ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ ಮಾಜಿ ಬಿಎಸ್ಎನ್ಎಲ್ ನೌಕರರೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ದಾವಣಗೆರೆ ಮೂಲದ ಸುರೇಶ್ (65) ಮೃತಪಟ್ಟ ದುರ್ದೈವಿ.
ಮೃತ ಸುರೇಶ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು, ಮಗನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ವಾಪಸಾಗುತ್ತಿದ್ದರು. ಕಾರನ್ನು ಸುರೇಶ್ ಅವರ ಮಗ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ಪ್ರಯಾಣದ ವೇಳೆ ಶಿವಮೊಗ್ಗ ತಾಲೂಕಿನ ಆಯನೂರು ರಸ್ತೆಯ ಹೊಸೂರು ದರ್ಗಾ ಸಮೀಪ ತಲುಪುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಎಡಭಾಗದಲ್ಲಿದ್ದ ಮೋರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸುರೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆಯೇ ಕುಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Subscribe to Updates
Get the latest creative news from FooBar about art, design and business.
ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು
Car accident; Former BSNL employee dies on the spot