ಶಿವಮೊಗ್ಗ:
ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನಕಲಿ (ಫೇಕ್) ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಲಭ್ಯ ಮಾಹಿತಿಯ ಪ್ರಕಾರ, ನಿಖಿಲ್ ಬಿ. ಅವರ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಯಿಂದ ಮೆಸೆಂಜರ್ ಮೂಲಕ ಜನರಿಗೆ ಸಂದೇಶ ಕಳುಹಿಸಿ ಪರಿಚಯ ಬೆಳೆಸಲು ಪ್ರಯತ್ನಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸಿ ಸಾರ್ವಜನಿಕರ ವಿಶ್ವಾಸ ಗಳಿಸುವುದು ಹಾಗೂ ವೈಯಕ್ತಿಕ ಮಾಹಿತಿ ಸಂಗ್ರಹಿಸುವಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅಧಿಕಾರಿಯ ಹೆಸರು, ಹುದ್ದೆ ಅಥವಾ ಫೋಟೋ ಕಂಡ ತಕ್ಷಣ ಖಾತೆ ಅಧಿಕೃತ ಎಂದು ನಂಬದೇ ಅದರ ನೈಜತೆಯನ್ನು ಪರಿಶೀಲಿಸಿಕೊಳ್ಳಬೇಕು. ವಿಶೇಷವಾಗಿ ಹಣಕಾಸು ಸಹಾಯ, ವೈಯಕ್ತಿಕ ದಾಖಲೆಗಳು, ಬ್ಯಾಂಕ್ ಮಾಹಿತಿ ಅಥವಾ ಇತರೆ ಸೂಕ್ಷ್ಮ ಮಾಹಿತಿಗಳನ್ನು ಕೇಳಿದಲ್ಲಿ ಯಾವುದೇ ಕಾರಣಕ್ಕೂ ಹಂಚಿಕೊಳ್ಳಬಾರದು ಎಂದು ತಿಳಿಸಲಾಗಿದೆ.
ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರು ಸ್ಪಷ್ಟನೆ ನೀಡಿದ್ದು, ತಮ್ಮ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಫೇಸ್‌ಬುಕ್ ಖಾತೆ ನಕಲಿಯಾಗಿದ್ದು, ಸಾರ್ವಜನಿಕರು ಆ ಖಾತೆಯನ್ನು ಫಾಲೋ ಮಾಡಬಾರದು ಹಾಗೂ ಅಲ್ಲಿಂದ ಬರುವ ಯಾವುದೇ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ ಅನುಮಾನಾಸ್ಪದ ಖಾತೆಗಳ ಕುರಿತು ಸಂಬಂಧಿತ ಸಾಮಾಜಿಕ ಜಾಲತಾಣದಲ್ಲಿ ದೂರು ದಾಖಲಿಸುವುದು ಹಾಗೂ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಕರೆ ನೀಡಲಾಗಿದೆ.
Subscribe to Updates
Get the latest creative news from FooBar about art, design and business.
ಎಸ್‌ಪಿ ಹೆಸರಿನಲ್ಲಿ ಫೇಕ್ ಫೇಸ್‌ಬುಕ್ ಐಡಿ ಸೃಷ್ಟಿ: ಸಂದೇಶಗಳಿಗೆ ಪ್ರತಿಕ್ರಿಯಿಸದಂತೆ ಸೂಚನೆ
Fake Facebook ID in the name of District Protection Officer Nikhil B.: Warning to the public

