Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

July 29, 2026

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಭಗವಾನ್ ಬಿರ್ಸಾ ಮುಂಡಾ ನಮ್ಮೆಲ್ಲರಿಗೆ ಮಾದರಿ : ಬಿ.ವೈ.ರಾಘವೇಂದ್ರ
ನಮ್ಮ ಶಿವಮೊಗ್ಗ

ಭಗವಾನ್ ಬಿರ್ಸಾ ಮುಂಡಾ ನಮ್ಮೆಲ್ಲರಿಗೆ ಮಾದರಿ : ಬಿ.ವೈ.ರಾಘವೇಂದ್ರ

Birsa Munda is a role model for all of us.
Raghu ShettyBy Raghu ShettyNovember 15, 2025No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ, : ತನ್ನ ಆದಿವಾಸಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಚಿಕ್ಕವಯಸ್ಸಿನಲ್ಲೇ ಹೋರಾಟದ ಕಿಚ್ಚು ಹತ್ತಿಸಿದ ಬಿರ್ಸಾ ಮುಂಡಾರವರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕಂಟ್ರೀ ಕ್ಲಬ್ ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 150 ನೇ ಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ ಆಚರಣೆ 2025 ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತಿ ಚಿಕ್ಕ ವಯಸ್ಸಿನಲ್ಲೇ ತಮ್ಮ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ ಹಾಗೂ ಬ್ರಿಟಿಷರ ವಿರುದ್ದ ಸಿಡಿದೆದ್ದ ಬಿರ್ಸಾ ಮುಂಡಾ ಸಮುದಾಯದ ಪಾಲಿಗೆ ದೇವರಾಗಿದ್ದರು.
ನೀರು, ಭೂಮಿ, ಅರಣ್ಯ ಬುಡಕಟ್ಟು ಜನರ ಹಕ್ಕು ಎನ್ನುವ ರೀತಿಯಲ್ಲಿ ಹೋರಾಡಿದ್ದರು. ಆಧ್ಯಾತ್ಮಿಕತೆಗೆ ಶಕ್ತಿ ತುಂಬಿದ್ದ ಇವರನ್ನು ದೇವರಂತೆ ಕಾಣುತ್ತಿದ್ದರು. ಇಂತಹ ಆದಿವಾಸಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.
ರಾಜ್ಯದಲ್ಲಿ ಆದಿವಾಸಿ ಸಮುದಾಯವಿರುವ ಪ್ರದೇಶಗಳಲ್ಲಿ 1000 ಹೋಂ ಸ್ಟೇ ನಿರ್ಮಿಸಲು ನಿರ್ಧರಿಸಿದ್ದು ಪ್ರತಿ ಹೋಂ ಸ್ಟೇ ನಿರ್ಮಾಣಕ್ಕೆ ರೂ.5 ಲಕ್ಷ ಅನುದಾನ ನೀಡಲಾಗುವುದು. ಬುಡಕಟ್ಟು ಗುಂಪುಗಳ ಸಮಗ್ರ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಆದಿವಾಸಿ ಕಲ್ಯಾಣ ಬಜೆಟ್‌ನ್ನು ಜಾರಿಗೆ ತಂದಿದೆ. ಮೂಲಭೂತ ಸೌಕರ್ಯಗಳನ್ನು ನೀಡಿ ಆದರ್ಶ ಗ್ರಾಮ ಮಾಡುವ ಯೋಜನೆ ಜಾರಿಗೊಳಿಸಿದೆ. ಆದಿವಾಸಿ ಭವನಗಳನ್ನು ನಿರ್ಮಿಸಲು ರೂ. 50 ನೀಡಲಾಗುತ್ತಿದೆ. ಅರಣ್ಯ ಹಕ್ಕು ಕಾಯ್ದೆ, ಸಣ್ಣ ಅರಣ್ಯ ಮತ್ತು ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ, ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಪೂರಕ ಆಹಾರ ಯೋಜನೆ, ಆದಿವಾಸಿ ಮಕ್ಕಳಿಗೆ ಶಿಕ್ಷಣ, ಮೂಲಭೂತ ಸೌಕರ್ಯಗಳು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು ಸದ್ಬಳಕೆ ಮಾಡಿಕೊಳ್ಳಬೇಕೆಂದ ಅವರು ಬಿರ್ಸಾ ಮುಂಡಾರAತಹ ಹುತಾತ್ಮರ ತ್ಯಾಗ, ಬಲಿದಾನವನ್ನು ಸ್ಮರಿಸಿಕೊಂಡು ಮುಂದೆ ಸಾಗೋಣ ಎಂದು ಕರೆ ನೀಡಿದರು.
ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿಯಾದ ಡಾ.ಶುಭಾ ಮರವಂತೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಬಿರ್ಸಾ ಮುಂಡಾರAತಹ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿಯಲು ನಾವು ಚರಿತ್ರೆ ಓದಬೇಕು. ಕೇವಲ 25 ವರ್ಷ ಬದುಕಿದ್ದ ಅವರು ಜಾರ್ಕಂಡ್ ರಾಜ್ಯದ ಮುಂಡಾ ಪ್ರದೇಶದ ಬುಡಕಟ್ಟು ಸಮುದಾಯಕ್ಕೆ ಸೇರಿದ ಬಿರ್ಸಾ ಮುಂಡಾರವರು ಅತಿ ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಸಮುದಾಯವನ್ನು ರಕ್ಷಿಸಲು ಹೋರಾಟದ ಕಿಚ್ಚನ್ನು ಹಚ್ಚುತ್ತಾರೆ.
ತಮ್ಮ ಸಮುದಾಯದಲ್ಲಿದ್ದ ಮೌಢ್ಯ, ಕಂದಾಚಾರಗಳನ್ನು ವಿರೋಧಿಸಿ ತನ್ನದೇ ಆದಿವಾಸಿ ಸಂಸ್ಕೃತಿಯನ್ನು ಕಟ್ಟುತ್ತಾರೆ. ಅದ್ಭುತ ಸಾಧನೆ ಮಾಡುತ್ತಾರೆ. ಸಾಧಕನಿಗೆ ವಯಸ್ಸೇ ಬೇಡ ಎನ್ನುವಂತೆ ಅತಿ ಚಿಕ್ಕ ವಯಸ್ಸಿನಲ್ಲಿ ಕ್ರಾಂತಿಯ ಕಿಡಿ ಹತ್ತಿಸಿ ಸೆಣೆಸಾಡುತ್ತಾರೆ.
ಅರಣ್ಯವನ್ನೇ ದೇವರೆಂದು ತಿಳಿದು, ಪ್ರಕೃತಿಗಾಗಿ ಬದುಕಿದ್ದ ಆದಿವಾಸಿಗಳು ಇವರು. ಆದಿವಾಸಿಗಳ ನೋವು, ಮೌಢ್ಯ ನೋಡಿದ ಅವರು, ಅವರ ಜನರನ್ನು ಇದರಿಂದ ಹೊರತರಲು ತಮ್ಮದೇ ದಾರಿ ಆರಿಸಿಕೊಂಡು ತಾನೇ ‘ಧರ್ತಿ ಅಭಾ’ ಅಂದರೆ ಈ ‘ಭೂಮಿಯ ತಂದೆ’ ತಾನೇ ಎಂದು ಆದಿವಾಸಿಗಳನ್ನು ವಿಶೇಷ ಸಂಸ್ಕೃತಿಯಲ್ಲಿ ನಡೆಸಿಕೊಂಡು ಹೋಗುತ್ತಾರೆ. ತಮಗೆ ತಿಳಿದಿದ್ದ ನಾಟಿ ಔಷಧ ನೀಡಿ ಉಪಚರಿಸಲು ಆರಂಭಿಸುತ್ತಾರೆ. ಪ್ಲೇಗ್ ಬಂದ ಸಮಯದಲ್ಲೂ ತಮ್ಮ ಸಮಾಜ ರಕ್ಷಣೆಗೆ ನಿಲ್ಲುತ್ತಾರೆ. ಮಹಿಳೆಯರ ರಕ್ಷಣೆ, ಸ್ತ್ರೀ ಹಕ್ಕುಗಳು, ಆದಿವಾಸಿ ಮಕ್ಕಳ ಶಿಕ್ಷಣಕ್ಕಾಗಿ ಹೋರಾಡುತ್ತಾರೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವುದನ್ನು ವಿರೋಧಿಸುತ್ತಾರೆ. ಜನ ಜಾಗೃತಿಗೊಳಿಸುವ ಎಲ್ಲ ಪ್ರಯತ್ನ ಮಾಡುತ್ತಾರೆ.
ತಮ್ಮ ಅರಣ್ಯದ ಸುದ್ದಿಗೆ ಬಂದ ಬ್ರಿಟಿಷರ ಧಮನಕಾರಿ ಧೋರಣೆಗಳ ವಿರುದ್ದ ಸೆಣೆಸಾಡಲು ಬಿರ್ಸಾ ರವರು ಬಿಲ್ಲುಬಾಣಗಳ ಸೈನ್ಯವನ್ನು ಕಟ್ಟಿ ಹೋರಾಡುತ್ತಾರೆ. ನಂತರ ಜೈಲಿಗೆ ಹೋಗಿ ಅಲ್ಲಿ ಬ್ರಿಟಿಷರ ಕುತಂತ್ರಕ್ಕೆ ಬಲಿಯಾಗಿ ಸಾವನ್ನಪ್ಪುತ್ತಾರೆ. ಆದರೆ ಅಷ್ಟು ಚಿಕ್ಕ ವಯಸ್ಸಿನಲ್ಲಿ ಅವರು ಸಮುದಾಯಕ್ಕಾಗಿ ಮಾಡಿದ ಕೆಲಸಗಳು ಇಂದಿಗೂ ಹಸಿರಾಗಿವೆ. ಮನುಷ್ಯನ ಘನತೆ ಅವನು ಮಾಡುವ ಕೆಲಸದಲ್ಲಿರುತ್ತದೆ ಎಂದು ಸ್ಮರಿಸಿದರು.
ಜನ ಜಾತೀಯ ದಿನಾಚರಣೆ ಅಂಗವಾಗಿ ಆದಿವಾಸಿ ಬುಡಕಟ್ಟು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ದಿಶಾ ಸಮಿತಿಯ ನಿರ್ದೇಶಕ ಗಿರೀಶ್ ಭದ್ರಾಪುರ, ವಾಲ್ಮೀಕಿ ಅಭಿವೃದ್ದಿ ನಿಗಮದ ಮಾಜಿ ನಿರ್ದೇಶಕ ಬಿ ಎಸ್ ನಾಗರಾಜ್, ವಾಲ್ಮೀಕಿ ಸಮಾಜದ ಮುಖಂಡರು, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

shivamoga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಭುಗಿಲೆದ್ದ ಕಮಲ-ಹಸ್ತ ಸಂಘರ್ಷ: ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಯತ್ನ, ಪೊಲೀಸರ ಜೊತೆ ವಾಗ್ವಾದ

July 23, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,326 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,276 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026386 Views
Don't Miss
Home

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

By Raghu ShettyJuly 29, 20260

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿ.ಎ.) ಎಂದು ಸುಳ್ಳು ಪರಿಚಯ ಮಾಡಿಕೊಂಡು ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್…

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.