Author: Raghu Shetty

ಶಿವಮೊಗ್ಗ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿ 10 ಗೋವುಗಳನ್ನು ರಕ್ಷಿಸಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದ ವೇಳೆ 10 ಗೋವುಗಳು ಪತ್ತೆಯಾಗಿವೆ. ಬಳಿಕ ಕಾರ್ಯಕರ್ತರು ಗೋವುಗಳನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ಶಿವಮೊಗ್ಗದ ಮಹಾವೀರ್ ಗೋಶಾಲೆಗೆ ಕಳುಹಿಸಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Read More

ಶಿವಮೊಗ್ಗ, : ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಗಲು ಮನೆ ಕಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು ₹6 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಹಾಗೂ ₹25 ಸಾವಿರ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎ.ಜಿ. ಕಾರಿಯಪ್ಪ ಹಾಗೂ ಶಿವಮೊಗ್ಗ-ಎ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶೀಲವಂತ ಹೊಸಮನಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ತುಂಗಾನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್, ಪಿಎಸ್‌ಐ ರಘುವೀರ ಎಂ ಹಾಗೂ ಪಿಎಸ್‌ಐ ಮಂಜಮ್ಮ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತಂಡದಲ್ಲಿ ಹೆಚ್‌.ಸಿ ಕಿರಣ್ ಮೋರೆ, ಅರುಣ್ ಕುಮಾರ್ ಹಾಗೂ ಸಿಪಿಸಿಗಳಾದ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್ ಎಂ.ಜಿ., ರಂಗನಾಥ್ ಮತ್ತು ತಮ್ಮಣ್ಣ ಜಂಬಗಿ ಭಾಗವಹಿಸಿದ್ದರು. ತನಿಖೆ ವೇಳೆ ಮಲ್ಲಿಗೇನಹಳ್ಳಿ, ಶ್ರೀರಾಮಪುರ ಹಾಗೂ ವಾಜಪೇಯಿ ಬಡಾವಣೆ ಪ್ರದೇಶಗಳಲ್ಲಿ ಹಗಲು ವೇಳೆ ಮನೆ…

Read More

ಶಿವಮೊಗ್ಗ, : ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಕಲ್ ಗ್ರಾಮದ ಸರ್ಕಲ್ ಸಮೀಪ ದನ ಕಳ್ಳತನಕ್ಕೆ ಯತ್ನಿಸಿದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 10ರಂದು ರಾತ್ರಿ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಕಳ್ಳತನ ಮಾಡಲು ಯತ್ನಿಸಿರುವ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 175/2026 ಅಡಿಯಲ್ಲಿ ಬಿಎನ್ಎಸ್-2023ರ ಕಲಂ 303(2), 62ರಂತೆ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ, ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ ಅರವಿಂದ ಕಲಗುಂಜಿ ಅವರ ಸೂಚನೆಯಂತೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆ ನಿರೀಕ್ಷಕ ಇಮ್ರಾನ್ ಬೇಗ್ ನೇತೃತ್ವದಲ್ಲಿ ಪಿಎಸ್‌ಐ ಆರ್. ಸುಷ್ಮಾ, ಪ್ರೋಬೇಷನರಿ ಪಿಎಸ್‌ಐ ಯುವರಾಜ್ ರಾಠೋಡ್ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳು ಮತ್ತು ಕೃತ್ಯಕ್ಕೆ ಬಳಸಿದ ವಾಹನದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿತು. ತನಿಖೆ ವೇಳೆ ಟಿಪ್ಪುನಗರದ ರೋಷನ್ ಬೇಗ್…

Read More

ಶಿವಮೊಗ್ಗ : ನಗರದಲ್ಲಿ ನೀರು, ರಸ್ತೆ, ಚರಂಡಿ, ಮಳೆ ನೀರು, ಕಸ ಇತ್ಯಾದಿ ನಾಗರೀಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಜೂನ್ ೧೭ರಂದು ಬೆಳಿಗ್ಗೆ ೧೧ಗಂಟೆಗೆ ಪತ್ರಿಕಾ ಭವನದಲ್ಲಿ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಅವರೊಂದಿಗೆ ಮುಖಾಮುಖಿ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ನಾಗರಿಕರು, ಸಂಘ-ಸಂಸ್ಥೆಗಳು ಈ ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಗರದ ಅಭಿವೃದ್ಧಿಗೆ, ಸಮಸ್ಯೆಗಳ ಪರಿಹಾರಕ್ಕೆ ಪಾಲಿಕೆ ಯೊಂದಿಗೆ ಕೈಜೋಡಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಮನವಿ ಮಾಡಿದೆ. ಅಲ್ಲದೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಯಸುವ ಸಂಘ-ಸಂಸ್ಥೆಗಳು ಮತ್ತು ನಾಗರೀಕರು ಮುಂಚಿತವಾಗಿ ನಾಗರೀಕ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಪ್ರಶ್ನೆಗಳು-ಸಲಹೆಗಳನ್ನು ೯೪೪೮೧೩೮೧೮೩, ೮೦೭೩೫೦೨೮೯೨, ೯೫೩೮೧೭೨೮೪೫ಗೆ ತಿಳಿಸಬೇಕು.

Read More

ಶಿವಮೊಗ್ಗ : ಪರಿಸರ ಸಂರಕ್ಷಣೆ, ಸಾಮಾಜಿಕ ಅರಣ್ಯ, ಹವಾಮಾನ ಬದಲಾವಣೆ ಜಾಗೃತಿ ಹಾಗೂ ಯುವಜನರ ಸಬಲೀಕರಣದ ದಿಸೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗ್ರೋ ಗ್ರೀನ್ ಅಸೋಸಿಯೇಷನ್ ತನ್ನ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ಗ್ರೀನ್ ಇಂಪ್ಯಾಕ್ಟ್ ಸಮ್ಮಿಟ್–2026 ಹಾಗೂ ಗ್ರೀನ್ ಶಾರ್ಕ್ ಟ್ಯಾಂಕ್ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ಹಾಗೂ ಸಾಮಾಜಿಕ ಪರಿಣಾಮ ಮೂಡಿಸುವ ನವೋದ್ಯಮ ಪರಿಕಲ್ಪನೆಗಳಿಗೆ ವಿಶೇಷ ವೇದಿಕೆ ಕಲ್ಪಿಸಲಾಯಿತು. ಗ್ರೀನ್ ಶಾರ್ಕ್ ಟ್ಯಾಂಕ್‌ನಲ್ಲಿ ವಿವಿಧ ಕ್ಷೇತ್ರಗಳ ಉದ್ಯಮಿಗಳು, ತಂತ್ರಜ್ಞರು ಮತ್ತು ಹೂಡಿಕೆದಾರರು ಭಾಗವಹಿಸಿ ಯುವಕರ ಆಲೋಚನೆಗಳನ್ನು ಮೌಲ್ಯಮಾಪನ ಮಾಡಿದರು. ಒಟ್ಟು 19 ತಂಡಗಳು ತಮ್ಮ ನವೀನ ಉದ್ಯಮ ಪರಿಕಲ್ಪನೆಗಳನ್ನು ಮಂಡಿಸಿದ್ದು, ಅವುಗಳಲ್ಲಿ ಮೂರು ತಂಡಗಳನ್ನು ಇನ್‌ಕ್ಯುಬೇಷನ್ ಹಾಗೂ ಮುಂದಿನ ಮಾರ್ಗದರ್ಶನಕ್ಕಾಗಿ ಆಯ್ಕೆ ಮಾಡಲಾಯಿತು. ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ. ಜಗದೀಶ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಶಾಂಕ್ ಹೆಚ್.ಎಸ್. ಹಾಗೂ…

Read More

ಶಿವಮೊಗ್ಗ: ನಗರದ ಗಾಂಧಿಬಜಾರ್‌ನಲ್ಲಿ ಶುಕ್ರವಾರ ಸಂಜೆ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿರುವ ಕೆಲವು ಸ್ಟೇಟಸ್‌ಗಳು ಹೊಸ ಚರ್ಚೆಗೆ ಕಾರಣವಾಗಿವೆ. ನರಸಿಂಹನ ಆಪ್ತರು ಹಾಗೂ ಸಹಚರರೆಂದು ಹೇಳಲಾಗುತ್ತಿರುವ ಕೆಲವರು ಹಂಚಿಕೊಂಡಿರುವ ಪೋಸ್ಟ್‌ಗಳು ಪೊಲೀಸರ ಗಮನ ಸೆಳೆದಿವೆ. ಮಾಹಿತಿಯ ಪ್ರಕಾರ, ನರಸಿಂಹನ ಆತ್ಮೀಯ ಸ್ನೇಹಿತ ಹಾಗೂ ರೌಡಿಶೀಟರ್ ಆಗಿರುವ ಕಾಡಾ ಕಾರ್ತಿಕ್ ಮತ್ತು ಮತ್ತೊಂದು ಕೊಲೆ ಪ್ರಕರಣದಲ್ಲಿ ಎ–2 ಆರೋಪಿಯಾಗಿರುವ ಬಜರಂಗಿ ನಿತಿನ್ ತಮ್ಮ ಇನ್‌ಸ್ಟಾಗ್ರಾಂ ಖಾತೆಗಳಲ್ಲಿ ಪ್ರತೀಕಾರದ ಸುಳಿವು ನೀಡುವ ರೀತಿಯ ಸ್ಟೇಟಸ್‌ಗಳನ್ನು ಪ್ರಕಟಿಸಿದ್ದಾರೆ ಎನ್ನಲಾಗಿದೆ. ಸ್ಟೇಟಸ್‌ಗಳಲ್ಲಿ ನರಸಿಂಹ ಹತ್ಯೆಗೆ ಪ್ರತಿಕ್ರಿಯೆ ಹಾಗೂ ಪ್ರತೀಕಾರ ತೀರಿಸಿಕೊಳ್ಳುವ ಉಲ್ಲೇಖಗಳಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲೂ ಆತಂಕಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು ಮತ್ತು ಸಂದೇಶಗಳ ಮೇಲೂ ನಿಗಾ ವಹಿಸಿದ್ದು, ಯಾವುದೇ ಪ್ರಚೋದನಾತ್ಮಕ ಅಥವಾ…

Read More

ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಶಿವಮೊಗ್ಗ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಆರೋಪಿಗಳನ್ನು ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಅಡಿಷನಲ್ ಎಸ್‌ಪಿ) ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಂಡವು ವೇಗವಾಗಿ ಕಾರ್ಯಾಚರಣೆ ನಡೆಸಿ ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ನಿನ್ನೆ ಶುಕ್ರವಾರ ಸಂಜೆ ಸುಮಾರು 4.45ರ ವೇಳೆಗೆ ಇಸ್ಪೀಟ್ ಅಡ್ಡೆಗೆ ಬಂದಿದ್ದ ದುಷ್ಕರ್ಮಿಗಳ ತಂಡ ನರಸಿಂಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬು ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಐವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Read More

ಶಿವಮೊಗ್ಗ, : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ರಾಹುಲ್ ಕಾರ‍್ಸ್ ಪ್ರೈ.ಲಿ., (ಹೊಂಡಾಯಿ) ಕಂಪನಿಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಪಿಯುಸಿ, ಐಟಿಐ, ಬಿಇ ಮತ್ತು ಯಾವುದೇ ಪದವಿ ಪೂರೈಸಿದ, ೧೮ ರಿಂದ ೩೦ ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ ೨ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

Read More

ಶಿವಮೊಗ್ಗ,: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿಯಷ್ಟು ಭೂಕುಸಿತ ಉಂಟಾಗಿತ್ತು. ರಸ್ತೆಯ ಮೇಲ್ಭಾಗದಲ್ಲೂ ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಮಾಸ್ತಿ ಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. ನಂತರದ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು-ಬದಲು (ಷಟಲ್ ಸರ್ವೀಸ್) ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಪ್ರಸ್ತುತ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್…

Read More

ಶಿವಮೊಗ್ಗ : ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಗೋವಿಂದಾಪುರ ಆಶ್ರಯ ಬಡಾವಣೆಯ ನಿವಾಸಿಯಾಗಿದ್ದ ನರಸಿಂಹನ ಮೇಲೆ ದುಷ್ಕರ್ಮಿಗಳು ಪೂರ್ವಯೋಜಿತವಾಗಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮನೆಯೊಂದರ ಓಣಿ ಒಳಗೆ ತೆರಳಿದ್ದ ವೇಳೆ ಏಕಾಏಕಿ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ಮನಸೋಯಿಚ್ಛೆ ದಾಳಿ ನಡೆಸಿದ್ದು, ದಾಳಿಯ ವೇಳೆ ನರಸಿಂಹನ ತಲೆ ಹಾಗೂ ಕೈ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ದಾಳಿಯ ತೀವ್ರತೆಗೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪ್ರಾಥಮಿಕ ತನಿಖೆ ಪ್ರಕಾರ, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಈ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ದಾಳಿ ನಡೆಸಿ ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ…

Read More