ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಶಿವಮೊಗ್ಗ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇಂದು ಬೆಳಿಗ್ಗೆ ಆರೋಪಿಗಳನ್ನು ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಅಡಿಷನಲ್ ಎಸ್‌ಪಿ) ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ತಂಡವು ವೇಗವಾಗಿ ಕಾರ್ಯಾಚರಣೆ ನಡೆಸಿ ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ನಿನ್ನೆ ಶುಕ್ರವಾರ ಸಂಜೆ ಸುಮಾರು 4.45ರ ವೇಳೆಗೆ ಇಸ್ಪೀಟ್ ಅಡ್ಡೆಗೆ ಬಂದಿದ್ದ ದುಷ್ಕರ್ಮಿಗಳ ತಂಡ ನರಸಿಂಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬು ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಎಂಬ ಐವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Subscribe to Updates
Get the latest creative news from FooBar about art, design and business.
ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್
Big break in Narasimha murder case: Five arrested within 24 hours
