Author: Raghu Shetty

ಬೆಂಗಳೂರು: BBM ವಿದ್ಯಾರ್ಥಿನಿಗೆ ಕರೆ ಮಾಡಿ ರೂಮಿಗೆ ಕರೆಸಿಕೊಂಡಿದ್ದ ಯುವಕನೋರ್ವ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ 21 ವರ್ಷದ ದೇವಿಶ್ರೀ ಎಂದು ಗುರುತಿಸಲಾಗಿದೆ. ಕೊಲೆ ನಂತರ ಆರೋಪಿ ಪ್ರೇಮ್ ವರ್ಧನ್ ತಲೆಮರೆಸಿಕೊಂಡಿದ್ದಾನೆ. ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ಬೆಳಗ್ಗೆ ಪ್ರೇಮ್ ವರ್ಧನ್ ಜೊತೆ ದೇವಿಶ್ರೀ ಸ್ನೇಹಿತೆಯ ರೂಂಗೆ ಹೋಗಿದ್ದಳು. ರೂಮಿನಲ್ಲಿ ಇಬ್ಬರ ಮಧ್ಯೆ ಏನು ನಡೆಯಿತೋ ಪ್ರೇಮ್, ದೇವಿಶ್ರೀಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಹತ್ಯೆ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಕೊಲೆ ಪ್ರಕರಣ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪ್ರೇಮ್ ವರ್ಧನ್‌ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Read More

ಶಿವಮೊಗ್ಗ, : ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬAಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ. 1990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಅವಧಿಯಲ್ಲಿ 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು ಸಂಬAಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದಾಗಿದೆ ಎಂದು ಆರ್.ಟಿ.ಓ ಮುರಗೇಂದ್ರ.ಬಿ.ಶಿರೋಲ್ಕರ್ ಇವರು ತಿಳಿಸಿದ್ದಾರೆ.

Read More

ಶಿವಮೊಗ್ಗ, : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿ.15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಶಿಬಿರಾರ್ಥಿಗಳು ಡಿ.04 ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ…

Read More

ಶಿವಮೊಗ್ಗ,: ಹೆಣ್ಣನ್ನು ಯಾವುದೇ ಜಾತಿಗೆ ಸೇರಿಸಬೇಡಿ. ಯಾಕೆಂದರೆ ಹೆಣ್ಣು ಸಂಕುಲವೇ ಒಂದು ಜಾತಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಹೇಳಿದರು. ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಸಹಯೋಗದೊಂದಿಗೆ ಸೋಮವಾರ ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಸಭಾಂಗಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗಗಿನ ಸಂವಾದ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣಿಗೆ ಅಸಾಧ್ಯ ಎನ್ನವುದು ಯಾವುದು ಇಲ್ಲ. ಆಕೆ ವಿಭಿನ್ನ, ಧೈರ್ಯವಂತೆ. ಮಾತೃತ್ವದ ಶಕ್ತಿಯನ್ನು ಹೊಂದಿರುವ ಆಕೆ ಸಾವನ್ನೇ ಗೆದ್ದು ಮನುಜಕುಲವನ್ನು ಸೃಷ್ಟಿಸುತ್ತಾಳೆ. ಆದರೂ ಕೂಡ ಯಾವುದೇ ಧರ್ಮ, ಜಾತಿ ಮಹಿಳೆಗೆ ಸಮಾನತೆ ಕೊಟ್ಟಿಲ್ಲ. ಅನಾದಿಕಾಲದಿಂದಲೂ ತಳ ಸಮುದಾಯಕ್ಕಿಂತ ಕೀಳಾಗಿ ಆಕೆಯ ಮೇಲೆ ಶೋಷಣೆ ಹಾಗೂ ತಾರತಮ್ಯ ನಡೆಸುತ್ತಾ ಬರಲಾಗಿದೆ. ಆದ್ದರಿಂದ ಆಕೆ ಯಾವ ಜಾತಿಗೆ ಸೇರಿಲ್ಲ, ಅವಳದ್ದೇ ಒಂದು ಜಾತೆ ಎಂದು ಅಭಿಪ್ರಾಯಪಟ್ಟರು. ಹೆಣ್ಣು ಎಲ್ಲವನ್ನು ಧೈರ್ಯದಿಂದ ಎದುರಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಈ ಮಣ್ಣಿನ…

Read More

ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ ತಾಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಕಲಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಗ್ರಾಪಂ ಸದಸ್ಯನಿಂದ ನಿಂದ ಜಿಪಂ ಅಧ್ಯಕ್ಷ ಗಾದಿಗೆ ಏರುವ ಮೂಲಕ ಹೊಸನಗರ ತಾಲೂಕಿನಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ.ಅವರ ಪಕ್ಷ ನಿಷ್ಠೆ ಹಾಗೂ ಕ್ರೀಯಾಶೀಲತೆಯನ್ನು ಪಕ್ಷದ ಹೈಕಮಾಂಡ್ ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ನಮ್ಮೆಲ್ಲರ ಹೆಬ್ಬಯಕೆಯಾಗಿದೆ ಈ ನಿಟ್ಟಿನಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ನೀಡಲಿ ಎಂದು ಒತ್ತಾಯಿಸಿದರು. ನಂತರ…

Read More

ಶಿವಮೊಗ್ಗ, : ತನ್ನ ಆದಿವಾಸಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಚಿಕ್ಕವಯಸ್ಸಿನಲ್ಲೇ ಹೋರಾಟದ ಕಿಚ್ಚು ಹತ್ತಿಸಿದ ಬಿರ್ಸಾ ಮುಂಡಾರವರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕಂಟ್ರೀ ಕ್ಲಬ್ ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 150 ನೇ ಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ ಆಚರಣೆ 2025 ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅತಿ ಚಿಕ್ಕ ವಯಸ್ಸಿನಲ್ಲೇ ತಮ್ಮ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ ಹಾಗೂ ಬ್ರಿಟಿಷರ ವಿರುದ್ದ ಸಿಡಿದೆದ್ದ ಬಿರ್ಸಾ ಮುಂಡಾ ಸಮುದಾಯದ ಪಾಲಿಗೆ ದೇವರಾಗಿದ್ದರು. ನೀರು, ಭೂಮಿ, ಅರಣ್ಯ ಬುಡಕಟ್ಟು ಜನರ ಹಕ್ಕು ಎನ್ನುವ ರೀತಿಯಲ್ಲಿ ಹೋರಾಡಿದ್ದರು. ಆಧ್ಯಾತ್ಮಿಕತೆಗೆ ಶಕ್ತಿ ತುಂಬಿದ್ದ ಇವರನ್ನು ದೇವರಂತೆ ಕಾಣುತ್ತಿದ್ದರು. ಇಂತಹ ಆದಿವಾಸಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ…

Read More

ಶಿವಮೊಗ್ಗ : ನಗರದ ಎಸ್‌ಬಿಐ ನಿವೃತ ನೌಕರ ತೆನ್ನರಸು ಮತ್ತು ಕಲಾವತಿಯವರ ಮಗಳಾದ ಪ್ರೀತಿ ನ.16ಕ್ಕೆ ಭರತನಾಟ್ಯ ರಂಗಪ್ರವೇಶ ಕುವೆಂಪು ರಂಗಮಂದಿರದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ ಎಂದು ಎಸ್.ಕೇಶವಕುಮಾರ್ ಪಿಳ್ಳೈ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ನೃತ್ಯ ಗುರು ರಾಧಾಕೃಷ್ಣ ನೃತ್ಯ ನಿಕೇತನದ ವೀಣಾ ಎಂ.ಸಾಮಗ ವಸಹಿಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್, ಡಾ.ಜಿ.ಎಸ್.ಸಂತೋಷ್ ಭಾಗವಹಿಸಲಿದ್ದಾರೆಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು. ಕಾರ್ಯಕ್ರಮ ಅಂದು ಸಂಜೆ 4 ಗಂಟೆಗೆ ನೃತ್ಯ ಕಲಾತಾರೆಯ ಮೆರವಣಿಗೆ ಮಹಾವೀರ ವೃತ್ತದಿಂದ ಕುವೆಂಪು ರಂಗಮಂದಿರದವರೆಗೆ ನಡೆಯಲಿದೆ. ಸಂಜೆ.4.45ಕ್ಕೆ ವಿಘ್ನೇಶ್ವರಸ್ತುತಿ ಮತ್ತು ನಟರಾಜ ಪೂಜೆ, ಸಂಜೆ 5 ಗಂಟೆಗೆ ರಂಗಪ್ರವೇಶ ಪೂವಾರ್ಧ, ಸಂಜೆ.7.30ಕ್ಕೆ ಗುರುವಂದನಾ ಕಾರ್ಯಕ್ರಮ, ಸಂಜೆ 8 ಕ್ಕೆ ರಂಗಪ್ರವೇಶ ಉತ್ತರಾರ್ಧ ನಡೆಯಲಿ ಎಂದರು.

Read More

ಶಿವಮೊಗ್ಗ : ನಾನೇ ನಿರ್ದೇಶಿಸಿ ನಟಿಸಿರುವ ಚಿತ್ರ ಜೈ .ನ.14 ರಂದು ರಾಜ್ಯ ಮತ್ತು ಆರು ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ಬಿಗ್‌ಬಾಸ್ ಸೀಸನ್ ೯ರ ವಿಜೇತ ರೂಪೇಶ್ ಶೆಟ್ಟಿ ತಿಳಿಸಿದರು. ಜೈ ಚಿತ್ರ ಟ್ರೈಲರ್ ಬಿಡುಗಡೆಯಾಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗೇ ಚಿತ್ರದಲ್ಲಿ ರಾಜಕೀಯ ನಾಟಕ, ಸಾಮಾಜಿಕ ಕಾಮಿಡಿಗಳನ್ನು ಒಳಗೊಂಡು ಉತ್ತಮವಾಗಿ ಮೂಡಿ ಬಂದಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಚಿತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಅರವಿಂದ ಬೋಳಾರ್, ನವೀನ್ ಡಿ.ಪಡೀಲ್, ಡಾ.ದೇವದಾಸ್ ಕಾಪಿಕಾಡ್, ನಟಿಸಿದ್ದಾರೆ. ಛಾಯಾಗ್ರಾಹಣ ವಿನುತ್ ಕೆ.ಸುವರ್ಣ, ಸಂಕಲವನ್ನು ರಾಹುಲ್ ವಸಿಷ್ಠ, ಸಂಗೀತ ನಿರ್ದೇಶನ ಸಲ್ದಾನಾ ನಿರ್ವಹಿಸಿದ್ದಾರೆಂದರು. ಸಿನಿಮಾ ಎರಡು ಹಾಡುಗಳಿದ್ದು, ಒಂದನ್ನು ಈಗಾಗಲೇ ಬಿಡುಗಡೆ ಮಾಡಿ, ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ, ಹಾಗೇ ಚಿತ್ರದಲ್ಲಿ ಅದ್ಧೂರಿಯಾಗಿ ಚಿತ್ರಕರಿಸಲಾಗಿದ್ದು ಚಿತ್ರಪ್ರೇಮಿಗಳು ಸಿನಿಮಾ ಥೀಯಟರಿಗೆ ಬಂದು ನೋಡಿ ಸಹಕರಿಸುವಂತೆ ಮನವಿ ಮಾಡಿದರು.

Read More

ಶಿವಮೊಗ್ಗ, ನವಂಬರ್. 11 (ಕರ್ನಾಟಕ ವಾರ್ತೆ): ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮರಾಠ ಪ್ರವರ್ಗ -3ಬಿ ಅಡಿಯಲ್ಲಿ 2ಎ ಯಿಂದ 2ಎಫ್ ವರೆಗೆ ಬರುವ ಸಮುದಾಯಕ್ಕೆ ಸೇರಿದ 18 ರಿಂದ 55 ವರ್ಷ ವಯೋಮಿತಿ ಹೊಂದಿದವರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ 3ಬಿಯಲ್ಲಿ ಪಡೆದಿರಬೇಕು . ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷ ರೂ.ಗಳನ್ನು ಮೀರಬಾರದು ಅಂಗವಿಕಲ ಮಹಿಳೆಯರಿಗೆ ಶೇ.5% ರಷ್ಟು, ಮಹಿಳೆಯರಿಗೆ ಶೇ.33% ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ರಷ್ಟು, ಅವಿವಾಹಿತ ಮಹಿಳೆಯರಿಗೆ ಶೇ.2ರಷ್ಟನ್ನು  ಮೀಸಲಿರಿಸಿದೆ. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ, ಹೆಚ್.ಐ.ವಿ. ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರಬಾರದು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ…

Read More

ಶಿವಮೊಗ್ಗ,: ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವರು ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎನ್.ಚೆಲುವರಾಯಸ್ವಾಮಿ ಕರೆ ನೀಡಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ “ಸಹ ಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಇಂದಿನಿಂದ ನ.೦೯ ರವರೆಗೆ ಕೃಷಿ ಮಹಾವಿದ್ಯಾಲಯ ನವುಲೆ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ-ತೋಟಗಾರಿಕೆ ಮೇಳ-೨೦೨೫ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಅಭಾವ ಉಂಟಾಗಿಲ್ಲ. ಸಾಕಷ್ಟು ಪೂರೈಕೆ ಮಾಡಲಾಗಿದೆ. ಕೇಂದ್ರದಿಂದ ೩.೫ ಲಕ್ಷ ಮೆ.ಟನ್ ಗೊಬ್ಬರ ಸರಬರಾಜು ಕೊರತೆ ಯಾದರೂ ರೈತರಿಗೆ…

Read More