ಶಿವಮೊಗ್ಗ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿ 10 ಗೋವುಗಳನ್ನು ರಕ್ಷಿಸಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದ ವೇಳೆ 10 ಗೋವುಗಳು ಪತ್ತೆಯಾಗಿವೆ. ಬಳಿಕ ಕಾರ್ಯಕರ್ತರು ಗೋವುಗಳನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ಶಿವಮೊಗ್ಗದ ಮಹಾವೀರ್ ಗೋಶಾಲೆಗೆ ಕಳುಹಿಸಿದ್ದಾರೆ.
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
