Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ರೈತರನ್ನು ಒಕ್ಕಲೆಬ್ಬಿಸಬೇಡಿ : ಮಧುಬಂಗಾರಪ್ಪ
Home

ರೈತರನ್ನು ಒಕ್ಕಲೆಬ್ಬಿಸಬೇಡಿ : ಮಧುಬಂಗಾರಪ್ಪ

Raghu ShettyBy Raghu ShettyOctober 11, 2025No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನಾದಿ ಕಾಲದಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ನೋಟಿಸ್ ನೀಡುವುದು, ತೊಂದರೆ ಕೊಟ್ಟು ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬಾರದು. ಹಾಗೂ ರೈತರ ಪರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ವಯ ನಡೆದುಕೊಳ್ಳಬೇಕೆಂದು ಸಂಬAಧಿಸಿದ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಹೊಸದಾಗಿ ಒತ್ತುವರಿಗೆ ಅವಕಾಶ ಮಾಡಬಾರದು. ಹಾಗೂ 27-04-1978 ರ ಪೂರ್ವದ ಅರಣ್ಯ ಒತ್ತುವರಿವನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು ಸರ್ಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಮಂಜೂರು ಮಾಡಲಾದ ರೈತರ ಸಾಗುವಳಿ/ವಸತಿ ಭೂಮಿಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವ ಸಂಬAಧ ಕೈಗೊಂಡ ಕ್ರಮದ ಕುರಿತು ವರದಿಯನ್ನು ನೀಡಬೇಕೆಂದು ತಿಳಿಸಿದರು.

ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಜಿಲ್ಲೆಯು 6 ನೇ ಸ್ಥಾನದಲ್ಲಿದೆ. ಶೇ.96 ಸಮೀಕ್ಷೆ ಮುಗಿದಿದ್ದು, ನಗರದಲ್ಲಿ ಇನ್ನು 8000 ಮನೆಗಳು ಹಾಗೂ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮನೆಗಳು ಸಮೀಕ್ಷೆಗೆ ಬಾಕಿ ಇದ್ದು, ಈ ಸಮೀಕ್ಷೆ ನಂತರ ಶರಾವತಿ ಸಂತ್ರಸ್ತರಿಗೆ ಸಂಬಂಧಿಸಿದಂತೆ ಬಂದಿರುವ ಆಕ್ಷೇಪಣೆಗಳನ್ನು ಆಲಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಡಿಸೆಂಬರ್ ನಂತರ ಮೀಸಲು ಅರಣ್ಯ ಕ್ಷೇತ್ರದ ಕುರಿತು ಪರಿಶೀಲನೆ ನಡೆಸಲಾಗುವುದು
 ಎಸ್ ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು

ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಮಲೆನಾಡಿನ ಭಾಗದಲ್ಲಿ ರೈತನ್ನು ಒಕ್ಕಲೆಬ್ಬಿಸುವ ಸಂಬAಧ ನೋಟಿಸ್ ನೀಡಲಾಗುತ್ತಿದೆ. ಕೆಲವೆಡೆ ತೊಂದರೆ ನೀಡಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದರು.
ಸಿಸಿಎಫ್ ಹನುಮಂತಪ್ಪ ಮಾತನಾಡಿ, ಪಿಎಫ್ ಮತ್ತು ಎಂಎಫ್ ಪ್ರಕರಣಗಳು ಕಿರು ಅರಣ್ಯ ವ್ಯಾಪ್ತಿಗೆ ಬರುತ್ತವೆ. ಇವುಗಳನ್ನು ಸೆಟ್ಲ್ ಮಾಡಬಹುದು, ಈ ಸಂಬAಧ 375 ಅಧಿಸೂಚನೆಗಳಿವೆ ಎಂದು ತಿಳಿಸಿದರು.
ರಸ್ತೆ ಕಾಮಗಾರಿ ಪೂರ್ಣಗೊಳಿಸಿ : ಸಚಿವರು, ಜಿಲ್ಲೆಯ ಎಲ್ಲ ರಾಜ್ಯ ಹೈವೇಗಳು, ಮುಖ್ಯ ರಸ್ತೆಗಳನ್ನು ನವೆಂಬರ್ ಅಂತ್ಯದೊಳಗೆ ಮತ್ತು ಇತರೆ ಎಲ್ಲ ರಸ್ತೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಪಿಡಬ್ಲುö್ಯಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮಳೆ ಮುಗಿದ ತಕ್ಷಣ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಬೇಕು. ಗುಂಡಿಗಳನ್ನು ಮುಚ್ಚುವ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಗುಂಡಿಗಳಿAದಾಗಿ ದ್ವಿಚಕ್ರ ವಾಹನಗಳ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಸಾವು-ನೋವು ಸಂಭವಿಸುತ್ತಿದೆ. ಆದ್ದರಿಂದ ಶೀಘ್ರವಾಗಿ ಗುಂಡಿಗಳನ್ನು ಮುಚ್ಚಬೇಕು ಮತ್ತು ರಸ್ತೆಯ ಎಡ್ಜ್ ಹಾಗೂ ಮಧ್ಯಭಾಗವನ್ನು ಮಾರ್ಕಿಂಗ್ ಮಾಡಬೇಕೆಂದು ಸೂಚಿಸಿದ ಅವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು. ಹಾಗೂ ಎನ್‌ಹೆಚ್ ಕಾಮಗಾರಿಗಳನ್ನು ನಿಗದಿತ ವೇಳೆಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದರು.
ನೀರಾವರಿ ಇಲಾಖೆ : ಸೊರಬ ತಾಲ್ಲೂಕಿನ ಗುಡುವಿ, ಯಡಗೊಪ್ಪ, ದಂಡಾವತಿ ಮತ್ತು ವರದಾ ನದಿಗಳಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ರೂ.160 ಕೋಟಿ ಮೊತ್ತದ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಬೇಕು. ಹಾಗೂ ಕಾಲುಸಂಕಗಳ ಕಾಮಗಾರಿಯನ್ನು ಸಹ ಕೈಗೆತ್ತಿಕೊಳ್ಳಬೇಕು. ಅಧಿಕಾರಿಗಳ ನಡುವೆ ಸಮನ್ವಯತೆ ಇದ್ದಲ್ಲಿ ಕಾಮಗಾರಿ ಕ್ಷಿಪ್ರಗತಿಯಲ್ಲಿ ಆಗಲು ಸಾಧ್ಯವಾಗುತ್ತದೆ. ಆದ್ದರಿಂದ ಎಲ್ಲರೂ ಒಂದು ತಂಡದAತೆ ಸಮನ್ವಯದೊಂದಿಗೆ ಕೆಲಸ ಮಾಡಬೇಕೆಂದರು.
ಸೊರಬ ತಾಲ್ಲೂಕು ಮಾವಿನ ಹೊಳೆ, ಕೆರೆಹಳ್ಳಿ, ಜಂಗಿನಕೊಪ್ಪ ಗ್ರಾಮಗಳಲ್ಲಿ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಮತ್ತು ಬ್ಯಾರೇಜ್ ನಿರ್ಮಾಣ ಕಾಮಗಾರಿಗಳ ಕುರಿತು ವರದಿ ಪಡೆದುಕೊಂಡರು.
ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಘೋಷಿತವಾಗಿರುವ ಕೊಳಚೆ ಪ್ರದೇಶಗಳ ಕುರಿತು ಪ್ರಗತಿ ಪರಿಶೀಲಿಸಿದ ಸಚಿವರು, ಗ್ರಾಮೀಣ ಭಾಗದ ಕೊಳಚೆ ಪ್ರದೇಶಗಳಲ್ಲಿನ ಮನೆಗಳಿಗೆ ಹಕ್ಕುಪತ್ರ ನೀಡುವುದು ಹಾಗೂ ನಗರ ಪ್ರದೇಶದಲ್ಲಿನ ಕೊಳಚೆ ಪ್ರದೇಶಗಳಲ್ಲಿನ ಮನೆಗಳಿಗೆ 94 ಸಿ ಮತ್ತು ಸಿಸಿ ನೀಡುವ ಕುರಿತು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಶಾಸಕರು, ಸಾಗರದ ಕೊಳಚೆ ಪ್ರದೇಶದಲ್ಲಿನ ಮನೆ ನಿರ್ಮಾಣ ಕಾಮಗಾರಿ ನಿಂತು 12 ವರ್ಷ ಆಯ್ತು. 150 ಮನೆಗಳ ಕೆಲಸ ಬಾಕಿ ಇದ್ದು, ಶೀಘ್ರದಲ್ಲಿ ಈ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದರು.
ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮಾತನಾಡಿ, ಶಿವಮೊಗ್ಗ ಮಹಾನಗರಪಾಲಿಕೆಯ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿ ಮಹಾನಗರಪಾಲಿಕೆ ಒಡೆತನಕ್ಕೆ ಸೇರಿದ ನಿವೇಶನಗಳಲ್ಲಿ 40 ವರ್ಷಗಳಿಂದ ವಾಸ ಮಾಡುತ್ತಿರುವ ಬಡ ಕುಟುಂಬಗಳ ಮನೆಗಳನ್ನು ಸಕ್ರಮಗೊಳಿಸುವ ಸಂಬAಧ 9000 ಅರ್ಜಿಗಳನ್ನು ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಚಿವರು, ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿಸಬೇಕು. ಯುದ್ದೋಪಾದಿಯಲ್ಲಿ ಈ ಕಾರ್ಯ ಕೈಗೊಂಡು ನವೆಂಬರ್ ಅಂತ್ಯದೊಳಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅಪಘಾತ, ಅನಾಹುತಗಳ ಸಂಖ್ಯೆ ಹೆಚ್ಚಲಿದೆ ಎಂದು ತಿಳಿಸಿದರು.
ಸಚಿವರು ಜಿಲ್ಲೆಯಲ್ಲಿ 62 ಪ್ರವಾಸಿ ತಾಣಗಳಿದ್ದು ಈ ಕುರಿತು ಹೋರ್ಡಿಂಗ್, ಮಾಹಿತಿ ಫಲಕಗಳ ಮೂಲಕ ಪ್ರಚಾರ ಮಾಡಬೇಕು ಎಂದು ತಿಳಿಸಿದರು.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,274 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

By Raghu ShettyJuly 28, 20260

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.