Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್: ‘ಯುಗ್ಮಾ ಟೆಕ್‌ಫೆಸ್ಟ್-2.0’ಗೆ ಸಜ್ಜು
ಪ್ರಮುಖ ಸುದ್ದಿ

ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್: ‘ಯುಗ್ಮಾ ಟೆಕ್‌ಫೆಸ್ಟ್-2.0’ಗೆ ಸಜ್ಜು

Gearing up for 'Yugma Techfest-2.0'
Raghu ShettyBy Raghu ShettyJuly 22, 2026No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ: ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜುಲೈ 24 ಮತ್ತು 25ರಂದು ‘ಯುಗ್ಮಾ ಟೆಕ್‌ಫೆಸ್ಟ್-2.0 ಮೇದದೃಷ್ಟಿ’ ರಾಷ್ಟ್ರಮಟ್ಟದ ಕೃತಕ ಬುದ್ಧಿಮತ್ತೆ (ಎಐ) ಹ್ಯಾಕಥಾನ್ ಆಯೋಜಿಸಲಾಗುತ್ತಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ತಿಳಿಸಿದ್ದಾರೆ.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿರುವ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು, ಅವರಲ್ಲಿ ಸೃಜನಶೀಲ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ನೈಜ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಬೆಳೆಸುವುದು ಹ್ಯಾಕಥಾನ್‌ನ ಪ್ರಮುಖ ಉದ್ದೇಶವಾಗಿದೆ ಎಂದರು.

ಎರಡು ದಿನಗಳ ಕಾಲ ನಿರಂತರವಾಗಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ ಹಾಗೂ ವಿವಿಧ ರಾಜ್ಯಗಳ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ತಂಡಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಹ್ಯಾಕಥಾನ್‌ನಲ್ಲಿ ವಿದ್ಯಾರ್ಥಿಗಳಿಗೆ ಎರಡು ಪ್ರಮುಖ ವಿಷಯಗಳ ಕುರಿತು ಸವಾಲುಗಳನ್ನು ನೀಡಲಾಗುತ್ತದೆ. ಮೊದಲ ವಿಭಾಗದಲ್ಲಿ ‘ಕೃತಕ ಬುದ್ಧಿಮತ್ತೆ ಮೂಲಕ ವೈದ್ಯಕೀಯ ಚಿತ್ರಗಳ ವಿಶ್ಲೇಷಣೆ ಮತ್ತು ಸುಧಾರಣೆ’ ಎಂಬ ವಿಷಯದಡಿ ಎಕ್ಸ್-ರೇ, ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್‌ಗಳಂತಹ ವೈದ್ಯಕೀಯ ಚಿತ್ರಗಳನ್ನು ವಿಶ್ಲೇಷಿಸಿ ರೋಗ ಪತ್ತೆ, ಅಂಗಾಂಗಗಳ ಗುರುತಿಸುವಿಕೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಹಕಾರಿಯಾಗುವ ನವೀನ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಸವಾಲು ಇರಲಿದೆ.

ಎರಡನೇ ವಿಭಾಗದಲ್ಲಿ ‘ಕೃತಕ ಬುದ್ಧಿಮತ್ತೆ ಆಧಾರಿತ ವಸ್ತು ಗುರುತಿಸುವಿಕೆ ತಂತ್ರಜ್ಞಾನ’ ವಿಷಯದಡಿ ನೈಜ ಪರಿಸರದಲ್ಲಿರುವ ವಸ್ತುಗಳನ್ನು ಗುರುತಿಸುವ ಹಾಗೂ ವರ್ಗೀಕರಿಸುವ ಬುದ್ಧಿವಂತ ವ್ಯವಸ್ಥೆಗಳನ್ನು ರೂಪಿಸುವ ಸವಾಲು ನೀಡಲಾಗುತ್ತದೆ. ಸ್ವಯಂಚಾಲಿತ ವಾಹನಗಳು, ಭದ್ರತಾ ವ್ಯವಸ್ಥೆಗಳು, ಕೈಗಾರಿಕಾ ಗುಣಮಟ್ಟ ಪರಿಶೀಲನೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಉಪಯುಕ್ತವಾಗುವ ಪರಿಹಾರಗಳನ್ನು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಲಿದ್ದಾರೆ.

ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳ ರೂಪದಲ್ಲಿ ಒಟ್ಟು ಸುಮಾರು ₹2 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 24ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಖ್ಯಾತ ಉದ್ಯಮಿ ಎಸ್. ರುದ್ರೇಗೌಡ ಅವರು ಚಾಲನೆ ನೀಡಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಜುಲೈ 25ರಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕಿ ಡಾ. ಅರ್ಚನಾ ಮತೂರ್ ಸಮಾರೋಪ ಭಾಷಣ ಮಾಡಲಿದ್ದಾರೆ. ಎನ್‌ಇಎಸ್ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಡಾ. ವೈ. ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಘಟನಾ ಸಮಿತಿ ಸದಸ್ಯರಾದ ಡಾ. ರಾಘವೇಂದ್ರ ಆರ್.ಜೆ., ಡಾ. ಪವನ್ ಕುಮಾರ್ ಎಂ.ಪಿ., ಡಾ. ಸಂಜೀವ್ ಕುಂಟೆ, ಅರುಣ್ ಕುಮಾರ್ ಪಿ., ಮನೀಷಾ ಕೆ.ಎಂ. ಹಾಗೂ ವಿಶೃತ ರಾಣಿ ಎಸ್.ಎನ್. ಉಪಸ್ಥಿತರಿದ್ದರು.

You’re using our basic model. Log in or sign up for more intelligence.
Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

July 24, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,272 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

By Raghu ShettyJuly 27, 20260

“ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ಲಾಠಿಚಾರ್ಜ್‌ಗೆ ಅಮಿತ್ ಶಾ ಹೊಣೆ,…

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

July 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.