯಾಯಾಲಯದ ಸಂಪೂರ್ಣ ಆವರಣ, ನ್ಯಾಯಾಂಗ ಕೊಠಡಿಗಳು, ಕಚೇರಿಗಳು, ಕಾರಿಡಾರ್‌ಗಳು ಹಾಗೂ ಸಾರ್ವಜನಿಕರ ಸಂಚಾರ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಯಿತು. ಘಟನೆ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಆಗಮಿಸುವ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತಿದೆ. ಅನುಮಾನಾಸ್ಪದ ವಸ್ತುಗಳ ಪತ್ತೆಗೆ ವಿಶೇಷ ನಿಗಾವಹಿಸಲಾಗಿದೆ. ಬಾಂಬ್ ಬೆದರಿಕೆ ಪ್ರಕರಣದ ಹಿನ್ನೆಲೆಯಲ್ಲಿ ವಕೀಲರ ಸಂಘವು ತನ್ನ ಸದಸ್ಯರಿಗೆ ತುರ್ತು ಮನವಿ ಮಾಡಿದ್ದು, ನ್ಯಾಯಾಲಯಕ್ಕೆ…
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನಕಲಿ (ಫೇಕ್) ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ. ಲಭ್ಯ ಮಾಹಿತಿಯ ಪ್ರಕಾರ, ನಿಖಿಲ್ ಬಿ. ಅವರ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಯಿಂದ ಮೆಸೆಂಜರ್ ಮೂಲಕ ಜನರಿಗೆ ಸಂದೇಶ ಕಳುಹಿಸಿ ಪರಿಚಯ ಬೆಳೆಸಲು ಪ್ರಯತ್ನಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸಿ ಸಾರ್ವಜನಿಕರ ವಿಶ್ವಾಸ ಗಳಿಸುವುದು ಹಾಗೂ ವೈಯಕ್ತಿಕ ಮಾಹಿತಿ ಸಂಗ್ರಹಿಸುವಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅಧಿಕಾರಿಯ ಹೆಸರು, ಹುದ್ದೆ ಅಥವಾ ಫೋಟೋ ಕಂಡ ತಕ್ಷಣ ಖಾತೆ ಅಧಿಕೃತ ಎಂದು ನಂಬದೇ ಅದರ ನೈಜತೆಯನ್ನು ಪರಿಶೀಲಿಸಿಕೊಳ್ಳಬೇಕು. ವಿಶೇಷವಾಗಿ ಹಣಕಾಸು ಸಹಾಯ, ವೈಯಕ್ತಿಕ ದಾಖಲೆಗಳು, ಬ್ಯಾಂಕ್ ಮಾಹಿತಿ ಅಥವಾ ಇತರೆ ಸೂಕ್ಷ್ಮ…
ಮೈಸೂರು: ಇದೇ ತಿಂಗಳು ೨೪ ರಂದು ಅಂದ್ರೆ ನಾಡಿದ್ದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಮತ್ತು ಹೆತ್ತವರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ ಯುವತಿಯನ್ನು ರಕ್ಷಿತಾ(೨೧) ಹಾಗೂ ಆಕೆಯ ತಂದೆ ಶಿವಣ್ಣ(೫೪), ತಾಯಿ ನಾಗರತ್ನ(೪೪) ಎಂದು ಗುರುತಿಸಲಾಗಿದೆ. ಈ ಮೂವರ ಸಾವಿಗೂ ಉಲ್ಲಾಸ್ ಗೌಡ ಕಾರಣನೆಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ತಮ್ಮ ಗ್ರಾಮದ ಉಲ್ಲಾಸ್ ಗೌಡ ಯುವತಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಮೂವರು ವಿಷ ಸೇವಿಸಿ ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್ ೨೪, ಅಂದರೆ ನಾಡಿದ್ದು ರಕ್ಷಿತಾ ವಿವಾಹ ನಡೆಯಬೇಕಿತ್ತು. ಆದರೆ ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ. ಮೂರು ತಿಂಗಳ ಹಿಂದೆ ಮೃತ ರಕ್ಷಿತಾಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಅವರ ನಿಶ್ಚಿತಾರ್ಥದ ಸಮಯದಲ್ಲಿಯೂ ಉಲ್ಲಾಸ್ ಗೌಡ ಓಡಾಡಿಕೊಂಡಿದ್ದ. ಇದೇ ತಿಂಗಳ ೨೩-೨೪ರಂದು ಮದುವೆ ನಿಗದಿಯಾಗಿತ್ತು. ಆದರೆ ಒಂದು ವಾರದ ಹಿಂದಷ್ಟೇ…
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬುದ್ಧಿ ಹೇಳಲು ಹೋದ ಪೋಷಕರನ್ನೇ ಮಕ್ಕಳು ಹತ್ಯೆ ಮಾಡುತ್ತಿರುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಿದೆ. ಇಂಥಹದ್ದೇ ಘಟನೆಯೊಂದು ಬೆಂಗಳೂರಿನ ಕೆಆರ್ ಪುರಂ ನ ಸೀಗೆಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಪ್ರೀತಿ ಮತ್ತು ಲಿವ್-ಇನ್ ರಿಲೇಷನ್‌ಶಿಪ್‌ಗೆ (ಐive Iಟಿ ಖeಟಚಿಣioಟಿshiಠಿ) ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ. ಸೋಮಸುಂದರ್ (೫೫), ಮುತ್ತುಲಕ್ಷ್ಮಿ (೪೮) ಸುಪ್ರಿಯಾ (೨೦) ಹತ್ಯೆಗೀಡಾದ ದುರ್ದೈವಿಗಳು. ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆರೋಪಿ ಶ್ವೇತಾ, ಕೆನತ್ ಎಂಬಾತನ ಜೊತೆ ಮದುವೆಯಾಗದೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದಳು. ಮಗಳ ಈ ನಡವಳಿಕೆಗೆ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಗಳಿಗೆ ಬುದ್ಧಿವಾದ ಹೇಳಿ ಮನೆಗೆ ವಾಪಸ್ ಕರೆದುಕೊಂಡು ಹೋಗಲು ಸೋಮಸುಂದರ್ ಅವರು ಪತ್ನಿ ಮತ್ತು ಕಿರಿಯ ಮಗಳೊಂದಿಗೆ ಸಿಗೇಹಳ್ಳಿಯ ಡಾಮ್ನಿಕದ ಲೇಔಟ್‌ನಲ್ಲಿರುವ ‘ಸಾಯಿ…
ತುಮರಿ: ಸಮೀಪದ ಕಾರಣಿ ಗ್ರಾಮದ ಮಂಜಪ್ಪ ಎಂಬುವವರ ಸಾಕು ನಾಯಿಯ ಮೇಲೆ ಭಾನುವಾರ ರಾತ್ರಿ ಚಿರತೆ ದಾಳಿ ಮಾಡಿದೆ. ಈ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯ ಆವರಣಕ್ಕೆ ನುಗ್ಗಿದ ಚಿರತೆಯು ನಾಯಿಯ ಕುತ್ತಿಗೆ ಭಾಗಕ್ಕೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ನಾಯಿ ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಚಿರತೆ ಸ್ಥಳದಿಂದ ಕಾಲ್ಕಿತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಇದೇ ಗ್ರಾಮದ ರೈತರೊಬ್ಬರ ನಾಯಿಯನ್ನು ಚಿರತೆ ಹೊತ್ತೊಯ್ದು ಕೊಂದು ಹಾಕಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ತಾರೀಕೆರೆ, ಜೂನ್ 20: ತಾರೀಕೆರೆ ಅರಣ್ಯ ವ್ಯಾಪ್ತಿಯ ಉಣಸೆಕಟ್ಟೆ ಗ್ರಾಮದಲ್ಲಿ ಗ್ರಾಮಸ್ಥರೊಬ್ಬರ ಮನೆಯ ಶೌಚಾಲಯದಲ್ಲಿ ಸುಮಾರು 5 ವರ್ಷದ ಹೆಣ್ಣು ಚಿರತೆ ಸಿಲುಕಿಕೊಂಡಿರುವುದು ಶನಿವಾರ ಬೆಳಗ್ಗೆ ಪತ್ತೆಯಾಯಿತು. ಈ ಕುರಿತು ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ (DCF) ಮನವಿ ಮೇರೆಗೆ ಶಿವಮೊಗ್ಗ ಮೃಗಾಲಯದ ಪಶುವೈದ್ಯಾಧಿಕಾರಿ ಡಾ. ಶ್ರವಣ್ ಸಿಂಗ್ ರಾಥೋರ್ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. ಸೂಕ್ತ ಪ್ರಮಾಣದ ನಿದ್ರಾಜನಕ ಔಷಧಿ ನೀಡಿ ಚಿರತೆಯನ್ನು ಸುರಕ್ಷಿತವಾಗಿ ನಿಯಂತ್ರಿಸಿ, ಬಳಿಕ ಸಾಗಣೆ ಪಂಜರಕ್ಕೆ ಸ್ಥಳಾಂತರಿಸಲಾಯಿತು. ನಂತರ ಚೇತರಿಕೆಗಾಗಿ ರಿವರ್ಸಲ್ ಔಷಧಿ ನೀಡಲಾಯಿತು. ಔಷಧಿ ಪರಿಣಾಮ ಕಡಿಮೆಯಾದ ಬಳಿಕ ಚಿರತೆ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಚುರುಕಾಗಿ ಹಾಗೂ ಆರೋಗ್ಯಕರ ಸ್ಥಿತಿಯಲ್ಲಿ ಕಂಡುಬಂತು. ತಾರೀಕೆರೆ ಅರಣ್ಯ ಇಲಾಖೆಯ ಸಿಬ್ಬಂದಿಯ ಸಹಕಾರದೊಂದಿಗೆ ಯಾವುದೇ ರೀತಿಯ ಗಾಯ ಅಥವಾ ಅನಾಹುತವಿಲ್ಲದೆ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿತು. ಇದು ಡಾ. ಶ್ರವಣ್ ಸಿಂಗ್ ರಾಥೋರ್ ಅವರ 40ನೇ ಚಿರತೆ ರಕ್ಷಣಾ ಕಾರ್ಯಾಚರಣೆ ಆಗಿದೆ. ಈ ಮೊದಲು ಅವರು ರಾಜಸ್ಥಾನದಲ್ಲಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದ…
ಶಿವಮೊಗ್ಗ: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಮನೆಯಲ್ಲೇ ಯುವಕನೊಬ್ಬನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಮೃತನನ್ನು ಗ್ರಾಮದ ನಿವಾಸಿ ಪ್ರವೀಣ್ (26) ಎಂದು ಗುರುತಿಸಲಾಗಿದೆ. ಪ್ರವೀಣ್ ಟ್ರಾಕ್ಟರ್ ಬಾಡಿಗೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಎಂದಿನಂತೆ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ತಲೆ ಭಾಗಕ್ಕೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಪ್ರವೀಣ್ ಕೆಲ ಯುವಕರಿಗೆ ಕೆಲಸದ ನಿಮಿತ್ತ ಬೆಳಗ್ಗೆ ಬರಲು ತಿಳಿಸಿದ್ದ ಎನ್ನಲಾಗಿದೆ. ಅದರಂತೆ ಇಂದು ಬೆಳಗ್ಗೆ ಅವರು ಕರೆ ಮಾಡಿದರೂ ಫೋನ್ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ ಮಾಹಿತಿಯಂತೆ ವ್ಯವಹಾರಿಕ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶಿವಮೊಗ್ಗ: ವಾಹನ ಸವಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ವಿಧಿಸಲಾದ ಇ-ಚಲನ್ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ಜಿ.ಎ. ತಿಳಿಸಿದರು. ಗುರುವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಿ.ಸಿ. ಕೊಠಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ್ ಅದಾಲತ್, ಸಮಾಧಾನ್ ಸಮಾರೋಹ್ ವಿಶೇಷ ಲೋಕ್ ಅದಾಲತ್, ಎನ್‌ಐ ಕಾಯ್ದೆಯ ವಿಶೇಷ ಲೋಕ್ ಅದಾಲತ್, ಖಾಯಂ ಲೋಕ್ ಅದಾಲತ್, ಮಾದಕ ದ್ರವ್ಯ ವ್ಯಸನ ಮುಕ್ತಿ ಜಾಗೃತಿ ಹಾಗೂ ಹಸಿರು ಅಭಿಯಾನ ಕುರಿತಂತೆ ಮಾಹಿತಿ ನೀಡಿದರು. ಮೇ 2026ರೊಳಗೆ ಸಂಚಾರ ನಿಯಮ ಉಲ್ಲಂಘನೆಗಾಗಿ ದಾಖಲಾಗಿರುವ ಇ-ಚಲನ್ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.೫೦ ವಿನಾಯಿತಿ ನೀಡಲಾಗಿದ್ದು, ಈ ವಿಶೇಷ ಅವಕಾಶ ಜೂ.21ರಿಂದ ಜು.10ರವರೆಗೆ ಒಟ್ಟು 20 ದಿನಗಳ ಕಾಲ ಮಾತ್ರ ಲಭ್ಯವಿರುತ್ತದೆ ಎಂದು ಹೇಳಿದರು. ಶಿವಮೊಗ್ಗ ನಗರದಲ್ಲಿ ಆ.೨೮.೨೦೨೩ರಿಂದ ಏ.೩೦,೨೦೨೬ರವರೆಗೆ ಸ್ಮಾರ್ಟ್ ಸಿಟಿ…
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮಹಿಷಿ ಉತ್ತರಾದಿ ಮಠದಲ್ಲಿ ನಿನ್ನೆ ಕಳ್ಳತನವಾಗಿತ್ತು. ಮಹಿಷಿ ಉತ್ತರಾದಿ ಮಠದಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದ ಬೃಹತ್ ಕಳವು ಪ್ರಕರಣವನ್ನು ಪೊಲೀಸರು ಕೇವಲ 1 ದಿನದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳುವಾಗಿದ್ದ 1 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಾಳೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲ್ಲೂಕು ಬಾಳಗಾರು ಸಮೀಪ ಇರುವ ತುಂಗಾ ನದಿಯ ದಡದಲ್ಲಿರುವ ಮಹಿಷಿ ಮಠದಲ್ಲಿ ಮಧ್ವ ಪರಂಪರೆಯ ಪ್ರಖ್ಯಾತ ಯತಿಗಳಲ್ಲಿ ಒಬ್ಬರಾದ ಉತ್ತರಾದಿ ಮಠದ 26 ನೇ ಪೀಠಾಧಿಪತಿ ಶ್ರೀ ಸತ್ಯಸಂಧ ತೀರ್ಥರ ಮೂಲ ಬೃಂದಾವನ ಇದೆ. ಹಾಗಾಗಿ ಇಲ್ಲಿ ಪ್ರತಿದಿನ ಭಕ್ತರು ಬರುತ್ತಾರೆ. ಈ ಮಧ್ಯೆ ನಿನ್ನೆ ಬುಧವಾರ ನಡೆದಿದ್ದ ಗುರುವಂದನೆ ಕಾರ್ಯಕ್ರಮದ ವೇಳೆ ಗರ್ಭಗುಡಿಯಲ್ಲಿದ್ದ ಚಿನ್ನದ ವಸ್ತುಗಳು ಕಾಣೆಯಾಗಿದ್ದವು. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿ ಆ ತಕ್ಷಣವೇ ಎಫ್ಐಆರ್ ಸಹ ದಾಖಲಾಗಿತ್ತು. ಒಟ್ಟು 1…