Author: Raghu Shetty

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿ: 15/06/2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ನೀಡಿರುತ್ತಾರೆ. ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ನಂತರ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳದಿರುವುದರಿಂದ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಹೆಚ್ಚಿನ ಓಡಾಟವಿದ್ದು, ಮುಂದಿನ ದಿನಗಳಲ್ಲಿಯೂ ಇದು ಮುಂದುವರಿದಲ್ಲಿ ಅಲ್ಲಲ್ಲಿ ರಸ್ತೆಯ ಬದಿಯ ಭೂಕುಸಿತ ಆಗುವ, ಅಫಘಾತವಾಗುವ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವ ಸಂಭವ ಇರುತ್ತದೆ. ಹಾಗೂ ಅರೋಗ್ಯ ಸಮಸ್ಯೆಯ ಕುರಿತು ಮಣಿಪಾಲ್, ಉಡುಪಿ, ಮಂಗಳೂರಿಗೆ ಹೋಗುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಯ ನಾಗರಿಕರಿಗೆ ಇರುವ ಸಂಪರ್ಕ ಬಂದ್ ಆದರೆ ನಾಲ್ಕು ಜಿಲ್ಲೆಯ ನಾಗರೀಕರಿಗೆ ತುಂಬಾ ತೊಂದರೆಯಾಗುವ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.…

Read More

ಶಿವಮೊಗ್ಗ, : ಚುನಾವಣಾ ವ್ಯವಸ್ಥೆಯಲ್ಲಿ ಬಿಎಲ್‌ಒ ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮತದಾರರ ಪಟ್ಟಿಯ ನಿರ್ವಹಣೆ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು, ಮತದಾರರ ವಿವರಗಳ ತಿದ್ದುಪಡಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ಬಿಎಲ್‌ಒಗಳು ಸಮರ್ಪಕವಾಗಿ ನಿರ್ವಹಿಸಬೇಕಿದೆ ಎಂದು ಚುನಾವಣಾ ಅಧಿಕಾರಿ ಹಾಗೂ ಪಾಲಿಕೆ ಆಯುಕ್ತರಾದ ಕೆ. ಮಾಯಣ್ಣ ಗೌಡ ಹೇಳಿದರು. ಮುಂಬರುವ ಚುನಾವಣಾ ಪ್ರಕ್ರಿಯೆಗಳನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನೇಮಕಗೊಂಡ ೮೦ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಪಾಲಿಕೆ ಸಭಾಂಗಣ ದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಮಗ್ರ ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ನೀಡಿದರು. ಮತದಾರರ ಪಟ್ಟಿಯು ಚುನಾವಣಾ ಪ್ರಕ್ರಿಯೆಯ ಮೂಲ ಆಧಾರವಾಗಿದ್ದು, ಅದರ ಶುದ್ಧತೆ ಮತ್ತು ನಿಖರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಬಿಎಲ್‌ಒಗಳ ಕರ್ತವ್ಯವಾಗಿದೆ. ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸುವುದು, ೧೮ ವರ್ಷ ಪೂರೈಸಿದ ಅರ್ಹ ಯುವ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಹಾಗೂ…

Read More

ಶಿವಮೊಗ್ಗ : ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಮೊತ್ತವನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥಸ್ವಾಮಿ ಎಚ್ಚರಿಕೆ ನೀಡಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಸಂಚಾರ ಪೊಲೀಸ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲೂಕಿನ ಎಲ್ಲಾ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಿಗಾಗಿ ಆಯೋಜಿಸಿದ್ದ “ಶಾಲಾ ಶುಲ್ಕ ಪಾರದರ್ಶಕತೆ ಮತ್ತು ನಿಯಮ ಪಾಲನೆ, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳು” ಕುರಿತ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಖಾಸಗಿ ಶಾಲೆಗಳಲ್ಲಿ ದಾಖಲಾತಿ ಶುಲ್ಕ, ಸಮವಸ್ತ್ರ ಶುಲ್ಕ ಹಾಗೂ ವಾಹನ ಶುಲ್ಕಗಳನ್ನು ಸರ್ಕಾರದ ನಿಗದಿತ ಮಿತಿಗಿಂತ ಹೆಚ್ಚಾಗಿ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು, ಪೋಷಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ನಿರಂತರ ದೂರುಗಳು ಬರುತ್ತಿವೆ. ಇದರಿಂದ ಸಾಮಾನ್ಯ ಮತ್ತು ಮಧ್ಯಮ ವರ್ಗದ…

Read More

ಬೆಂಗಳೂರು : ಕಳೆದ ಮಾರ್ಚ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ 6 ವರ್ಷದ ಪಿ. ವೆನ್ನೆಲಾ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗಳನ್ನೇ ಹತ್ಯೆ ಮಾಡಿರುವ ಆರೋಪದಡಿ ತಾಯಿ ಪ್ರಿಯಾಂಕಾಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ Kadugodi Police Station ಪೊಲೀಸರು ಈಗಾಗಲೇ ಪ್ರಿಯಾಂಕಾಳ ಪ್ರಿಯಕರ ಮೋಹನ್‌ನನ್ನು ಬಂಧಿಸಿದ್ದು, ಗುರುವಾರ ಪ್ರಿಯಾಂಕಾಳನ್ನೂ ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಆದೇಶದಂತೆ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಮೃತ ಬಾಲಕಿ ವೆನ್ನೆಲಾ, Davanagere ಮೂಲದ ಶಿಕ್ಷಣ ತಜ್ಞ Praveen ಹಾಗೂ ವಕೀಲೆ Priyanka ಅವರ ಪುತ್ರಿಯಾಗಿದ್ದಳು. ಪ್ರಿಯಾಂಕಾ ತನ್ನ ಕಾಲೇಜು ಸ್ನೇಹಿತ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ Mohan ಅವರೊಂದಿಗೆ ಸಂಬಂಧ ಹೊಂದಿದ್ದು, ಪತಿಯಿಂದ ದೂರವಾಗಿ ಬೆಂಗಳೂರಿನ ಪೂರ್ವ ಭಾಗದಲ್ಲಿರುವ ವಿಲ್ಲಾದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೋಹನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದರೂ ತನ್ನ ಕುಟುಂಬದಿಂದ ದೂರವಾಗಿ ಪ್ರಿಯಾಂಕಾ ಜೊತೆ ವಾಸಿಸುತ್ತಿದ್ದನೆಂದು ತನಿಖೆಯಲ್ಲಿ ಬಹಿರಂಗವಾಗಿದೆ. ಇದೇ ವೇಳೆ, ಪ್ರಿಯಾಂಕಾ ತನ್ನ…

Read More

ಹೊಸನಗರ ಪೊಲೀಸರ ಕಾರ್ಯಾಚರಣೆ: ಬೈಕ್ ಹಾಗೂ ದೇವಸ್ಥಾನ ಹುಂಡಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ಭದ್ರಾವತಿಯ ಆರೋಪಿ ಬಂಧನ; 60 ಸಾವಿರ ಮೌಲ್ಯದ ಬೈಕ್ ಮತ್ತು ನಗದು ವಶ ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಹಾಗೂ ದೇವಸ್ಥಾನದ ಹುಂಡಿ ಹಣ ಕಳವು ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ನಗರ ರಸ್ತೆಯ ಗುರುಶಕ್ತಿ ಪೆಟ್ರೋಲ್ ಬಂಕ್ ಸಮೀಪ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಬಗ್ಗೆ ದ್ಯಾವರ್ಸ ಗ್ರಾಮದ ಪ್ರಕಾಶ್ ಬಸವಪೂಜಾರಿ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ವೇಳೆ ನಗರ ರಸ್ತೆಯ ಪಕ್ಕದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿನ ಬೀಗ ಒಡೆದು ಹುಂಡಿಯಲ್ಲಿದ್ದ ಹಣ ಕಳ್ಳತನ ಮಾಡಿರುವ ಬಗ್ಗೆ ಮಹೇಶ್ ಅವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣಗಳ ತನಿಖೆಯನ್ನು ಕೈಗೊಂಡ ಹೊಸನಗರ ಪೊಲೀಸರು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ತೀರ್ಥಹಳ್ಳಿ…

Read More

ಶಿವಮೊಗ್ಗ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವ ಸಮುದಾಯದಲ್ಲಿ ಅರಿವು ಮೂಡಿ, ವ್ಯಸನದ ವಿರುದ್ಧ ದೃಢ ನಿಲುವು ರೂಪುಗೊಂಡಾಗ ಮಾತ್ರ ನಶೆಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್. ಸಂತೋಷ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ‘ನಶಾ ಮುಕ್ತ ಭಾರತ’ ಮತ್ತು ಅಂಗದಾನ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ನಾನು ಒಬ್ಬಂಟಿಯಾಗಿದ್ದಾಗ ಹೇಗೆ ವರ್ತಿಸುತ್ತೇನೆ ಎಂಬುದೇ ನನ್ನ ವ್ಯಕ್ತಿತ್ವದ ನಿಜವಾದ ಮಾನದಂಡ. ವ್ಯಕ್ತಿಯ ಜೀವನವು ಅವನ ಚರಿತ್ರೆ ಹಾಗೂ ನಡವಳಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಹಿಂದಿನ ಕಾಲದಲ್ಲಿ ಇಡೀ ಸಮಾಜವೇ ಮಕ್ಕಳ ಬೆಳವಣಿಗೆಗೆ ಮಾರ್ಗದರ್ಶನ ನೀಡುತ್ತಿತ್ತು. ಆದರೆ ಇಂದು ಸಮಾಜದ ರಚನೆ ಮತ್ತು ಮಕ್ಕಳ ಮನಸ್ಥಿತಿ ಎರಡೂ ಬದಲಾಗಿದ್ದು, ಹಿರಿಯರನ್ನು ಗೌರವಿಸುವ ಸಂಸ್ಕಾರ ಹಾಗೂ ಒಳ್ಳೆಯ ಸಲಹೆಗಳನ್ನು ಸ್ವೀಕರಿಸುವ ಮನೋಭಾವ ಕಡಿಮೆಯಾಗುತ್ತಿದೆ” ಎಂದು ಹೇಳಿದರು. ಮಾದಕ ವಸ್ತುಗಳು ವ್ಯಕ್ತಿಯಲ್ಲಿ ಕ್ರೌರ್ಯ ಹಾಗೂ ಅಮಾನವೀಯ ಪ್ರವೃತ್ತಿಗಳನ್ನು ಹೆಚ್ಚಿಸುತ್ತವೆ. ನಶೆಯ ಅಮಲಿನಲ್ಲಿ ನಡೆಯುವ…

Read More

ಗಡಿಕಲ್ ಬಳಿ ರಾತ್ರಿ ವೇಳೆ ಕಾರಿನಲ್ಲಿ ಗೋವು ತುಂಬುತ್ತಿದ್ದ ದೃಶ್ಯ ದಾಖಲು; ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಶಿವಮೊಗ್ಗ, : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗಡಿಕಲ್ ಸಮೀಪ ಗೋವು ಕಳ್ಳತನಕ್ಕೆ ಯತ್ನಿಸಿದ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ. ಮಾಹಿತಿಯ ಪ್ರಕಾರ, ಮಂಗಳವಾರ ರಾತ್ರಿ ವೇಳೆ ಕೆಲ ವ್ಯಕ್ತಿಗಳು ಗೋವನ್ನು ವಾಹನಕ್ಕೆ ತುಂಬಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಕಾರೊಂದು ಬಂದಿದ್ದು, ಕಾರು ಬರುತ್ತಿರುವುದನ್ನು ಗಮನಿಸಿದ ಆರೋಪಿಗಳು ಗೋವನ್ನು ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಸಂಪೂರ್ಣ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧ ಭಾಗಗಳಲ್ಲಿ ದನ ಕಳ್ಳತನ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬಗ್ಗೆ ಗ್ರಾಮಸ್ಥರು ಈಗಾಗಲೇ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ಕೂಡ ಅದೇ ಸರಣಿಯ ಭಾಗವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ದನ ಕಳ್ಳತನದಂತಹ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ…

Read More

ಆನಂದಪುರ: ಬ್ಯಾಂಕ್ ಸಾಲದ ನೋಟಿಸ್ ವಿಚಾರದಲ್ಲಿ ಉಂಟಾದ ವೈಷಮ್ಯ ಹಿನ್ನೆಲೆ ಅಣ್ಣನೇ ತನ್ನ ಸ್ವಂತ ತಮ್ಮನನ್ನು ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾದರಸನಕೊಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು ರಾಘವೇಂದ್ರ (39) ಎಂದು ಗುರುತಿಸಲಾಗಿದ್ದು, ಹತ್ಯೆ ಆರೋಪವನ್ನು ಅವರ ಅಣ್ಣ ಮಹೇಶ್ (49) ವಿರುದ್ಧ ದಾಖಲಿಸಲಾಗಿದೆ. ಈ ಕುರಿತು ಮೃತರ ಪತ್ನಿ ಲಲಿತಾ ಆನಂದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಇಬ್ಬರು ಸಹೋದರರ ನಡುವೆ ವೈಮನಸ್ಯ ಉಂಟಾಗಿತ್ತು. ಮೇ 23ರಂದು ರಾತ್ರಿ ಸುಮಾರು 10.30ಕ್ಕೆ ಆರೋಪಿಯ ಮನೆಯ ಸಮೀಪ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ರಾಘವೇಂದ್ರರನ್ನು ಮಹೇಶ್ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರಾಘವೇಂದ್ರರನ್ನು ಮೊದಲು ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಅಮೃತ್…

Read More

ಶಿವಮೊಗ್ಗ, : ನಗರದ ಟಿಪ್ಪುನಗರದಲ್ಲಿ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಇಬ್ಬರು ಸಹೋದರರ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟಿಪ್ಪುನಗರ 5ನೇ ತಿರುವಿನಲ್ಲಿ ನಡೆದ ಘಟನೆಯಲ್ಲಿ ಕಾರ್ ಡೀಲರ್ ರಹಮತ್ ಉಲ್ಲಾ ಹಾಗೂ ಅವರ ಸಹೋದರ ನ್ಯಾಮತ್ ಉಲ್ಲಾ ಗಾಯಗೊಂಡಿದ್ದಾರೆ. ದಾಳಿಯ ವೇಳೆ ರಹಮತ್ ಉಲ್ಲಾ ಅವರ ಬಲ ಭುಜದ ಭಾಗಕ್ಕೆ ಭರ್ಚಿಯಿಂದ ಇರಿಯಲಾಗಿದ್ದು, ನ್ಯಾಮತ್ ಉಲ್ಲಾ ಅವರ ಎಡಗೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಹಮತ್ ಉಲ್ಲಾ, “ಮನೆ ಬಳಿ ಕೆಲವರು ಗಲಾಟೆ ಮಾಡುತ್ತಿರುವುದಾಗಿ ನನ್ನ ಮಗಳು ಫೋನ್ ಮೂಲಕ ತಿಳಿಸಿದ್ದಳು. ತಕ್ಷಣ ನಾನು ಮತ್ತು ನನ್ನ ಸಹೋದರ ಅಲ್ಲಿಗೆ ತೆರಳಿದ್ದೆವು. ಮನೆ ಮುಂದೆ ಯಾಕೆ ಗಲಾಟೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ ಸುಮಾರು 8 ರಿಂದ 9 ಯುವಕರ ಗುಂಪು ಏಕಾಏಕಿ ಹಲ್ಲೆ ನಡೆಸಿತು. ದಾಳಿ ನಡೆಸಿದವರು ಟಿಪ್ಪುನಗರದ ನಿವಾಸಿಗಳೇ” ಎಂದು ಆರೋಪಿಸಿದರು.…

Read More

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ರೈತನೊಬ್ಬ ಮಂಗಳವಾರ ಮಧ್ಯಾಹ್ನ ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ರೈತನ ಜೀವ ಉಳಿದಿದೆ. ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು ಗ್ರಾಮದ ವಿಶು ಕುಮಾರ್ ಎಂಬುವವರು ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕಾಗಿ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ ವಿಧಾನಸೌಧ ಆವರಣದಲ್ಲಿರುವ ಮರವನ್ನು ಕಡಿಯಲು ಈ ಹಿಂದೆ 2025ರಲ್ಲಿ ಪ್ರಯತ್ನಿಸಿದ್ದರು ಎಂದು ಮೂಲಗಳು ತಿಳಿಸಿವೆ. ಮಂಗಳವಾರ, ಅವರು ಮತ್ತೊಮ್ಮೆ ಅದೇ ಮರದ ಬಳಿಗೆ ತಲುಪಿ ಹಸಿರು ಸ್ಕಾರ್ಫ್ ಬಳಸಿ ನೇಣು ಬಿಗಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಅಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಅವರ ಚಟುವಟಿಕೆಗಳನ್ನು ಗಮನಿಸಿದ ತಕ್ಷಣ, ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು. ‘ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ…

Read More