Subscribe to Updates
Get the latest creative news from FooBar about art, design and business.
Author: Raghu Shetty
ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಜೂ.5 ರ ಸಂಜೆ 5 ಗಂಟೆಗೆ ‘ಮಾಕ್ ಡ್ರಿಲ್’ (ಅಣಕು ಪ್ರದರ್ಶನ) ಆಯೋಜಿಸಲಾಗಿದೆ. ಇದು ಕೇವಲ ಮುನ್ನೆಚ್ಚರಿಕೆ ಮತ್ತು ತರಬೇತಿಯ ಪ್ರದರ್ಶನವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕಕ್ಕೊಳಗಾಗಬಾರದು ಎಂದು ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಕುರಿತು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಅಣಕು ಪ್ರದರ್ಶನದ ಪೂರ್ವಭಾವಿ ಸಿದ್ದತೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮಾತನಾಡಿ, 2026 ನೇ ಸಾಲಿನಲ್ಲಿ ರಾಷ್ಟçಮಟ್ಟದಲ್ಲಿ ನಾಗರೀಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು…
ಶಿವಮೊಗ್ಗ : ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ. ತೀರ್ಥಹಳ್ಳಿ ತಾಲೂಕು ಮುಡುಬಾ ಸಮೀಪ ಘಟನೆ ಸಂಭವಿಸಿದೆ. ಬಸ್ಸು ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ತೀರ್ಥಹಳ್ಳಿಗೆ ಸಂಚರಿಸುತ್ತಿತ್ತು. ಮುಡುಬಾ ಸಮೀಪ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರೆಗೆ ಹೋಗಿದೆ. ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ : ಭದ್ರಾವತಿ ಹಳೇನಗರದ ಸುಭಾಷ್ ನಗರದ ವಾಸಿ ಕುಮಾರ್ ಮತ್ತು ಲೀಲಾ ಎಂಬುವರ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ ಬಹು ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದ ಘಟನೆ ನಡೆದಿದೆ. ಕೀರ್ತನಾ ತುಮಕೂರಿನ ಸಿದ್ದಗಂಗಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ನರ್ಸಿಂಗ್ ವಿಭಾಗದಲ್ಲಿ ನೌಕರಿಯಲ್ಲಿದ್ದರು. ತಮ್ಮ ಮನೆಯಿಂದ ಕಳೆದ ಮಂಗಳವಾರ ನೌಕರಿಗೆ ತೆರಳಿದ್ದರು. ಅಂದೇ ರಾತ್ರಿ ಪಾಳೆಯದಲ್ಲಿ ಇವರು ಕರ್ತವ್ಯದಲ್ಲಿದ್ದಾಗ ಇದ್ದಕ್ಕಿದ್ದ ಹಾಗೆ ನೆಲಕ್ಕುರುಳಿ ಪ್ರಜ್ಞೆ ತಪ್ಪಿದೆ. ತಕ್ಷಣ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆಸ್ಪತ್ರೆಯಿಂದ ಭದ್ರಾವತಿಯಲ್ಲಿನ ಅವರ ತಂದೆ ಕುಮಾರ್‌ಗೆ ಫೋನ್ ಮಾಡಿ ವಿಷಯ ತಿಳಿಸಿದ್ದರು. ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದ್ದರೂ ಪ್ರಜ್ಞೆ ಬಂದಿಲ್ಲ. ಕಳೆದ ರಾತ್ರಿ ವೈದ್ಯರು ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳೆದಿದ್ದಾರೆಂದು ದೃಢಪಡಿಸಿದ್ದಾರೆ. ನಂತರ ಮೃತ ದೇಹವನ್ನು ಬೆಂಗಳೂರಿನ ಮಹಾದೇವ ಪುರದಲ್ಲಿರುವ ಕೃಷ್ಣ ಕಿಮ್ಸ್ ಆಸ್ಪತ್ರೆಯಲ್ಲಿ ಬಹು ಅಂಗಾಂಗಗಳನ್ನು ಪಡೆಯಲಾಗಿದೆ. ಮೃತ ದೇಹವನ್ನು ನಗರಕ್ಕೆ ತಂದು ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ…
ಶಿವಮೊಗ್ಗ : ನಗರದಲ್ಲಿ ಫುಟ್‌ಪಾತ್ ಮತ್ತು ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರೆದಿದೆ. ಬಿ.ಹೆಚ್. ರಸ್ತೆಗೆ ಹೊಂದಿರಕೊಂಡಿರುವ ಗಾರ್ಡನ್ ಏರಿಯಾದ 1ನೇ ಕ್ರಾಸ್‌ನಲ್ಲಿ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿದರು. ರಸ್ತೆಯಲ್ಲಿ ಕಬ್ಬಿಣದ ವಸ್ತುಗಳು, ಟೈರ್‌ಗಳು ಹಾಗೂ ಗುಜರಿ ಸಾಮಗ್ರಿಗಳನ್ನು ವ್ಯಾಪಾರಿಗಳು ಫುಟ್ ಪಾತ್ ಮತ್ತು ರಸ್ತೆಗಳ ಮೇಲೆ ಇರಿಸಿದ್ದರು. ಇದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಹಿನ್ನೆಲೆ ಟ್ರಾಫಿಕ್ ಪೊಲೀಸರು ಅವುಗಳನ್ನು ತೆರವುಗೊಳಿಸಿದರು. ಇದೇ ವೇಳೆ, ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಯಾವುದೇ ವಸ್ತುಗಳನ್ನು ಇಡಬಾರದು ಎಂದು ಗುಜರಿ ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಈ ನಿಯಮವನ್ನು ಮತ್ತೆ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸಂಚಾರ ಸುಧಾರಣೆಗೆ ಪೊಲೀಸರು ಸರಣಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಹಿಂದೆ ಗಾರ್ಡನ್ ಏರಿಯಾದಲ್ಲಿ ಫುಟ್‌ಪಾತ್‌ಗಳನ್ನು ಮುಕ್ತಗೊಳಿಸಲಾಗಿತ್ತು. ಅಲ್ಲದೆ ಬಸವೇಶ್ವರ ಕಾಲೇಜು ಮುಂಭಾಗದಲ್ಲಿದ್ದ ಹೂವಿನ ಅಂಗಡಿಗಳನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಶಿವಮೊಗ್ಗ, : ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಟೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 9 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಎ-ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಿಂದ ಸರ್ಚ್ ವಾರೆಂಟ್ ಪಡೆದುಕೊಂಡು, ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡವು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿತು. ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹33,470 ನಗದು, 8 ಮೊಬೈಲ್ ಫೋನ್‌ಗಳು ಹಾಗೂ ಇಸ್ಟೀಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 200/2026 ಅಡಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 79 ಮತ್ತು 80ರ ಅನ್ವಯ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿವಮೊಗ್ಗ : ಮನೆಗೆ ನುಗ್ಗಿ ನಗದು ದೋಚಿ ಪರಾರಿಯಾಗಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಶಿವಮೊಗ್ಗ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಕಾಶೀಪುರ ಲಕ್ಕಪ್ಪ ಲೇಔಟ್ ನ ಸೋಮಶೇಖರ್ ಎಂಬುವರ ಮನೆಯಲ್ಲಿ ಮೇ 26 ರಂದು ಕಳ್ಳತನವಾಗಿತ್ತು. ಮನೆಯಲ್ಲಿದ್ದ 7 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ವಿನೋಬನಗರದಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿಪ್ಪುನಗರದ ಮೊಹಮದ್ ಸಲೀಮ್ ಹಾಗೂ ಮೊಹಮದ್ ರಜಾಕ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 5,13,000 ನಗದನ್ನ ಪೊಲೀಸರು ವಶಪಡಿಸಿಕೊಂಡಿದ್ದಾನೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ.ಜಿ. ಕೆಎಸ್‌ಪಿಎಸ್ ಹಾಗೂ ಶಿವಮೊಗ್ಗ ಉಪ ವಿಭಾಗ-ಬಿ ಪೊಲೀಸ್ ಉಪಾಧೀಕ್ಷಕರಾದ ಸಂಜೀವ್ ಕುಮಾರ್ ಟಿ.ಡಿ. ಅವರ ಮಾರ್ಗದರ್ಶನದಲ್ಲಿ ವಿನೋಬನಗರ ಪೊಲೀಸ್ ಠಾಣೆ ವತಿಯಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು. ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂತೋಷಕುಮಾರ್ ಡಿ.ಕೆ. ಅವರ ಉಸ್ತುವಾರಿಯಲ್ಲಿ ಪೊಲೀಸ್ ಉಪನಿರೀಕ್ಷಕರಾದ ತಿರುಮಲೇಶ್ ಜಿ.…
ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ೨೫ ಸ್ಥಳಗಳ ಮೇಲೆ ದಾಳಿ ನಡೆಸಿ ಸುಮಾರು 17 ಸಾವಿರ ಮೆಟ್ರಿಕ್ ಟನ್ ಅಕ್ರಮ ಮರಳನ್ನು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿ, ಟ್ರ್ಯಾಕ್ಟರ್, ಬೋಟ್ ಹಾಗೂ ಮರಳು ಫಿಲ್ಟರ್ ಯಂತ್ರ ಸೇರಿದಂತೆ ೫೨ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕ ಲೋಕಾಯುಕ್ತ ಬೆಂಗಳೂರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲ್ಲೂಕುಗಳಲ್ಲಿ ಹರಿಯುವ ತುಂಗಭದ್ರಾ ಮತ್ತು ಶರಾವತಿ ನದಿ ಪಾತ್ರಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಚಟುವಟಿಕೆಗಳ ಪರಿಶೀಲನೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಘಟಕದ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಹಾಗೂ ಪೊಲೀಸ್ ಉಪಾಧೀಕ್ಷಕ ಬಿ.ಪಿ. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ೧೫ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಭದ್ರಾವತಿ ತಾಲೂಕಿನ ನಿಂಬೆಗೊಂದಿ, ಮಂಗೋಟೆ,…
ಶಿವಮೊಗ್ಗ : ಮನೆ ಸಮೀಪವೇ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪವನ್ನ ಸೆರೆಹಿಡಿಯುವಲ್ಲಿ ಉರಗ ತಜ್ಞ ಕಿರಣ್ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಣಗಲಕೊಪ್ಪದ 17 ನೇ ಮೈಲಿಗಲ್ಲು ಮನೆಯ ಮುಂಭಾಗಕ್ಕೆ ಬರೋಬ್ಬರಿ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಬಂದು ನಿಂತಿದ್ದು, ಮನೆಯೊಳಗೆ ನುಗ್ಗಲು ಯತ್ನಿಸಿತ್ತು. ಈ ದೃಶ್ಯವನ್ನು ಕಂಡ ಮನೆಯಲ್ಲಿದ್ದವರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದರು. ಮನೆಯವರ ಕೂಗಾಟ ಕೇಳಿ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದು, ಪರಿಸ್ಥಿತಿಯನ್ನು ಗಮನಿಸಿದ ಅಕ್ಕ ಪಕ್ಕದ ನಿವಾಸಿಗಳು ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ನೇಕ್ ಕಿರಣ್ ಕುಮಾರ್ ಅವರನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಸ್ಥಳಕ್ಕೆ ಆಗಮಿಸಿದ ಕಿರಣ್ ಕುಮಾರ್ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿ ಕೊನೆಗೂ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು.
ಶಿವಮೊಗ್ಗ : ಸಾಗರ ಪಟ್ಟಣದ ಜೆಪಿ ನಗರದಲ್ಲಿ ಕೌಟುಂಬಿಕ ಕಲಹ ಹಾಗೂ ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೃತನ ಪತ್ನಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪರಶುರಾಮ್ (40) ಕೊಲೆಯಾದ ವ್ಯಕ್ತಿ. ಇವರ ಪತ್ನಿ ಚೈತ್ರಾ ಹಾಗೂ ಮಂಜು @ ಟೀ ಪುಡಿ ಮಂಜು ನಡುವೆ ಈ ಹಿಂದಿನಿಂದಲೂ ಸಂಬಂಧವಿದ್ದು, ಈ ವಿಚಾರವಾಗಿ ಮನೆಯಲ್ಲಿ ಆಗಾಗ್ಗೆ ಗಲಾಟೆಗಳು ನಡೆಯುತ್ತಿತ್ತೆಂದು ತಿಳಿದುಬಂದಿದೆ. ದಿನಾಂಕ 15-05-2026ರಂದು ರಾತ್ರಿ ಪರಶುರಾಮ್ ಮತ್ತು ಚೈತ್ರಾ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆಯುತ್ತಿದ್ದ ವೇಳೆ ಮಂಜು ಮನೆಯೊಳಗೆ ಬಂದಿದ್ದಾನೆ. ಈ ವೇಳೆ ಮಂಜು ಹಾಗೂ ಪರಶುರಾಮ್ ನಡುವೆ ತೀವ್ರ ವಾಗ್ವಾದ ಮತ್ತು ಗಲಾಟೆ ನಡೆದಿದ್ದು, ಪರಶುರಾಮ್ ಮನೆಯಲ್ಲಿದ್ದ ಕುಡುಗೋಲು ಹಿಡಿದಿದ್ದರೆ, ಮಂಜು ಚಾಕು ಹಿಡಿದು ಜಗಳವಾಡಿದ್ದಾನೆ ಎನ್ನಲಾಗಿದೆ. ಗಲಾಟೆಯ ಸಂದರ್ಭ ಪರಶುರಾಮ್ ಹೊಟ್ಟೆ ಹಿಡಿದು “ಮಂಜು ಚುಚ್ಚಿದ್ದಾನೆ” ಎಂದು ಕೂಗಿಕೊಂಡಿದ್ದು, ಬಳಿಕ ಗಾಯಾಳುವನ್ನು ಆಟೋ ಮೂಲಕ ಸಾಗರ ಸರ್ಕಾರಿ ಆಸ್ಪತ್ರೆಗೆ…
ಶಿವಮೊಗ್ಗ : ಹೊಸನಗರ ತಾಲೂಕಿನ ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ನೋಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಮೇಯಲು ಬಿಟ್ಟ ಸಾಕಷ್ಟು ಜಾನುವಾರುಗಳನ್ನು ಚಿರತೆ ತಿಂದಿರುವ ಬಗ್ಗೆ ಮಾಹಿತಿ ಇದ್ದು ಜಾನುವಾರುಗಳ ಕಳೇಬರಗಳು ಅಲ್ಲಲ್ಲಿ ಕಂಡುಬಂದಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕಡಸೂರು ನಿವಾಸಿಗಳು ಆಗ್ರಹಿಸಿದ್ದಾರೆ.