Author: Raghu Shetty

ಶಿವಮೊಗ್ಗ, : ನಗರದ ಪ್ರತಿಯೊಂದು ಬಡಾವಣೆಯ ನಾಗರಿಕರಿಗೂ ಶುಚಿತ್ವ ಹಾಗೂ ಮಾಲಿನ್ಯಮುಕ್ತ ವಾತಾವರಣ ಕಲ್ಪಿಸುವುದು ತಮ್ಮ ಆದ್ಯತೆಯಾಗಿದ್ದು, ಸಾರ್ವಜನಿಕರನ್ನು ದೀರ್ಘಕಾಲದಿಂದ ಕಾಡುತ್ತಿರುವ ಒಳಚರಂಡಿ (UGD) ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ತಿಳಿಸಿದ್ದಾರೆ. ನಗರದ ವಾರ್ಡ್ ನಂ. 6ರ ಬಸವಣ್ಣ ಲೇಔಟ್‌ಗೆ ಮಂಗಳವಾರ ಭೇಟಿ ನೀಡಿದ ಅವರು, ಬಡಾವಣೆಯ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಒಳಚರಂಡಿ ವ್ಯವಸ್ಥೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿ, UGD ವ್ಯವಸ್ಥೆಯ ದೋಷಗಳು, ನೀರು ನಿಂತುಕೊಳ್ಳುವುದು, ದುರ್ವಾಸನೆ ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಶಾಸಕ ಚನ್ನಬಸಪ್ಪ, ಬಸವಣ್ಣ ಲೇಔಟ್‌ನಲ್ಲಿನ ಒಳಚರಂಡಿ ಸಮಸ್ಯೆ ಸಾರ್ವಜನಿಕರ ಆರೋಗ್ಯ ಹಾಗೂ ನೆಮ್ಮದಿಗೆ ಧಕ್ಕೆಯುಂಟುಮಾಡುತ್ತಿರುವ ಗಂಭೀರ ವಿಷಯವಾಗಿದೆ. ಆದ್ದರಿಂದ ಕೇವಲ ತಾತ್ಕಾಲಿಕ ದುರಸ್ತಿ ಕಾರ್ಯಗಳಿಗೆ ಸೀಮಿತವಾಗದೆ, ಸಮಸ್ಯೆಯ ಮೂಲ ಕಾರಣಗಳನ್ನು ಪತ್ತೆಹಚ್ಚಿ ವೈಜ್ಞಾನಿಕ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವ…

Read More

ತೀರ್ಥಹಳ್ಳಿ: ತಾಲೂಕಿನ ಹೆಗ್ಗೋಡು ಸಮೀಪ ಸಂಚರಿಸುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಡು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿಯಂತೆ, ಬಸ್ ತನ್ನ ನಿಗದಿತ ಮಾರ್ಗದಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಪಕ್ಕದ ಕಾಡು ಪ್ರದೇಶದೊಳಗೆ ನುಗ್ಗಿದೆ. ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿದ್ದ ಕಾರಣ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಬಸ್‌ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೊಳಗಾದರು. ಸ್ಥಳೀಯ ನಿವಾಸಿಗಳು ಹಾಗೂ ಇತರ ವಾಹನ ಸವಾರರು ಕೂಡಲೇ ಸ್ಥಳಕ್ಕೆ ಧಾವಿಸಿ ನೆರವು ಕಾರ್ಯಾಚರಣೆ ನಡೆಸಿದರು. ಗಾಯಗೊಂಡವರನ್ನು ಸುರಕ್ಷಿತವಾಗಿ ಹೊರತೆಗೆದು ಪ್ರಾಥಮಿಕ ಚಿಕಿತ್ಸೆ ಒದಗಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಯಂತ್ರಣ ತಪ್ಪಲು ತಾಂತ್ರಿಕ ದೋಷ ಕಾರಣವೇ ಅಥವಾ ರಸ್ತೆ ಪರಿಸ್ಥಿತಿಯ ಪರಿಣಾಮವೇ…

Read More

ಶಿವಮೊಗ್ಗ  : ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಒಂದಾದ ಆಯನೂರು ಗೇಟ್ ಸರ್ಕಲ್ ವ್ಯಾಪ್ತಿಯಲ್ಲಿ ವಾಹನ ಸವಾರರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹತ್ವದ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಆಯನೂರು ಗೇಟ್ ಸರ್ಕಲ್ ಪ್ರಸ್ತುತ ನಾಲ್ಕು ಪ್ರಮುಖ ರಸ್ತೆಗಳನ್ನು (ಹೆಲಿಪ್ಯಾಡ್ ಸರ್ಕಲ್ ಕಡೆಯಿಂದ ಸಾಗರ ಕಡೆಗೆ, ಸಾಗರ ಕಡೆಯಿಂದ ಹೆಲಿಪ್ಯಾಡ್ ಸರ್ಕಲ್ ಕಡೆಗೆ ಹಾಗೂ ಗೋಪಾಳ ಮತ್ತು ಶರಾವತಿ ನಗರ ಕಡೆಗೆ) ಸಂಪರ್ಕಿಸುವ ಪ್ರಮುಖ ಛೇದಕವಾಗಿದೆ. ಇಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿರುವುದರಿಂದ ತೀವ್ರ ವಾಹನ ದಟ್ಟಣೆ ಉಂಟಾಗುತ್ತಿತ್ತು. ಇದನ್ನು ನಿಯಂತ್ರಿಸಲು ಈಗಾಗಲೇ ಸಿಗ್ನಲ್ ದೀಪಗಳನ್ನು ಅಳವಡಿಸಲಾಗಿದೆ. ಆದರೆ, ಈ ಸರ್ಕಲ್ ಬಳಿಯೇ ಆಟೋ ಕಾಂಪ್ಲೆಕ್ಸ್ ಇದ್ದು, ಅಲ್ಲಿ ಗ್ಯಾರೇಜ್ ಹಾಗೂ ವಾಹನ ದುರಸ್ತಿ ಅಂಗಡಿಗಳಿರುವುದರಿಂದ ವಾಹನಗಳ ದಟ್ಟಣೆ ಮತ್ತಷ್ಟು ಹೆಚ್ಚಾಗುತ್ತಿತ್ತು. ನಿಯಮದ ಪ್ರಕಾರ ಆಟೋ ಕಾಂಪ್ಲೆಕ್ಸ್‌ಗೆ ಹೋಗುವ ವಾಹನಗಳು ಎಪಿಎಂಸಿ ಮುಂಭಾಗದಲ್ಲಿರುವ ಡಿವೈಡರ್ ಬಳಸಿ…

Read More

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಮೂಲಗಳ ಪ್ರಕಾರ, ವಿಶ್ವನಾಥ್ ಮೇಲೆ ಸುಮಾರು 6 ರಿಂದ 7 ಮಂದಿಯ ತಂಡ ಏಕಾಏಕಿ ದಾಳಿ ನಡೆಸಿದ್ದು, ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ದಾಳಿಕೋರರು ವಿಶ್ವನಾಥ್ ಅವರನ್ನು ಬೆನ್ನಟ್ಟಿ ಹಿಡಿದು ತಲ್ವಾರ್ ಹಾಗೂ ಇತರೆ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಿಂದ ತೀವ್ರ ರಕ್ತಸ್ರಾವಗೊಂಡ ವಿಶ್ವನಾಥ್ ಅವರನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ ಇಸ್ಪೀಟ್ ಕಿಂಗ್ ಎಂದೇ ಪರಿಚಿತರಾಗಿದ್ದು, ಇಸ್ಪೀಟ್ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ…

Read More

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಲಾಗಿದೆ. ನಗರದ ಅಣ್ಣಾನಗರದ 6ನೇ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಇಮ್ತಿಯಾಜ್ (37) ಹಲ್ಲೆಗೊಳಗಾದನು. ಸ್ನೇಹಿತರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ನಾಲ್ಕೈದು ಯುವಕರಿದ್ದ ಗುಂಪು ಇಮ್ತಿಯಾಜ್ ಅವರನ್ನು ಓಡಿಸಿಕೊಂಡು ಬಂದು ಹಲ್ಲೆ ನಡೆಸಿದೆ. ಆತನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ ಎಂದ ಆರೋಪಿಸಲಾಗಿದೆ. ತೀವ್ರ ಗಾಯಗೊಂಡಿರುವ ಇಮ್ತಿಯಾಜ್‌ನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಮ್ತಿಯಾಜ್‌ಗೆ ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದವರಿಗೆ ಶೋಧ ಕಾರ್ಯ ನಡೆಯುತ್ತಿದೆ.

Read More

ಶಿವಮೊಗ್ಗ : ಶರಾವತಿ ಹಿನ್ನೀರು ಮಟ್ಟ ಗಣನೀಯ ಕುಸಿತವಾದ ಕಾರಣ ಸೋಮವಾರದಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಸಿರುಮಕ್ಕಿಯಲ್ಲಿ ಮಳೆಯ ಕೊರತೆಯಿಂದ ಹಿನ್ನೀರಿನ ಮಟ್ಟ ಕುಸಿತವಾಗಿದೆ. ಹೀಗಾಗಿ ಮುಪ್ಪಾನೆ ಬಳಿಕ ಇದೀಗ ಹಸಿರುಮಕ್ಕಿ ಲಾಂಚ್ ಕೂಡ ಸ್ಥಗಿತವಾಗಿದೆ. ಹಸಿರುಮಕ್ಕಿ ಸಾಗರ- ಕೊಲ್ಲೂರು ಮಧ್ಯೆ ಪ್ರಮುಖ ಮಾರ್ಗವಾಗಿದೆ. ಹೊಸನಗರ ತಾಲೂಕಿನ ಹಲವು ಊರುಗಳಿಗೆ ಹೋಗಲು ಈ ಮಾರ್ಗ ಅನುಕೂಲವಾಗಿತ್ತು. ಸಾವಿರಾರು ಜನರು ದಿನನಿತ್ಯ ಈ ಮಾರ್ಗ ಬಳಸುತ್ತಾರೆ. ಲಾಂಚ್ ಸ್ಥಗಿತದ ಕಾರಣದಿಂದ ಇದೀಗ ಹೊಸನಗರ- ನಗರ-ನಿಟ್ಟೂರು ಮಾರ್ಗವಾಗಿ ಜನರ ಓಡಾಟ ನಡೆಸಬೇಕಾಗಿದೆ.

Read More

ಶಿಕಾರಿಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ರೈತರ ವಿರುದ್ದ ಗದಾಪ್ರಹಾರದಲ್ಲಿ ನಿರತವಾಗಿದ್ದು, ವಿದ್ಯುತ್‌ ಖಾಸಗೀಕರಣ,ಸೀಮಿತ ಗೊಬ್ಬರ ವಿತರಣೆ,ಸಾಗುವಳಿದಾರರ ಒಕ್ಕಲೆಬ್ಬಿಸುವಿಕೆ ಮೂಲಕ ರೈತ ನೆಮ್ಮದಿಯಿಂದ ಬದುಕಲು ಸಾದ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಈರಣ್ಣ ಪ್ಯಾಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತಾ.ರೈತ ಸಂಘದ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ನಡೆದ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಅತಿವೃಷ್ಠಿ ಅನಾವೃಷ್ಟಿ ಜತೆಗೆ ರೈತರ ಉತ್ಪನ್ನಗಳ ಬೆಲೆ ಕುಸಿತದಿಂದ ಪ್ರತಿ ವರ್ಷ ರೈತರ ಬದುಕು ತೀವ್ರ ಸಂಕಷ್ಟದಲ್ಲಿದ್ದು ಇದರೊಂದಿಗೆ ಪದೇಪದೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ನೀತಿಯಿಂದ ರೈತರು ಕಂಗೆಟ್ಟಿದ್ದಾರೆ ಎಂದು ತಿಳಿಸಿದ ಅವರು ಇದೀಗ ವಿದ್ಯುತ್ ಖಾಸಗೀಕರಣದ ಸಂಚು ರೂಪಿಸಿರುವ ರಾಜ್ಯ ಸರ್ಕಾರ  ರೈತರಿಗೆ ದ್ರೋಹ ಬಗೆಯುವ ಸಿದ್ದತೆಯಲ್ಲಿದೆ.ಪ್ರತಿ ಬೋರ್ವೆಲ್‌ ಗೆ ಮೀಟರ್ ಅಳವಡಿಸುವ ಕುತಂತ್ರ ಸರ್ಕಾರದಿಂದ ನಡೆಯುತ್ತಿದೆ ಸರ್ಕಾರದ ನೀತಿಯನ್ನು ರೈತರು ಒಗ್ಗಟ್ಟಿನಿಂದ ಖಂಡಿಸಿ ಬೀದಿಗಿಳಿದು ಹೋರಾಟ ಹಮ್ಮಿಕೊಳ್ಳುವುದು…

Read More

ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಬಳಿ ಕಾಮಗಾರಿ ವೇಳೆ ಕೈರ್ನ್ (ಕ್ರೇನ್) ಸಿಕ್ಕಿ ಕೂಲಿ  ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಳಿಗುಡಿ ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ನಾಗೇಶ್ ಅವರು ದೇವಸ್ಥಾನದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ನಿನ್ನೆ ಶಿವಮೊಗ್ಗಕ್ಕೆ ಬಂದಿದ್ದರು. ಇಂದು ಕೆಲಸ ಮಾಡುವ ವೇಳೆ ಕ್ರೇನ್‌ಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಕುರಿತು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕಕ್ಕೆ ತೆರಳುತ್ತಿದ್ದ ಎಲ್‌ಪಿಜಿ (LPG) ಗ್ಯಾಸ್ ತುಂಬಿದ ಟ್ಯಾಂಕರ್ ಲಾರಿಯೊಂದು ನಗರದ ಡೈರಿ ಸರ್ಕಲ್ ಸಮೀಪ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಬುಧವಾರ ನಡೆದಿದೆ. ಗ್ಯಾಸ್ ತುಂಬಿದ ಟ್ಯಾಂಕರ್ ಸಿಲುಕಿರುವುದರಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಗಳೂರಿನಿಂದ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕದತ್ತ ಸಾಗುತ್ತಿದ್ದ ಟ್ಯಾಂಕರ್, ಡೈರಿ ಸರ್ಕಲ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಮಳೆಯಿಂದ ಉಂಟಾದ ಕೆಸರಿನಲ್ಲಿ ಸಿಲುಕಿಕೊಂಡಿದೆ. ಟ್ಯಾಂಕರ್ ಅನ್ನು ಹೊರತೆಗೆಯಲು ಕ್ರೇನ್ ಬಳಸಿ ಪ್ರಯತ್ನಿಸಿದರೂ ಆರಂಭಿಕ ಹಂತದಲ್ಲಿ ಯಶಸ್ಸು ದೊರಕಿಲ್ಲ ಎಂದು ತಿಳಿದುಬಂದಿದೆ. ಸುರಕ್ಷತಾ ದೃಷ್ಟಿಯಿಂದ ಇಂಡೇನ್ ಕಂಪನಿಯ ಅಗ್ನಿಶಾಮಕ ವಾಹನವನ್ನು ಸ್ಥಳದಲ್ಲೇ ನಿಯೋಜಿಸಲಾಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ಯಾಸ್ ತುಂಬಿದ ಟ್ಯಾಂಕರ್ ಆಗಿರುವುದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ನಿಗಾ ವಹಿಸಿದ್ದಾರೆ. ಮಾಚೇನಹಳ್ಳಿಯ ಇಂಡೇನ್ ರಿಫಿಲ್ಲಿಂಗ್ ಘಟಕದಿಂದ ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ ಸುಮಾರು ಹತ್ತು ಜಿಲ್ಲೆಗಳಿಗೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತದೆ.…

Read More

ಶಿವಮೊಗ್ಗ, : ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹುಡ್ಕೋ ಕಾಲೋನಿಯ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹1.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. 2025ರ ಆಗಸ್ಟ್ 3ರಿಂದ 10ರ ಅವಧಿಯಲ್ಲಿ ವಿನೋಬನಗರ ಹುಡ್ಕೋ ಕಾಲೋನಿಯ ಮನೆಯೊಂದರಲ್ಲಿ 12 ಗ್ರಾಂ ತೂಕದ ಚಿನ್ನಾಭರಣ ಕಳವು ನಡೆದಿತ್ತು. ಈ ಸಂಬಂಧ ಕಾಶಿಪುರದ ಲಕ್ಷ್ಮೀಪುರ ಬಡಾವಣೆಯ ನಿವಾಸಿ ಉಷಾ ಅವರು ಮೇ 26, 2026ರಂದು ದೂರು ನೀಡಿದ್ದು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್-2023ರ ಕಲಂ 305ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ಹಾಗೂ ಡಿವೈಎಸ್‌ಪಿ ಸಂಜೀವ್ ಕುಮಾರ್ ಟಿ. ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಯಿತು. ವಿನೋಬನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂತೋಷಕುಮಾರ್ ಡಿ.ಕೆ. ಅವರ ನೇತೃತ್ವದಲ್ಲಿ ಪಿಎಸ್‌ಐ ತಿರುಮಲೇಶ್ ಜಿ. ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿತು. ಮಾಹಿತಿ ಸಂಗ್ರಹಿಸಿ…

Read More