ಆನಂದಪುರ: ಬ್ಯಾಂಕ್ ಸಾಲದ ನೋಟಿಸ್ ವಿಚಾರದಲ್ಲಿ ಉಂಟಾದ ವೈಷಮ್ಯ ಹಿನ್ನೆಲೆ ಅಣ್ಣನೇ ತನ್ನ ಸ್ವಂತ ತಮ್ಮನನ್ನು ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾದರಸನಕೊಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ರಾಘವೇಂದ್ರ (39) ಎಂದು ಗುರುತಿಸಲಾಗಿದ್ದು, ಹತ್ಯೆ ಆರೋಪವನ್ನು ಅವರ ಅಣ್ಣ ಮಹೇಶ್ (49) ವಿರುದ್ಧ ದಾಖಲಿಸಲಾಗಿದೆ. ಈ ಕುರಿತು ಮೃತರ ಪತ್ನಿ ಲಲಿತಾ ಆನಂದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಪ್ರಕಾರ, ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಇಬ್ಬರು ಸಹೋದರರ ನಡುವೆ ವೈಮನಸ್ಯ ಉಂಟಾಗಿತ್ತು. ಮೇ 23ರಂದು ರಾತ್ರಿ ಸುಮಾರು 10.30ಕ್ಕೆ ಆರೋಪಿಯ ಮನೆಯ ಸಮೀಪ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ರಾಘವೇಂದ್ರರನ್ನು ಮಹೇಶ್ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ರಾಘವೇಂದ್ರರನ್ನು ಮೊದಲು ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಅಮೃತ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ವೈದ್ಯರು ಮನೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಮನೆಯಲ್ಲೇ ಆರೈಕೆ ಪಡೆಯುತ್ತಿದ್ದ ರಾಘವೇಂದ್ರ ಜೂನ್ 9ರಂದು ಬೆಳಗಿನ ಜಾವ ನಿಧನರಾದರು.
ಈ ಹಿಂದೆ ದಾಖಲಿಸಲಾಗಿದ್ದ ಪ್ರಕರಣಕ್ಕೆ ಇದೀಗ ರಾಘವೇಂದ್ರರ ಸಾವಿನ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಹತ್ಯೆ ಸೇರಿದಂತೆ ಗಂಭೀರ ಕಲಂಗಳನ್ನು ಸೇರ್ಪಡೆಗೊಳಿಸಲಾಗಿದೆ.
ಘಟನೆಯ ಗಂಭೀರತೆಯನ್ನು ಪರಿಗಣಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
Subscribe to Updates
Get the latest creative news from FooBar about art, design and business.
ಬ್ಯಾಂಕ್ ಸಾಲದ ನೋಟಿಸ್ ವೈಷಮ್ಯ: ತಮ್ಮನನ್ನೇ ಕೊಂದ ಅಣ್ಣ – ಚಿಕಿತ್ಸೆ ಫಲಿಸದೆ ರಾಘವೇಂದ್ರ ಸಾವು
Brother who killed his own brother - dies without treatment
