Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಟವರಗಳ ನಿರ್ಮಾಣ ಕಾರ್ಯ : ಬಿ.ವೈ.ರಾಘವೇಂದ್ರ
ಪ್ರಮುಖ ಸುದ್ದಿ

ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಟವರಗಳ ನಿರ್ಮಾಣ ಕಾರ್ಯ : ಬಿ.ವೈ.ರಾಘವೇಂದ್ರ

Raghu ShettyBy Raghu ShettySeptember 16, 2025Updated:September 16, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

 

ಶಿವಮೊಗ್ಗ : ಕೇಂದ್ರ ಸರ್ಕಾರವು ನಾಗಾಲೋಟದಲ್ಲಿ ಬೆಳೆಯುತ್ತಿರುವ ದೇಶದ ಅಭಿವೃದ್ಧಿಗೆ ಪೂರಕವಾಗಿ ಸೌಲಭ್ಯ-ಸಹಕಾರಗಳನ್ನು ಒದಗಿಸುವುದರ ಜೊತೆಗೆ ಎದುರಾಗುವ ಎಲ್ಲಾ ರೀತಿಯ ಸಮಸ್ಯೆ ಸವಾಲುಗಳನ್ನು ಎದುರಿಸಿ ಮುನ್ನುಗ್ಗುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಹೇಳಿದರು.
ಅವರು ಬಿ.ಎಸ್.ಎನ್. ಎಲ್.ಭವನದಲ್ಲಿ ದೂರಸಂಚಾರ ಕ್ಷೇತ್ರದಲ್ಲಿ ಆಗಿರುವ ಸಾಧನೆಗಳ ಕುರಿತು ಏರ್ಪಡಿಸಲಾಗಿದ್ದ ದೂರಸಂಪರ್ಕ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸ್ವಚ್ಚ ಭಾರತದಿಂದ ಇಂದಿನ ಡಿಜಿಟಲ್ಯುಗದವರೆಗೆ ಎಲ್ಲಾ ಕ್ಷೇತ್ರಗಳಲ್ಲೂ ಡಿಜಿಟಲೀಕರಣದ ಕಾರ್ಯ ಭರದಿಂದ ಸಾಗಿದೆ. ಬಹುಸಂಖ್ಯೆಯನ್ನು ಹೊಂದಿರುವ ರಾಷ್ಟ್ರಕ್ಕೆ ಅಗತ್ಯ ಸೌಲತ್ತುಗಳನ್ನು ಒದಗಿಸುವ ದೊಡ್ಡ ಹೊಣೆಗಾರಿಕೆ ಹೊಂದಿದೆ ಎಂದರು.
ಒಂದು ಕಾಲದಲ್ಲಿ ನಷ್ಟದಲ್ಲಿ ಸಾಗುತ್ತಿದ್ದ ದೂರಸಂಚಾರ ನಿಗಮವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಕೇಂದ್ರ ಸರ್ಕಾರವು ಅಗತ್ಯ ಆರ್ಥಿಕ ನೆರವನ್ನು ಒದಗಿಸಿದೆ. ಖಾಸಗಿ ವಲಯಗಳ ತೀವ್ರ ಸ್ಪರ್ಧೆಗಳ ನಡುವೆಯೂ ನಿಗಮ ಇನ್ನಷ್ಟು ಬಂಡವಾಳ ತೊಡಗಿಸಿ ಮುನ್ನುಗ್ಗುತ್ತಿದೆ. ಸಾಧಿಸಲು ಗುರಿ ಇರುವಂತೆಯೇ ಸವಾಲುಗಳೂ ಕೂಡ ಇವೆ ಎಂದರು.
೪ ಶ್ರೇಣಿಯೊಳಗಿನ ೨೮೭ಟವರ್ಗಳ ನಿರ್ಮಾಣದ ಪೈಕಿ ೧೩೬ ಟವರ್ಗಳ ನಿರ್ಮಾಣ ಕಾರ್ಯದ ಪಟ್ಟಿ ಅಂತಿಮವಾಗಿದ್ದು, ಮುಂದಿನ ಸಭೆಯ ವೇಳೆಗೆ ಬಾಕಿ ಇರುವ ಟವರ್ಗಳ ನಿರ್ಮಾಣಕ್ಕೆ ಅವಶ್ಯಕವಾಗಿರುವ, ವಿವಿಧ ಕಾರಣಗಳಿಂದಾಗಿ ಅನುಷ್ಟಾನಕ್ಕೆ ತೊಡಕಾಗಿರುವ ಸ್ಥಳಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಂಡು ಭೂಸ್ವಾದೀನ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿ ಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕೆಂದರು.
ಹೆಚ್ಚಿನ ಜನಸಂಖ್ಯೆಯಿರುವ, ಅದರಲ್ಲೂ ವಿಶೇಷವಾಗಿ ಮಲೆನಾಡಿನ ಗುಡ್ಡಗಾಡು ಪ್ರದೇಶ ಹೊಂದಿರುವ ಸ್ಥಳಗಳಿಗೆ ಆದ್ಯತೆಯ ಮೇರೆಗೆ ಟವರ್ಗಳನ್ನು ಒದಗಿಸಿಕೊಡಬೇಕು.
ತಾಂತ್ರಿಕ ಸಮಸ್ಯೆ, ವಿದ್ಯುತ್ಸಮಸ್ಯೆ, ಮತ್ತಿತರ ಸಮಸ್ಯೆಗಳನ್ನು ಇತ್ಯರ್ಥಗೊಳಿ ಸುವಲ್ಲಿ ನಿಗಮದ ಅಧೀನ ಅಧಿಕಾರಿಗಳು ಮೇಲಾಧಿಕಾರಿ ಗಳಿಗೆ ಸಕಾಲದಲ್ಲಿ ತಿಳಿಸಿ,
ನಿಯಮಾನುಸಾರ ಟವರ್ಗಳ ಅನುಷ್ಟಾನ ಮತ್ತು ಕಾರ್ಯಾರಂಭ ಗೊಳಿಸಲು ಶ್ರಮಿಸುವಂತೆ ಸೂಚಿಸಿದರು.
ಮಲೆನಾಡಿನ ಪ್ರದೇಶವಾ ಗಿರುವ ಬಸವಾನಿ ಎಂಬ ಗ್ರಾಮದಲ್ಲಿ ಟವರ್‌ಅಳವಡಿಸಿದ ಕೇಂದ್ರದಲ್ಲಿ ಬ್ಯಾಟರಿ ಕಳುವಾಗಿದ್ದು, ಅದು ನಿಗಮದ ಸಿಬ್ಬಂಧಿಗಳ ಸಹಕಾರಿದಂದಲೇ ಆಗಿರಬಹು ದಾದ ಮಾಹಿತಿ ಇದೆ.
ಕೂಡಲೇ ನಿಗಮದ ಮಹಾಪ್ರಬಂಧಕರು ಗಮನಹರಿಸುವಂತೆ ಸೂಚಿಸಿದ ಅವರು, ಆಡುಗೋಡಿಯಲ್ಲಿ ಅರಣ್ಯ ಭೂಮಿಯಲ್ಲಿ ಟವರ್‌ಅಳವಡಿಸಲು ಅರಣ್ಯ ಭೂಮಿಯನ್ನು ಗುರುತಿಸ ಲಾಗಿದ್ದು, ತ್ವರಿತವಾಗಿ ಸಂಪರ್ಕ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸೂಚಿಸಿದರು.
ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೂರಾರು ಕೋಟಿ ರೂ.ಗಳ ವೆಚ್ಚದ ಬಹುಸಂಖ್ಯೆಯ ಟವರ್ಗಳ ನಿರ್ಮಾಣ ಕಾರ್ಯಕ್ಕೆ ಕೇಂದ್ರದಿಂದ ಹಣ ಖರ್ಚು ಮಾಡಲಾಗಿದೆ.
ಅಂತಿಮ ಹಂತದಲ್ಲಿ ರುವ ಟವರ್ಗಳ ನಿರ್ಮಾಣ ಕಾರ್ಯವನ್ನು ಮುಂದಿನ ಒಂದೆರೆಡು ತಿಂಗಳೊಳಗಾಗಿ ಪೂರ್ಣಗೊಳಿ ಸುವಂತೆ ಹಾಗೂ ಈವರೆಗೆ ಪೂರ್ಣಗೊಂಡ ಕಾಮಗಾರಿಗಳನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಅನುಕೂಲವಾಗುವಂತೆ ಕೇಂದ್ರ ಸಚಿವರ ಉಪಸ್ಥಿತಿಯಲ್ಲಿ ಉದ್ಘಾಟ ನಾ ಕಾರ್ಯ ನೆರವೇರಿಸಲಾಗು ವುದು ಎಂದರು.
ಈ ಟವರ್ಗಳ ನಿರ್ಮಾಣ, ನಿರ್ವಹಣೆ ಮತ್ತಿತರ ಕಾರ್ಯ ಗಳಲ್ಲಿ ಸಂಬಂಧಿಸಿದ ಅರಣ್ಯ, ವಿದ್ಯುತ್ಮತ್ತು ನಿಗಮದ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ. ಇದು ಸಮಸ್ಯೆಗಳ ತಕ್ಷಣದ ಇತ್ಯರ್ಥಕ್ಕೆ ಸಹಕಾರಿಯಾ ಗಲಿದೆ ಎಂದರು.
ಸಭೆಯಲ್ಲಿ ದೂರಸಂಚಾರ ನಿಗಮದ ಹಿರಿಯ ಮಹಾ ಪ್ರಬಂಧಕ ವಿನಯ್ಕುಮಾರ್ಸಿನ್ಹ, ಶ್ರೀಮತಿ ಸಮಿತಾ ಸರ್ಕಾರ್, ಶ್ರೀಮತಿ ಶ್ರೀದೇವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ಕು ಮಾರ್, ದೂರಸಂಪರ್ಕ ಸಲಹಾ ಸಮಿತಿಯ ಸದಸ್ಯರಾದ ಸುಧೀಂದ್ರ ಕಟ್ಟೆ, ಅಶೋಕಮೂರ್ತಿ, ನಾಗರಾಜ್ಬೊಬ್ಬಿಗೆ, ನಿರಂಜನ್ಟಿ.ಪಿ., ರವಿ ಕೈತೋಟ, ಶಿವಪ್ಪ ಪಿ., ಗಣಪತಿ ಬಿ., ಶಿವಯೋಗಿ ಡಿ., ಪ್ರಸನ್ನ ಕೆರೆಕೈ ಸೇರಿದಂತೆ ದೂರಸಂಪರ್ಕ ಇಲಾಖೆಯ ಅಭಿಯಂತರರು, ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026

ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ

June 4, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,308 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026332 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025285 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026278 Views
Don't Miss
ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.